West Bengal Violence: ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಕೊನೆಗೊಳಿಸಬೇಕು: ಪಶ್ಚಿಮ ಬಂಗಾಳದ ರಾಜ್ಯಪಾಲ

ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶುಕ್ರವಾರ ಭಂಗೋರ್‌ಗೆ ಭೇಟಿ ನೀಡಿದ್ದು, ರಾಜ್ಯದಲ್ಲಿ ರಾಜಕೀಯ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ಹೇಳಿದರು

West Bengal Violence: ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಕೊನೆಗೊಳಿಸಬೇಕು: ಪಶ್ಚಿಮ ಬಂಗಾಳದ ರಾಜ್ಯಪಾಲ
ಡಾ.ಸಿ.ವಿ.ಆನಂದ ಬೋಸ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 16, 2023 | 4:08 PM

ಕೋಲ್ಕತ್ತಾ: ಪಶ್ಚಿಮ ಬಂಗಾಳ(West Bengal) ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶುಕ್ರವಾರ ಭಂಗೋರ್‌ಗೆ ಭೇಟಿ ನೀಡಿದ್ದು, ರಾಜ್ಯದಲ್ಲಿ ರಾಜಕೀಯ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ಹೇಳಿದರು, ಭಂಗೋರ್‌ದಲ್ಲಿ ಎರಡು ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ನಡೆದ ಘರ್ಷಣೆ ಸಂಬಂಧಿಸಿದಂತೆ ಈ ಹೇಳಿಕೆಯನ್ನು ನೀಡಿದ್ದಾರೆ. ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಪರಿಸ್ಥಿತಿ ಕುರಿತು ಈಗಾಗಲೇ ಚರ್ಚಿಸಿರುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ.

ಬಂಗಾಳದ ಕೆಲವು ಭಾಗಗಳಲ್ಲಿ ಕೆಲವು ಅನಪೇಕ್ಷಿತ ಘಟನೆಗಳು ಸಂಭವಿಸಿವೆ. ನಾನು ಅವುಗಳ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಹಿಂಸಾಚಾರವನ್ನು ಸಹಿಸುವುದಿಲ್ಲ ಮತ್ತು ಇಲ್ಲಿಗೆ ಅವುಗಳನ್ನು ಕೊನೆಗೊಳಿಸಬೇಕಾಗಿದೆ ಎಂದು ಭಂಗೋರ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ರಾಜ್ಯಪಾಲರು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: West Bengal Violence: ಸತ್ಯಶೋಧನೆಗಾಗಿ ಪಶ್ಚಿಮ ಬಂಗಾಳಕ್ಕೆ ನಾಲ್ವರು ಅಧಿಕಾರಿಗಳ ತಂಡ ಕಳುಹಿಸಿದ ಕೇಂದ್ರ ಸರ್ಕಾರ

ಗುರುವಾರ ರಾಜಕೀಯವಾಗಿ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದು, ಒಬ್ಬರು ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಖಂಡಿತವಾಗಿಯೂ ಸಂವಿಧಾನದ ಅಡಿಯಲ್ಲಿ ರಾಜ್ಯಪಾಲರಿಂದ ಏನನ್ನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದ ಖಂಡಿತ ಅದನ್ನು ಮಾಡಲಾಗುತ್ತದೆ” ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ