AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಭವನವನ್ನು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ರಾಜಭವನವನ್ನು ಸ್ಫೋಟಿಸುವುದಾಗಿ ಎಚ್ಚರಿಕೆ ಸಂದೇಶ ರವಾನೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ನಿಮ್ಮ ಕಟ್ಟಡದ ಒಳಗೆ ಸ್ಫೋಟಕ ಸಾಧನಗಳನ್ನು ಇರಿಸಿದ್ದೇವೆ. ಅನೇಕ ಮಂದಿ ಮಂದಿ ಸಾಯುತ್ತಾರೆ, ರಕ್ತದ ಮಡುವಿನಲ್ಲಿ ಬೀಳುತ್ತೀರಿ ಎಂದು ಬೆದರಿಕೆ ಹಾಕಿದ್ದಾರೆ.

ರಾಜಭವನವನ್ನು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ
ಬಾಂಬ್​ ಸ್ಫೋಟ
Follow us
ನಯನಾ ರಾಜೀವ್
|

Updated on:May 01, 2024 | 8:09 AM

ಪಶ್ಚಿಮ ಬಂಗಾಳದ ರಾಜಭವನ(Raj Bhavan)ವನ್ನು ಸ್ಫೋಟಿಸುವುದಾಗಿ ಕಿಡಿಗೇಡಿಗಳು ಕರೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾವು ಟೆರರೂಸರ್ಸ್​ ಎಂಬ ಭಯೋತ್ಪಾದಕ ಗುಂಪಿನವರು. ನಿಮ್ಮ ಕಟ್ಟಡದ ಒಳಗೆ ಸ್ಫೋಟಕ ಸಾಧನಗಳನ್ನು ಇರಿಸಿದ್ದೇವೆ. ಅನೇಕ ಮಂದಿ ಮಂದಿ ಸಾಯುತ್ತಾರೆ, ರಕ್ತದ ಮಡುವಿನಲ್ಲಿ ಬೀಳುತ್ತೀರಿ ಎಂದು ಬೆದರಿಕೆ ಹಾಕಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಸೆಲ್ಯುಲಾರ್ ಜೈಲು ಮತ್ತು ಬಿಹಾರ ರಾಜಭವನಕ್ಕೂ ಇದೇ ರೀತಿಯ ಸಂದೇಶಗಳು ಬಂದಿವೆ ಎಂದು ವರದಿಯಾಗಿದೆ. ಆದರೆ, ಕೋಲ್ಕತ್ತಾ ಪೊಲೀಸರು ಈ ಸಂದೇಶವನ್ನು ಹುಸಿ ಎಂದು ಕರೆದಿದ್ದಾರೆ. ಸಂದೇಶ ಕಳುಹಿಸಿದವರ ಬಗ್ಗೆ ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.

ಗಮನಾರ್ಹವೆಂದರೆ, ದೇಶದ ವಿವಿಧ ನಗರಗಳಲ್ಲಿರುವ ಸರ್ಕಾರಿ ಕಟ್ಟಡಗಳು, ಕಚೇರಿಗಳು, ಶಾಲೆಗಳಂತಹ ಹಲವಾರು ಸಂಸ್ಥೆಗಳು ಕಳೆದ ಕೆಲವು ತಿಂಗಳುಗಳಿಂದ ಇದೇ ರೀತಿಯ ಬೆದರಿಕೆ ಮೇಲ್‌ಗಳನ್ನು ಸ್ವೀಕರಿಸಿವೆ.

ದೆಹಲಿ ಶಾಲೆಗೆ ಬಾಂಬ್ ಬೆದರಿಕೆ ರಾಷ್ಟ್ರ ರಾಜಧಾನಿಯ ಆರ್‌ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಇನ್‌ಸ್ಟಿಟ್ಯೂಟ್ ಆವರಣದಲ್ಲಿ ಬಾಂಬ್ ಇರುವ ಎಚ್ಚರಿಕೆಯ ಕರೆ ಬಂದಿದೆ. ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮಾಹಿತಿ ಲಭಿಸಿದೆ. ದೆಹಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಶೋಧ ಕಾರ್ಯ ನಡೆಯುತ್ತಿದೆ ಎಂದು ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಮತ್ತಷ್ಟು ಓದಿ: Bomb Threat: ದೆಹಲಿಯ ಚಾಚಾ ನೆಹರು ಆಸ್ಪತ್ರೆಗೆ ಬಾಂಬ್​ ಬೆದರಿಕೆ

ಈ ವರ್ಷದ ಫೆಬ್ರವರಿಯಲ್ಲಿ, ರಾಷ್ಟ್ರ ರಾಜಧಾನಿ ಆರ್‌ಕೆ ಪುರಂನಲ್ಲಿರುವ ದೆಹಲಿ ಪೊಲೀಸ್ ಶಾಲೆಗೆ ಬಾಂಬ್ ಬೆದರಿಕೆ ಬಂದ ನಂತರ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪೊಲೀಸರು ತಪಾಸಣೆ ನಡೆಸಿ ಅನುಮಾನಾಸ್ಪದವಾಗಿ ಏನೂ ಸಿಗದ ನಂತರ ಬೆದರಿಕೆಯನ್ನು ಹುಸಿ ಎಂದು ಘೋಷಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:09 am, Wed, 1 May 24

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ