ಪಶ್ಚಿಮ ಬಂಗಾಳದ ರಾಜಭವನ(Raj Bhavan)ವನ್ನು ಸ್ಫೋಟಿಸುವುದಾಗಿ ಕಿಡಿಗೇಡಿಗಳು ಕರೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾವು ಟೆರರೂಸರ್ಸ್ ಎಂಬ ಭಯೋತ್ಪಾದಕ ಗುಂಪಿನವರು. ನಿಮ್ಮ ಕಟ್ಟಡದ ಒಳಗೆ ಸ್ಫೋಟಕ ಸಾಧನಗಳನ್ನು ಇರಿಸಿದ್ದೇವೆ. ಅನೇಕ ಮಂದಿ ಮಂದಿ ಸಾಯುತ್ತಾರೆ, ರಕ್ತದ ಮಡುವಿನಲ್ಲಿ ಬೀಳುತ್ತೀರಿ ಎಂದು ಬೆದರಿಕೆ ಹಾಕಿದ್ದಾರೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಸೆಲ್ಯುಲಾರ್ ಜೈಲು ಮತ್ತು ಬಿಹಾರ ರಾಜಭವನಕ್ಕೂ ಇದೇ ರೀತಿಯ ಸಂದೇಶಗಳು ಬಂದಿವೆ ಎಂದು ವರದಿಯಾಗಿದೆ. ಆದರೆ, ಕೋಲ್ಕತ್ತಾ ಪೊಲೀಸರು ಈ ಸಂದೇಶವನ್ನು ಹುಸಿ ಎಂದು ಕರೆದಿದ್ದಾರೆ. ಸಂದೇಶ ಕಳುಹಿಸಿದವರ ಬಗ್ಗೆ ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.
ಗಮನಾರ್ಹವೆಂದರೆ, ದೇಶದ ವಿವಿಧ ನಗರಗಳಲ್ಲಿರುವ ಸರ್ಕಾರಿ ಕಟ್ಟಡಗಳು, ಕಚೇರಿಗಳು, ಶಾಲೆಗಳಂತಹ ಹಲವಾರು ಸಂಸ್ಥೆಗಳು ಕಳೆದ ಕೆಲವು ತಿಂಗಳುಗಳಿಂದ ಇದೇ ರೀತಿಯ ಬೆದರಿಕೆ ಮೇಲ್‌ಗಳನ್ನು ಸ್ವೀಕರಿಸಿವೆ.
ದೆಹಲಿ ಶಾಲೆಗೆ ಬಾಂಬ್ ಬೆದರಿಕೆ
ರಾಷ್ಟ್ರ ರಾಜಧಾನಿಯ ಆರ್‌ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಇನ್‌ಸ್ಟಿಟ್ಯೂಟ್ ಆವರಣದಲ್ಲಿ ಬಾಂಬ್ ಇರುವ ಎಚ್ಚರಿಕೆಯ ಕರೆ ಬಂದಿದೆ. ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮಾಹಿತಿ ಲಭಿಸಿದೆ. ದೆಹಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಶೋಧ ಕಾರ್ಯ ನಡೆಯುತ್ತಿದೆ ಎಂದು ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.
ಮತ್ತಷ್ಟು ಓದಿ: Bomb Threat: ದೆಹಲಿಯ ಚಾಚಾ ನೆಹರು ಆಸ್ಪತ್ರೆಗೆ ಬಾಂಬ್ ಬೆದರಿಕೆ
ಈ ವರ್ಷದ ಫೆಬ್ರವರಿಯಲ್ಲಿ, ರಾಷ್ಟ್ರ ರಾಜಧಾನಿ ಆರ್‌ಕೆ ಪುರಂನಲ್ಲಿರುವ ದೆಹಲಿ ಪೊಲೀಸ್ ಶಾಲೆಗೆ ಬಾಂಬ್ ಬೆದರಿಕೆ ಬಂದ ನಂತರ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.
ಕಳೆದ ವರ್ಷ ಮೇ ತಿಂಗಳಲ್ಲಿ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪೊಲೀಸರು ತಪಾಸಣೆ ನಡೆಸಿ ಅನುಮಾನಾಸ್ಪದವಾಗಿ ಏನೂ ಸಿಗದ ನಂತರ ಬೆದರಿಕೆಯನ್ನು ಹುಸಿ ಎಂದು ಘೋಷಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:09 am, Wed, 1 May 24