ಮುಂಬರಲಿರುವ ಭಾರತೀಯ ಕುಸ್ತಿ ಫೆಡರೇಷನ್ನ ಚುನಾವಣಾ ಕಣದಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್(Brij Bhushan Sharan Singh) ಹಾಗೂ ಮಗ ಕರಣ್ ಹೆಸರನ್ನು ಕೈಬಿಡಲಾಗಿದೆ. ಆಗಸ್ಟ್ 12 ರಂದು ನಡೆಯಲಿರುವ ಕುಸ್ತಿ ಫೆಡರೇಷನ್ ಚುನಾವಣಾ ಕಣದಿಂದ ಕೈಬಿಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬ್ರಿಜ್ ಭೂಷಣ್ ಅವರ ಕಿರಿಯ ಪುತ್ರ ಉತ್ತರ ಪ್ರದೇಶ ಕುಸ್ತಿ ಸಂಘದ ಅಧ್ಯಕ್ಷರಾಗಿರುವ ಕರಣ್ ಹೆಸರನ್ನು ಅಂತಿಮ ಪಟ್ಟಿಯಿಂದ ಕೈ ಬಿಡಲಾಗಿದೆ.
ಚುನಾವಣಾ ಅಧಿಕಾರಿ ನಿವೃತ್ತ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅರ್ಹ ಮತದಾರರ ಪಟ್ಟಿಯನ್ನು ಅಂತಿಮ ಪಡಿಸಿದ್ದಾರೆ.
ಇವರಿಬ್ಬರ ಬಲದಾಗಿ ಪ್ರೇಮ್ ಕುಮಾರ್ ಮಿಶ್ರಾ ಮತ್ತು ಸಂಜಯ್ ಸಿಂಗ್ ಮತದಾನ ಮಾಡಲಿದ್ದಾರೆ.
ಆದರೆ ಬ್ರಿಜ್ ಭೂಷಣ್ ಅಳಿಯ ವಿಶಾಲ ಪ್ರತಾಪ್ ಸಿಂಗ್ ಹೆಸರು ಪಟ್ಟಿಯಲ್ಲಿದೆ. ರಾಜ್ಯದ ಪರವಾಗಿ ವಿನಯ್ ಕುಮಾರ್ ಸಿಂಗ್ ಜತೆ ವಿಶಾಲ್ ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ.
ಮತ್ತಷ್ಟು ಓದಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ಮಧ್ಯಂತರ ಜಾಮೀನು
2023ರಿಂದ 2026ರ ಅವಧಿಗೆ ಪದಾಧಿಕಾರಿ ಹುದ್ದೆಗಳಿಗೆ ಸ್ಪರ್ಧಿಸಲು ಅರ್ಹತೆ ಪಡೆದವರ ಪಟ್ಟಿಯಲ್ಲಿ , ರೈಲ್ವೆ ಕ್ರೀಡಾ ಉತ್ತೇಜನ ಮಂಡಳಿಯ ಕಾರ್ಯದರ್ಶಿ ಪ್ರೇಮ್ ಚಂದ್ ಲೊಚಾಬ್ ಅವರ ಹೆಸರು ಕೂಡ ಒಂದು.
ಹರ್ಯಾಣ ಹಾಗೂ ರಾಜಸ್ಥಾನದ ಜಾಟ್ ಸಮುದಾಯದ ಮೇಲೆ ಉತ್ತಮ ನಿಯಂತ್ರಣ ಹೊಂದಿರುವ ಇವರು ಗುಜರಾತ್ನಿಂದ ಐಡಿ ನಾನಾವತಿ ಅವರೊಂದಿಗೆ ಮತ ಚಲಾಯಿಸುವ ಅಧಿಕಾರ ಪಡೆದಿದ್ದಾರೆ.
ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಹಾಗೆಯೇ ಅವರನ್ನು ಅಧಿಕಾರದಿಂದ ಕೆಳಗಿಳಿಸುವಂತೆ ಹಾಗೂ ಬಂಧಿಸುವಂತೆ ಒತ್ತಾಯಿಸಿ ತಿಂಗಳುಗಳ ಕಾಲ ನಿರಂತರ ಪ್ರತಿಭಟನೆ ನಡೆಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ