AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಜನ್ ಕ್ಲಬ್ಬಿಂಗ್‌ಗೆ ಪ್ರಧಾನಿಗೆ ಸಮಯವಿದೆ, ಪ್ರಜಾಪ್ರಭುತ್ವದ ಪ್ರಶ್ನೆಗೆ ಮೌನವೇಕೆ?’; ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ನಿನ್ನೆ ಸಂಜೆ ನವದೆಹಲಿಯಲ್ಲಿ ನಡೆದ ‘ಭಜನ್ ಕ್ಲಬ್ಬಿಂಗ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದನ್ನು ಕಟುವಾಗಿ ಟೀಕಿಸಿರುವ ಕರ್ನಾಟಕದ ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಗಂಭೀರ ರಾಷ್ಟ್ರೀಯ ವಿಚಾರಗಳ ಬಗ್ಗೆ ಉತ್ತರಿಸಲು ಪ್ರಧಾನಿಯವರಿಗೆ ಸಮಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಆಯೋಗದ ಸುತ್ತ ಸುತ್ತುವರೆದಿರುವ ವಿವಾದಗಳು ಹಾಗೂ ಎಸ್‍ಐಆರ್ ಪ್ರಕ್ರಿಯೆಯ ಕುರಿತು ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

‘ಭಜನ್ ಕ್ಲಬ್ಬಿಂಗ್‌ಗೆ ಪ್ರಧಾನಿಗೆ ಸಮಯವಿದೆ, ಪ್ರಜಾಪ್ರಭುತ್ವದ ಪ್ರಶ್ನೆಗೆ ಮೌನವೇಕೆ?’; ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ
Priyank Gandhi And Pm Modi
ಸುಷ್ಮಾ ಚಕ್ರೆ
|

Updated on: Sep 26, 2026 | 3:17 PM

Share

ನವದೆಹಲಿ, ಸೆಪ್ಟೆಂಬರ್ 26: ಶುಕ್ರವಾರ ಸಂಜೆ ನವದೆಹಲಿಯಲ್ಲಿ ನಡೆದ ‘ಭಜನ್ ಕ್ಲಬ್ಬಿಂಗ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಿ, ಜೆನ್​-ಜಿ ಜೊತೆ ಆಧುನಿಕ ಭಜನೆಯನ್ನು ಎಂಜಾಯ್ ಮಾಡಿದ್ದರು. ಅವರ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಿದ್ದನ್ನು ಕಟುವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ, ಸಾಂವಿಧಾನಿಕ ಸಂಸ್ಥೆಗಳು ಹಾಗೂ ಪ್ರಜಾಪ್ರಭುತ್ವದ ಮೇಲಿನ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲು ಪ್ರಧಾನಿಯವರಿಗೆ ಸಮಯವಿಲ್ಲ, ಆದರೆ ಭಜನ್ ಕ್ಲಬ್ಬಿಂಗ್​​ನಲ್ಲಿ ಪಾಲ್ಗೊಳ್ಳಲು ಸಮಯವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದು ಸಾಮಾಜಿಕ ಜಾಲತಾಣ ‘ಎಕ್ಸ್’ನ ತಮ್ಮ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯ ಚುನಾವಣಾ ಆಯುಕ್ತರ ಸುತ್ತಲಿನ ವಿವಾದಗಳು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತು ಪ್ರಧಾನಿ ಮೋದಿಯವರ ಮೌನವನ್ನು ಪ್ರಶ್ನಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಭಜನ್ ಕ್ಲಬ್ಬಿಂಗ್’ ಕಾರ್ಯಕ್ರಮಕ್ಕೆ ಹಾಜರಾಗಲು ಸಮಯವಿದೆ, ಆದರೆ ಚುನಾವಣಾ ಆಯೋಗದ ಮೂಲಕ ಪ್ರಜಾಪ್ರಭುತ್ವದ ಕ್ಲಬ್ಬಿಂಗ್ ಕುರಿತಾದ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲು ಸಮಯವಿಲ್ಲ” ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜತೆಗಿನ ಮಹಿಳೆಯ ಮಾರ್ಫ್ ಫೋಟೋ ಡಿಲೀಟ್ ಮಾಡಲು ಹೈಕೋರ್ಟ್ ಆದೇಶ; ಸಿಜೆಪಿ ನಾಯಕರಿಗೂ ನೋಟಿಸ್!

ಕಳೆದ 13 ವರ್ಷಗಳಿಂದಲೂ ಪ್ರಧಾನಿ ಮೋದಿ ಇದೇ ಮಾದರಿಯನ್ನು ಅನುಸರಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. “ಕಳೆದ 13 ವರ್ಷಗಳಿಂದ ತಮ್ಮ ಸರ್ಕಾರಕ್ಕೆ ಯಾವುದೇ ಕಷ್ಟಕರ ಹಾಗೂ ಗಂಭೀರ ಪ್ರಶ್ನೆಗಳು ಎದುರಾದಾಗಲೆಲ್ಲಾ ಪ್ರಧಾನಿ ಮೋದಿಯವರಿಗೆ ಉತ್ತರ ನೀಡದೆ ಮೌನಕ್ಕೆ ಶರಣಾಗುವುದು ಅಭ್ಯಾಸವಾಗಿಬಿಟ್ಟಿದೆ. ಹಬ್ಬ, ಆಚರಣೆಗಳು ಮತ್ತು ಸಂಭ್ರಮದ ಸ್ಥಳಗಳಲ್ಲಿ ಅವರ ಉಪಸ್ಥಿತಿ ಇರುತ್ತದೆ, ಆದರೆ ಹೊಣೆಗಾರಿಕೆಯ ವಿಚಾರ ಬಂದಾಗ ಅವರ ಮೌನವೇ ಉತ್ತರವಾಗುತ್ತದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಇದನ್ನೂ ಓದಿ: ಭಜನ್ ಕ್ಲಬ್ಬಿಂಗ್​ನಲ್ಲಿ ಮೋದಿ; ಯುವಕರ ಜೊತೆ ಭಕ್ತಿಗೀತೆಗೆ ತಾಳ ಹಾಕಿದ ಪ್ರಧಾನಿ 

ಶುಕ್ರವಾರ ಸಂಜೆ ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಪಾರ್ಕ್‌ನಲ್ಲಿ ಜನಸಂಘದ ನಾಯಕ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಜೆನ್‌-ಜಿ ಯುವಜನರಿಗಾಗಿ ‘ಭಜನ್ ಕ್ಲಬ್ಬಿಂಗ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಪ್ರಧಾನಿ ಮೋದಿ ಭಾಗವಹಿಸಿ ಗಾಯಕರ ಭಕ್ತಿಗೀತೆಗಳನ್ನು ಆಲಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ
Live: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ KPCC ವತಿಯಿಂದ ಪ್ರತಿಭಟನೆ
Live: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ KPCC ವತಿಯಿಂದ ಪ್ರತಿಭಟನೆ
ತಾಂಡವ್ ರಾಮ್ ಕಂಬ್ಯಾಕ್ ಬಗ್ಗೆ ಸೂಚನೆ ಕೊಟ್ಟ ಸುದೀಪ್
ತಾಂಡವ್ ರಾಮ್ ಕಂಬ್ಯಾಕ್ ಬಗ್ಗೆ ಸೂಚನೆ ಕೊಟ್ಟ ಸುದೀಪ್
ಕಾವೇರಿ ಆರತಿ: ಉತ್ತಮ ಮಳೆ-ಬೆಳೆಗಾಗಿ ಸಾಲೂರು ಮಠದ ಶ್ರೀಗಳಿಂದ ವಿಶೇಷ ಪೂಜೆ!
ಕಾವೇರಿ ಆರತಿ: ಉತ್ತಮ ಮಳೆ-ಬೆಳೆಗಾಗಿ ಸಾಲೂರು ಮಠದ ಶ್ರೀಗಳಿಂದ ವಿಶೇಷ ಪೂಜೆ!
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಆರ್. ಪಾಟೀಲ್ ಗರಂ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಆರ್. ಪಾಟೀಲ್ ಗರಂ
ಹಾಲಿನ ದರ ಏರಿಕೆಯಾದ್ರೆ ಟೀ, ಕಾಫಿ ದರವೂ ಹೆಚ್ಚಳವಾಗುವ ಸಾಧ್ಯತೆ!
ಹಾಲಿನ ದರ ಏರಿಕೆಯಾದ್ರೆ ಟೀ, ಕಾಫಿ ದರವೂ ಹೆಚ್ಚಳವಾಗುವ ಸಾಧ್ಯತೆ!
ಮೈಸೂರು ದಸರಾ ಸಂಭ್ರಮ: ಗಜಪಡೆಗೆ ಇಂದಿನಿಂದ ಕುಶಾಲತೋಪು ತರಬೇತಿ ಆರಂಭ
ಮೈಸೂರು ದಸರಾ ಸಂಭ್ರಮ: ಗಜಪಡೆಗೆ ಇಂದಿನಿಂದ ಕುಶಾಲತೋಪು ತರಬೇತಿ ಆರಂಭ
ಕೊಪ್ಪಳದ ಗವಿಸಿದ್ದೇಶ್ವರರಿಗೂ ಮೊದಲು ದಸರಾ ಉದ್ಘಾಟಿಸಿದ್ದ ಮಠಾಧೀಶರು ಇವರು!
ಕೊಪ್ಪಳದ ಗವಿಸಿದ್ದೇಶ್ವರರಿಗೂ ಮೊದಲು ದಸರಾ ಉದ್ಘಾಟಿಸಿದ್ದ ಮಠಾಧೀಶರು ಇವರು!
ಸರ್ವೆ ಇಲಾಖೆ ಅಧಿಕಾರಿಗಳ ಚಳಿ ಬಿಡಿಸಿದ ಹಾಸನ ಡಿಸಿ ಲತಾ ಕುಮಾರಿ !
ಸರ್ವೆ ಇಲಾಖೆ ಅಧಿಕಾರಿಗಳ ಚಳಿ ಬಿಡಿಸಿದ ಹಾಸನ ಡಿಸಿ ಲತಾ ಕುಮಾರಿ !