AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT Global Summit 2024: ಅಯೋಧ್ಯೆ ತೀರ್ಪು, ರೈತರ ಚಳವಳಿ ಬಗ್ಗೆ ಓವೈಸಿ ಅಭಿಪ್ರಾಯವೇನು?

ತಮ್ಮ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಮಾತನಾಡಿದ ಅಸಾದುದ್ದೀನ್ ಓವೈಸಿ, ನಾವು ರೈತ ಚಳವಳಿಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು. ರೈತ ಚಳವಳಿ ರಾಜಕೀಯೇತರ ಚಳವಳಿ. ರೈತರ ಪ್ರತಿಭಟನೆ ರಾಜಕೀಯ ರಹಿತವಾದ ಚಳವಳಿಯಾದ ಕಾರಣ ಅವರ ಬೆಂಬಲಕ್ಕೆ ನಾವು ಅಲ್ಲಿಗೆ ಹೋಗಲಿಲ್ಲ. ನಾವು ಅಲ್ಲಿಗೆ ಹೋಗಿ ವಾತಾವರಣವನ್ನು ಹಾಳು ಮಾಡಲು ಬಯಸುವುದಿಲ್ಲ ಎಂದಿದ್ದಾರೆ.

WITT Global Summit 2024: ಅಯೋಧ್ಯೆ ತೀರ್ಪು, ರೈತರ ಚಳವಳಿ ಬಗ್ಗೆ ಓವೈಸಿ ಅಭಿಪ್ರಾಯವೇನು?
Asaduddin Owaisi
ರಶ್ಮಿ ಕಲ್ಲಕಟ್ಟ
|

Updated on: Feb 27, 2024 | 6:15 PM

Share

ದೆಹಲಿ ಫೆಬ್ರವರಿ 27: ಮಂಗಳವಾರ ಟಿವಿ9 ನೆಟ್‌ವರ್ಕ್‌ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Global Summit 2024)’ಸತ್ತಾ ಸಮ್ಮೇಳನ’ದಲ್ಲಿ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಎಐಎಂಐಎಂ ನಾಯಕ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin owaisi), ಅಯೋಧ್ಯೆ (Ayodhya) ವಿವಾದದ ಬಗ್ಗೆ ಸುಪ್ರೀಂಕೋರ್ಟಿನ (Supreme Court) ತೀರ್ಪು ನಂಬಿಕೆಯ ಆಧಾರದ ಮೇಲೆ ನೀಡಿದೆ ಎಂದು ಹೇಳಿದರು. ಅಯೋಧ್ಯೆಯಲ್ಲಿ ನಡೆದ ಹೋರಾಟ ಮಸೀದಿಯ ಬಗ್ಗೆ ಅಲ್ಲ, ಮಸೀದಿಯ ಹೊರಗಿನ ವೇದಿಕೆಯ ಬಗ್ಗೆ ಎಂದು ಅವರು ಹೇಳಿದ್ದಾರೆ.

ದೇಶದ ಅತಿದೊಡ್ಡ ನ್ಯಾಯಾಲಯವು ನಂಬಿಕೆಯ ಆಧಾರದ ಮೇಲೆ ತೀರ್ಪು ನೀಡಿದೆ. ನಂಬಿಕೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಂಡರೆ ಸಾಕ್ಷ್ಯಗಳ ಕತೆಯೇನು? ರಾಮಮಂದಿರದ (Ram mandir)ನಿರ್ಧಾರಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು ಉದ್ಭವಿಸಿವೆ. ಇನ್ನು ಬಾಬರಿ ಮಸೀದಿಯಲ್ಲಿ ವಿಗ್ರಹಗಳನ್ನು ಇಡದೇ ಇದ್ದಿದ್ದರೆ 2024ರ ಜನವರಿ 22ರಂದು ರಾಮಮಂದಿರ ಕಾರ್ಯಕ್ರಮ ನಡೆಯುತ್ತಿತ್ತೇ? ಜನರು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದರು ಆದರೆ ಡಿಸೆಂಬರ್ 6ರಂದು ಆ ಘಟನೆ ಸಂಭವಿಸಿಯೇ ಬಿಟ್ಟಿತು.

ನನ್ನ ನಂಬಿಕೆಗಿಂತ ಮತ್ತೊಬ್ಬರ ನಂಬಿಕೆ ದೊಡ್ಡದು ಎಂದು ಹೇಗೆ ಹೇಳ್ತೀರಿ: ಓವೈಸಿ

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಓವೈಸಿ, ದೇಶವು ನಂಬಿಕೆಯ ಆಧಾರದ ಮೇಲೆ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ದೇಶವು ಯಾವತ್ತೂ ಯಾವುದೇ ಧರ್ಮವನ್ನು ಹೊಂದಿಲ್ಲ, ಅದನ್ನು ಒಂದು ಧರ್ಮಕ್ಕೆ ಜೋಡಿಸಲು ಸಾಧ್ಯವಿಲ್ಲ. ನನ್ನ ನಂಬಿಕೆಗಿಂತ ಇನ್ನೊಬ್ಬರ ನಂಬಿಕೆ ದೊಡ್ಡದು ಎಂದು ಹೇಗೆ ಹೇಳುತ್ತೀರಿ? ರಾಮ ಮಂದಿರದ ಹೆಸರಿನಲ್ಲಿ ಬಿಜೆಪಿ ಸುಳ್ಳುಗಳನ್ನು ಹಬ್ಬಿಸುತ್ತಿದೆ.

ಅಯೋಧ್ಯೆಯಲ್ಲಿ ಹೋರಾಟವು ಮಸೀದಿಯ ಬಗ್ಗೆ ಅಲ್ಲ, ವೇದಿಕೆಯ ಬಗ್ಗೆ ಎಂದು ಹೇಳಿದ್ದಾರೆ. ಅಲ್ಲಿ ದೇವಸ್ಥಾನದ ಮೇಲೆ ಮಸೀದಿ ಕಟ್ಟಿರಲಿಲ್ಲ. ರಾಮ ಮಂದಿರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು ಉದ್ಭವಿಸಿವೆ. ಬಾಬರಿ ಧ್ವಂಸ ಪ್ರಕರಣದ ಯಾವುದೇ ಆರೋಪಿಗಳಿಗೆ ಇನ್ನೂ ಶಿಕ್ಷೆಯಾಗಿಲ್ಲ ಎಂದು ಓವೈಸಿ ಹೇಳಿದ್ದಾರೆ

ರೈತರ ಚಳವಳಿಗೆ ನಮ್ಮ ಬೆಂಬಲ: ಓವೈಸಿ

ತಮ್ಮ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಮಾತನಾಡಿದ ಅಸಾದುದ್ದೀನ್ ಓವೈಸಿ, ನಾವು ರೈತ ಚಳವಳಿಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು. ರೈತ ಚಳವಳಿ ರಾಜಕೀಯೇತರ ಚಳವಳಿ. ರೈತರ ಪ್ರತಿಭಟನೆ ರಾಜಕೀಯ ರಹಿತವಾದ ಚಳವಳಿಯಾದ ಕಾರಣ ಅವರ ಬೆಂಬಲಕ್ಕೆ ನಾವು ಅಲ್ಲಿಗೆ ಹೋಗಲಿಲ್ಲ. ನಾವು ಅಲ್ಲಿಗೆ ಹೋಗಿ ವಾತಾವರಣವನ್ನು ಹಾಳು ಮಾಡಲು ಬಯಸುವುದಿಲ್ಲ.

ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ನಾನು ಮೇಲೆ ದಾಳಿ ನಡೆಸುವಂತೆ ಮಾಡಿದ್ದೇನೆಯೇ? ನನ್ನ ಕಾರಿನ ಮೇಲೆ ಗುಂಡು ಹಾರಿಸಲಾಯಿತು. ನನ್ನ ಮನೆ ಮೇಲೆ ದಾಳಿ ಮಾಡಲಾಗಿದೆ. ಎಂದು ಓವೈಸಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕೇಳಿದಾಗ ಅವರು, ಹೌದು ನಾವು ಖಂಡಿತವಾಗಿಯೂ ಮೈತ್ರಿ ಮಾಡಿಕೊಳ್ಳುತ್ತೇವೆ. ನಾವು ಇನ್ನೂ ಮಾತನಾಡುತ್ತಿದ್ದೇವೆ. ಈ ಬಗ್ಗೆ ನಾವು ಈಗಲೇ ಯಾವುದನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಹಲವು ರಾಜ್ಯಗಳಲ್ಲಿ ನಮ್ಮ ಮಾತುಕತೆ ನಡೆಯುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: WITT TV9 Global Summit 2024: ಲಾರ್ಡ್ ಮೆಕಾಲೆ ಅವರ ನೀತಿಗಳ ಬಗ್ಗೆ ರಾಮ್‌ದೇವ್ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ, ಈ ಕುರಿತು ಕೇಳಿದಾಗ,ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುವುದು ನನಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ. ನಾನು ಪ್ರಧಾನಿಯಾಗುವ ಕನಸು ಕೂಡಾ ನನಗಿಲ್ಲ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ