What India Thinks Today: ಟಿವಿ9 ವೇದಿಕೆಯಲ್ಲಿ ಪಂಜಾಬ್​​​ ಸ್ಥಿತಿಯ ಬಗ್ಗೆ ಚರ್ಚೆ ನಡೆಸಲಿರುವ ಸಿಎಂ ಭಗವಂತ್ ಮಾನ್

What India Thinks Today ಎಂಬ ಕಾರ್ಯಕ್ರಮದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ಭಾಗವಹಿಸಲಿದ್ದಾರೆ. ಅವರು ಈ ವೇದಿಕೆಯಲ್ಲಿ ಪಂಜಾಬ್​​​ ಪರಿಸ್ಥಿತಿಯ ಬಗ್ಗೆ ಹಂಚಿಕೊಳ್ಳಿದ್ದಾರೆ. ಹಾಗೂ ರೈತರ ಹೋರಾಟದ ಬಗ್ಗೆ ಕೂಡ ತಿಳಿಸಲಿದ್ದಾರೆ. ದೆಹಲಿಯಲ್ಲಿ ಫೆ.25ರಿಂದ 27ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ.

What India Thinks Today: ಟಿವಿ9 ವೇದಿಕೆಯಲ್ಲಿ ಪಂಜಾಬ್​​​ ಸ್ಥಿತಿಯ ಬಗ್ಗೆ ಚರ್ಚೆ ನಡೆಸಲಿರುವ ಸಿಎಂ ಭಗವಂತ್ ಮಾನ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 24, 2024 | 11:49 AM

What India Thinks Today ಎಂಬ ಕಾರ್ಯಕ್ರಮದ ಮೂಲಕ ಮತ್ತೊಂದು ವೇದಿಕೆಯನ್ನು ಟಿವಿ9 ನೆಟ್​​ವರ್ಕ್​​​​​ ಸಿದ್ಧಗೊಳಿಸಿದೆ. ಈ ಕಾರ್ಯಕ್ರಮ ದೆಹಲಿಯಲ್ಲಿ ಫೆ. 25ರಿಂದ ಫೆ.27ರವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರು , ವಿಜ್ಞಾನಿಗಳು, ಸಿನಿಮಾ ನಟ-ನಟಿಯರು, ಉದ್ಯಮಿಗಳು ಹಲವು ರಾಜ್ಯದ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಪಂಜಾಬ್​​ ರಾಜ್ಯದ ಸಿಎಂ ಭಗವಂತ್ ಮಾನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಾಧನೆ ಕುರಿತು ಟಿವಿ9 ವೇದಿಕೆಯಲ್ಲಿ ಹಂಚಿಕೊಳ್ಳಲಿದ್ದಾರೆ.

7 ರಾಜ್ಯಗಳ ಮುಖ್ಯಮಂತ್ರಿಗಳು ವಾಟ್ ಇಂಡಿಯಾ ಥಿಂಕ್ಸ್ ಟುಡೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 5 ಬಿಜೆಪಿ ಆಡಳಿತ ಇರುವ ರಾಜ್ಯದಿಂದ, ಹಾಗೂ ಇಬ್ಬರು ಎಎಪಿ ಆಡಳಿತ ಇರುವ ರಾಜ್ಯದಿಂದ ಭಾಗವಹಿಸಲಿದ್ದಾರೆ. ಪಂಜಾಬ್‌ನಲ್ಲಿ ಮೊದಲ ಬಾರಿಗೆ ಎಎಪಿ ಸರ್ಕಾರ ನಡೆಸುತ್ತಿದೆ. ಆಮ್ ಆದ್ಮಿ ಪಕ್ಷವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಗರಿಷ್ಠ ಸ್ಥಾನಗಳನ್ನು ಗಳಿಸುವ ಭರವಸೆಯಲ್ಲಿದೆ.

ಅರವಿಂದ್ ಕೇಜ್ರಿವಾಲ್ ಮತ್ತು ಸ್ವತಃ ಭಗವಂತ್ ಮಾನ್ ಅವರು 13 ರಲ್ಲಿ 13 ಸ್ಥಾನಗಳನ್ನು ಪಂಜಾಬ್​​ನಲ್ಲಿ ಗೆಲ್ಲುವುದಾಗಿ ಹೇಳಿಕೊಂಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಕಾಂಗ್ರೆಸ್ 8 ಸ್ಥಾನ, ಅಕಾಲಿ-ಬಿಜೆಪಿ ಮೈತ್ರಿಕೂಟ 4 ಸ್ಥಾನಗಳ ಹಾಗೂ ಎಎಪಿ 1 ಸ್ಥಾನವನ್ನು ಪಡೆದುಕೊಂಡಿತ್ತು. ಇನ್ನು ಭಗವಂತ್ ಮಾನ್ ಈ ಬಾರಿ ಲೋಕಸಭೆ ಚುನಾವಣೆ ಸಿದ್ಧತೆಗಳು ಹೇಗಿದೆ ಎಂಬ ಬಗ್ಗೆ ಟಿವಿ9 ವೇದಿಕೆಯಲ್ಲಿ ಹಂಚಿಕೊಳ್ಳಲಿದ್ದಾರೆ.

ಇದಲ್ಲದೇ, ಪಂಜಾಬ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳ ಬಗ್ಗೆಯು ಹಂಚಿಕೊಳ್ಳಬಹುದು. ಈ ಹಿಂದೆ ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ಮಾತುಕತೆಗಳು ನಡೆಯುತ್ತಿವೆ. ಆದರೆ ಇತ್ತೀಚೆಗೆ ಕೇಜ್ರಿವಾಲ್ ಪಂಜಾಬ್‌ನಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಘೋಷಿಸಿದ್ದರು.

ಇದನ್ನೂ ಓದಿ: ಟಿವಿ9 ಕಾರ್ಯಕ್ರಮದಲ್ಲಿ ಸೇನಾ ಬಲದ ಬಗ್ಗೆ ಚರ್ಚೆ ನಡೆಸಲಿರುವ ರಾಜನಾಥ್ ಸಿಂಗ್

ಹೀಗಿರುವಾಗ ಕಾಂಗ್ರೆಸ್ ಜೊತೆಗಿನ ಮೈತ್ರಿಯ ಮಾತುಕತೆಯಿಂದ ಹಿಂದೆ ಸರಿದಿದೆ. ಹಾಗಾಗಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಚುನಾವಣೆ ಎದುರಿಸಲಿದ್ದು, ಈ ನಿರ್ಧಾರ ಬಿಜೆಪಿಗೆ ಚುನಾವಣೆಯಲ್ಲಿ ಲಾಭವಾಗಬಹುದು. ಹಾಗಾಗಿ ಲೋಕಸಭೆ ಚುನಾವಣೆ ಮತ್ತು ರೈತರ ಚಳವಳಿಯ ಹೊರತಾಗಿ, ಪಂಜಾಬ್ ಮುಖ್ಯಮಂತ್ರಿ ಮಾನ್ ಅವರು ಪಂಜಾಬ್‌ನಲ್ಲಿನ ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಟಿವಿ9 ಸಭೆಯಲ್ಲಿ ಮಾತನಾಡಬಹುದು.

ಇನ್ನು ಟಿವಿ9 ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್​​​ ಕೂಡ ಭಾಗವಹಿಸಲಿದ್ದಾರೆ. ಹಾಗೂ ಈ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇಡಾ ‘2024ರಲ್ಲಿ ಯಾರು ಆಡಳಿತ ನಡೆಸುತ್ತಾರೆ ಎಂಬ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಹೈದರಾಬಾದ್‌ನ ಲೋಕಸಭಾ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಈ ವೇದಿಕೆಯಲ್ಲಿ ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:07 am, Sat, 24 February 24

ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ