What India Thinks Today ಎಂಬ ಕಾರ್ಯಕ್ರಮದ ಮೂಲಕ ಮತ್ತೊಂದು ವೇದಿಕೆಯನ್ನು ಟಿವಿ9 ನೆಟ್ವರ್ಕ್ ಸಿದ್ಧಗೊಳಿಸಿದೆ. ಈ ಕಾರ್ಯಕ್ರಮ ದೆಹಲಿಯಲ್ಲಿ ಫೆ. 25ರಿಂದ ಫೆ.27ರವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರು , ವಿಜ್ಞಾನಿಗಳು, ಸಿನಿಮಾ ನಟ-ನಟಿಯರು, ಉದ್ಯಮಿಗಳು ಹಲವು ರಾಜ್ಯದ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಪಂಜಾಬ್ ರಾಜ್ಯದ ಸಿಎಂ ಭಗವಂತ್ ಮಾನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಾಧನೆ ಕುರಿತು ಟಿವಿ9 ವೇದಿಕೆಯಲ್ಲಿ ಹಂಚಿಕೊಳ್ಳಲಿದ್ದಾರೆ.
7 ರಾಜ್ಯಗಳ ಮುಖ್ಯಮಂತ್ರಿಗಳು ವಾಟ್ ಇಂಡಿಯಾ ಥಿಂಕ್ಸ್ ಟುಡೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 5 ಬಿಜೆಪಿ ಆಡಳಿತ ಇರುವ ರಾಜ್ಯದಿಂದ, ಹಾಗೂ ಇಬ್ಬರು ಎಎಪಿ ಆಡಳಿತ ಇರುವ ರಾಜ್ಯದಿಂದ ಭಾಗವಹಿಸಲಿದ್ದಾರೆ. ಪಂಜಾಬ್‌ನಲ್ಲಿ ಮೊದಲ ಬಾರಿಗೆ ಎಎಪಿ ಸರ್ಕಾರ ನಡೆಸುತ್ತಿದೆ. ಆಮ್ ಆದ್ಮಿ ಪಕ್ಷವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಗರಿಷ್ಠ ಸ್ಥಾನಗಳನ್ನು ಗಳಿಸುವ ಭರವಸೆಯಲ್ಲಿದೆ.
ಅರವಿಂದ್ ಕೇಜ್ರಿವಾಲ್ ಮತ್ತು ಸ್ವತಃ ಭಗವಂತ್ ಮಾನ್ ಅವರು 13 ರಲ್ಲಿ 13 ಸ್ಥಾನಗಳನ್ನು ಪಂಜಾಬ್‌ನಲ್ಲಿ ಗೆಲ್ಲುವುದಾಗಿ ಹೇಳಿಕೊಂಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಕಾಂಗ್ರೆಸ್ 8 ಸ್ಥಾನ, ಅಕಾಲಿ-ಬಿಜೆಪಿ ಮೈತ್ರಿಕೂಟ 4 ಸ್ಥಾನಗಳ ಹಾಗೂ ಎಎಪಿ 1 ಸ್ಥಾನವನ್ನು ಪಡೆದುಕೊಂಡಿತ್ತು. ಇನ್ನು ಭಗವಂತ್ ಮಾನ್ ಈ ಬಾರಿ ಲೋಕಸಭೆ ಚುನಾವಣೆ ಸಿದ್ಧತೆಗಳು ಹೇಗಿದೆ ಎಂಬ ಬಗ್ಗೆ ಟಿವಿ9 ವೇದಿಕೆಯಲ್ಲಿ ಹಂಚಿಕೊಳ್ಳಲಿದ್ದಾರೆ.
ಇದಲ್ಲದೇ, ಪಂಜಾಬ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳ ಬಗ್ಗೆಯು ಹಂಚಿಕೊಳ್ಳಬಹುದು. ಈ ಹಿಂದೆ ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ಮಾತುಕತೆಗಳು ನಡೆಯುತ್ತಿವೆ. ಆದರೆ ಇತ್ತೀಚೆಗೆ ಕೇಜ್ರಿವಾಲ್ ಪಂಜಾಬ್‌ನಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಘೋಷಿಸಿದ್ದರು.
ಇದನ್ನೂ ಓದಿ: ಟಿವಿ9 ಕಾರ್ಯಕ್ರಮದಲ್ಲಿ ಸೇನಾ ಬಲದ ಬಗ್ಗೆ ಚರ್ಚೆ ನಡೆಸಲಿರುವ ರಾಜನಾಥ್ ಸಿಂಗ್
ಹೀಗಿರುವಾಗ ಕಾಂಗ್ರೆಸ್ ಜೊತೆಗಿನ ಮೈತ್ರಿಯ ಮಾತುಕತೆಯಿಂದ ಹಿಂದೆ ಸರಿದಿದೆ. ಹಾಗಾಗಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಚುನಾವಣೆ ಎದುರಿಸಲಿದ್ದು, ಈ ನಿರ್ಧಾರ ಬಿಜೆಪಿಗೆ ಚುನಾವಣೆಯಲ್ಲಿ ಲಾಭವಾಗಬಹುದು. ಹಾಗಾಗಿ ಲೋಕಸಭೆ ಚುನಾವಣೆ ಮತ್ತು ರೈತರ ಚಳವಳಿಯ ಹೊರತಾಗಿ, ಪಂಜಾಬ್ ಮುಖ್ಯಮಂತ್ರಿ ಮಾನ್ ಅವರು ಪಂಜಾಬ್‌ನಲ್ಲಿನ ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಟಿವಿ9 ಸಭೆಯಲ್ಲಿ ಮಾತನಾಡಬಹುದು.
ಇನ್ನು ಟಿವಿ9 ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಭಾಗವಹಿಸಲಿದ್ದಾರೆ. ಹಾಗೂ ಈ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇಡಾ ‘2024ರಲ್ಲಿ ಯಾರು ಆಡಳಿತ ನಡೆಸುತ್ತಾರೆ ಎಂಬ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಹೈದರಾಬಾದ್‌ನ ಲೋಕಸಭಾ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಈ ವೇದಿಕೆಯಲ್ಲಿ ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಲಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:07 am, Sat, 24 February 24