What India Thinks Today: ಒಂದು ದೇಶ, ಒಂದು ಸಂವಿಧಾನದ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಟಿವಿ9ನಲ್ಲಿ ಚರ್ಚೆ
CM Pushkar Singh Dhami: 'ವಾಟ್ ಇಂಡಿಯಾ ಥಿಂಕ್ಸ್ ಟುಡೇ ' ಕಾರ್ಯಕ್ರಮವನ್ನು ಟಿವಿ9 ನೆಟ್ವರ್ಕ್ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಹಾಗೂ 7 ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಈ ಶೃಂಗಸಭೆಗೆ ಸಾಕ್ಷಿಯಾಗಲಿದ್ದಾರೆ. ಹಲವು ವಿಚಾರಗಳ ಬಗ್ಗೆ ಇಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಒಂದು ದೇಶ, ಒಂದು ಸಂವಿಧಾನದ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ವಾಟ್ ಇಂಡಿಯಾ ಥಿಂಕ್ಸ್ ಟುಡೇ ಕಾರ್ಯಕ್ರಮವನ್ನು ಟಿವಿ 9 ನೆಟ್‌ವರ್ಕ್‌ನ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ. ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಫೆಬ್ರವರಿ 27 ರಂದು (ಮಂಗಳವಾರ) ಭಾರತದ ಬಗ್ಗೆ ಸಂವಾದ ನಡೆಸಲಿದ್ದಾರೆ. ಇತ್ತೀಚೆಗೆ, ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲು ಹೊರಟಿರುವ ದೇಶದ ಮೊದಲ ರಾಜ್ಯವಾಗಿದೆ. ಇದೀಗ ಈ ಬಗ್ಗೆ ಚರ್ಚಿಸಲು ಈ ವೇದಿಕೆ ಸೂಕ್ತವಾಗಿದೆ.
ಗ್ಲೋಬಲ್ ಸಮ್ಮಿಟ್ ಆಫ್ ಇಂಡಿಯಾ ಥಿಂಕ್ಸ್ ಟುಡೇ ಮೂರು ದಿನಗಳ ಕಾಲ ನಡೆಯಲಿದೆ. ಕ್ರೀಡಾ ಕ್ಷೇತ್ರ, ಸಿನಿಮಾ ಕ್ಷೇತ್ರ, ಆರ್ಥಿಕ ಕ್ಷೇತ್ರ, ವಿಜ್ಞಾನ ಕ್ಷೇತ್ರ, ಕಲೆ, ಸಾಹಿತ್ಯ ಕ್ಷೇತ್ರ ಹಾಗೂ ರಾಜಕೀಯ ಕ್ಷೇತ್ರಕ್ಕೆ ಈ ವೇದಿಕೆ ಅವಕಾಶ ನೀಡಿದೆ. ಇನ್ನು ರಾಜಕೀಯ ಪಕ್ಷಗಳು ಲೋಕಸಭೆ ಮತ್ತು ಮುಂಬರುವ ಚುನಾವಣೆಗಳಿಗೆ ತಮ್ಮ ಪಕ್ಷಗಳನ್ನು ಸಿದ್ಧಗೊಳಿಸುತ್ತಿದೆ. ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಈ ವೇದಿಕೆಯಲ್ಲಿ ‘ಒಂದು ದೇಶ, ಒಂದು ಶಾಸನ ನಯಾ ಹಿಂದೂಸ್ತಾನ್’ ವಿಚಾರದ ಬಗ್ಗೆ ಮಾತನಾಡಲಿದ್ದಾರೆ.
ಇದನ್ನೂ ಓದಿ: ನೂತನ ಮುಖ್ಯಮಂತ್ರಿಗಳ ಆಡಳಿತ ಹೇಗಿದೆ? ಟಿವಿ9 ವೇದಿಕೆಯಲ್ಲಿ ಚರ್ಚೆ
ಉತ್ತರಾಖಂಡನಲ್ಲಿ ಯುಸಿಸಿಯನ್ನು ಜಾರಿಗೆ ತರುತ್ತಿದೆ
ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆಯ ದಿನಾಂಕಗಳು ದೇಶದಲ್ಲಿ ಘೋಷಣೆಯಾಗುವ ಸಾಧ್ಯತೆಯಿರುವ ಸಮಯದಲ್ಲಿ ಉತ್ತರಾಖಂಡ್ ಯುಸಿಸಿಯನ್ನು ಜಾರಿಗೆ ತರಲು ಕೆಲಸ ಮಾಡುತ್ತಿದೆ. ಉತ್ತರಾಖಂಡದ ನಂತರ, ಅನೇಕ ರಾಜ್ಯಗಳು ತಮ್ಮ ರಾಜ್ಯಗಳಲ್ಲಿ ಯುಸಿಸಿ ತರುವ ಬಗ್ಗೆ ಚರ್ಚೆ ನಡೆಸುತ್ತಿದೆ. ಈ ಸಮಯದಲ್ಲಿ ಟಿವಿ9 ವೇದಿಕೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಿದ್ಧತೆ ಹಾಗೂ ‘ಒಂದು ದೇಶ, ಒಂದು ವಿಧಾನ ನಯ ಹಿಂದುಸ್ತಾನ’ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿದೆ.
ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಪುಷ್ಕರ್ ಸಿಂಗ್ ಧಾಮಿ ಅವರು ತಮ್ಮ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ಮಾಡುವ ಮೂಲಕ ಭಾರೀ ಸುದ್ದಿಯಾಗಿದ್ದಾರೆ. ಯುಸಿಸಿ ಮಸೂದೆಗೆ ನಿಯಮಗಳನ್ನು ರೂಪಿಸಲು ಉತ್ತರಾಖಂಡದ ಬಿಜೆಪಿ ಸರ್ಕಾರ 9 ಸದಸ್ಯರ ಸಮಿತಿಯನ್ನು ರಚಿಸಿದೆ. ಈ ತಿಂಗಳ ಆರಂಭದಲ್ಲಿ, ಈ ಮಸೂದೆಯನ್ನು ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:37 pm, Sat, 24 February 24