What India Thinks Today: ಟಿವಿ9ನಲ್ಲಿ ಕೃತಕ ಬುದ್ಧಿಮತ್ತೆಯ ಅನುಕೂಲಗಳು ಮತ್ತು ಅನಾನುಕೂಲದ ಬಗ್ಗೆ ತಜ್ಞರು ಚರ್ಚೆ

What India Thinks Today ಕಾರ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆಯ ಅನುಕೂಲಗಳು ಮತ್ತು ಅನಾನುಕೂಲದ ಬಗ್ಗೆ ತಜ್ಞರು ಚರ್ಚೆ ನಡೆಸಲಿದ್ದಾರೆ. ಈ ಕಾರ್ಯಕ್ರಮ ದೆಹಲಿಯಲ್ಲಿ ಫೆ. 25ರಿಂದ 27ರವರೆಗೆ ನಡೆಯಲಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಸಂವಾದ ನಡೆಸಲಿದ್ದಾರೆ.

What India Thinks Today: ಟಿವಿ9ನಲ್ಲಿ ಕೃತಕ ಬುದ್ಧಿಮತ್ತೆಯ ಅನುಕೂಲಗಳು ಮತ್ತು ಅನಾನುಕೂಲದ ಬಗ್ಗೆ ತಜ್ಞರು ಚರ್ಚೆ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 24, 2024 | 11:50 AM

ಟಿವಿ9 ನೆಟ್​​​ವರ್ಕ್​​​ ನಡೆಸುತ್ತಿರುವ What India Thinks Today ಎಂಬ ಕಾರ್ಯಕ್ರಮ ಫೆ.25ರಿಂದ ಫೆ.27ರವರೆಗೆ ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದರ ಜತೆಗೆ ವಿಜ್ಞಾನ, ಕೃತಕ ಬುದ್ಧಿಮತ್ತೆ, ರಾಜಕೀಯ, ಆಡಳಿತ, ಅರ್ಥಶಾಸ್ತ್ರ, ಆರೋಗ್ಯ, ಸಂಸ್ಕೃತಿ ಮತ್ತು ಕ್ರೀಡಾ ಜಗತ್ತಿನ ಸೇವೆ ನೀಡುತ್ತಿರುವ ವ್ಯಕ್ತಿಗಳು ಭಾಗವಹಿಸುತ್ತಿದ್ದಾರೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ ದಿಗ್ಗಜರನ್ನು ಈ ಕಾರ್ಯಕ್ರಮದಲ್ಲಿ ಪರಿಚಯಿಸಲಿದ್ದೇವೆ. ಅದರ ತಜ್ಞರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಹಾಗೂ ಅವುಗಳು ಮುಂದಿನ ಯೋಜನೆ ಏನು ಎಂಬ ಬಗ್ಗೆಯೂ ಚರ್ಚೆ ನಡೆಸಲಿದ್ದೇವೆ.

ಡಾ. ಶೈಲೇಶ್ ಕುಮಾರ್: ಮುಖ್ಯ ಡೇಟಾ ವಿಜ್ಞಾನಿ ರಿಲಯನ್ಸ್ ಜಿಯೋ

ಡಾ. ಶೈಲೇಶ್ ಕುಮಾರ್ ಅವರು ಪ್ರಸ್ತುತ ರಿಲಯನ್ಸ್ ಜಿಯೋದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್‌ನ ಮುಖ್ಯ ಡೇಟಾ ವಿಜ್ಞಾನಿಯಾಗಿದ್ದಾರೆ. ರಿಲಯನ್ಸ್ ಜಿಯೋ ಅವರ ನೇತೃತ್ವದಲ್ಲಿ ತನ್ನ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸುತ್ತಿದೆ. ಡಾ.ಶೈಲೇಶ್ ಅವರ 20ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸಂಶೋಧನಾ ಪ್ರಬಂಧಗಳು ಪ್ರಕಟವಾಗಿವೆ. ತಮ್ಮ ಹೆಸರಿನಲ್ಲಿ 20 ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆಯ ಪೇಟೆಂಟ್‌ಗಳನ್ನು ಹೊಂದಿದ್ದಾರೆ. 2015 ರಲ್ಲಿ, ಅನಾಲಿಟಿಕ್ಸ್ ಇಂಡಿಯಾ ಮ್ಯಾಗಜೀನ್‌ನ ಟಾಪ್ 10 ಡೇಟಾ ವಿಜ್ಞಾನಿಗಳ ಪಟ್ಟಿಯಲ್ಲಿ ಶೈಲೇಶ್ ಕುಮಾರ್ ಕೂಡ ಒಬ್ಬರು. ಇದಕ್ಕೂ ಮೊದಲು, ಡಾ. ಶೈಲೇಶ್ ಕುಮಾರ್ ಓಲಾ ಕ್ಯಾಬ್ಸ್‌ನಲ್ಲಿ ಉಪಾಧ್ಯಕ್ಷರಾಗಿದ್ದರು ಮತ್ತು ಅವರು ಥರ್ಡ್ ಲೀಪ್ ಮತ್ತು ಎಡ್‌ಟೆಕ್ ಸ್ಟಾರ್ಟ್‌ಅಪ್‌ನ ಸಹ-ಸಂಸ್ಥಾಪಕರೂ ಆಗಿದ್ದರು.

ಇದನ್ನೂ ಓದಿ: ವಿಶ್ವದ ದೃಷ್ಟಿಯಲ್ಲಿ ಭಾರತದ ಆರ್ಥಿಕ ಸ್ಥಾನಮಾನ ಹೇಗಿದೆ? ಇದು ತಜ್ಞರ ಅಭಿಪ್ರಾಯಕ್ಕೆ ವೇದಿಕೆ

ಅಲೋಕ್ ಶುಕ್ಲಾ: ನಿರ್ದೇಶಕ AI ವಿಷನ್, ಸ್ಯಾಮ್ಸಂಗ್ ಸಂಶೋಧನೆ

ಅಲೋಕ್ ಶುಕ್ಲಾ ಅವರು ಕ್ಯಾಮೆರಾ ತಂತ್ರಜ್ಞಾನದಲ್ಲಿ AI ಬಳಕೆ ಬಗ್ಗೆ ಸಂಶೋಧನೆ ಮಾಡಿ ಹೆಸರುವಾಸಿಯಾಗಿದ್ದಾರೆ. ಅವರು ಪ್ರಸ್ತುತ ಭಾರತದಲ್ಲಿ AI ವಿಷನ್ ಸೊಲ್ಯೂಷನ್ಸ್ ತಂಡವನ್ನು ಮುನ್ನಡೆಸಿದ್ದಾರೆ. ಇದಲ್ಲದೆ, AI ಇಮೇಜ್ ಅಲ್ಗಾರಿಮ್​​​​ ಅಭಿವೃದ್ಧಿಪಡಿಸುವ ಮೇಲೆ ಹೆಚ್ಚಿನ ಗಮನ ನೀಡಿದ್ದಾರೆ.

ಡಾ. ಅನುರಾಗ್ ಮಾರಲ್: ಕೃತಕ ಬುದ್ಧಿಮತ್ತೆ ಮತ್ತು ಜೈವಿಕ ತಂತ್ರಜ್ಞಾನ ಪ್ರೊಫೆಸರ್, ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ

ಡಾ. ಅನುರಾಗ್ ಅವರು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಜೈವಿಕ ತಂತ್ರಜ್ಞಾನದ ಪ್ರಾಧ್ಯಾಪಕರಾಗಿದ್ದಾರೆ. ಡಾ. ಅನುರಾಗ್ ಅವರು AI ಮತ್ತು ಜೈವಿಕ ತಂತ್ರಜ್ಞಾನವನ್ನು ಸಂಯೋಜಿಸುವ ಮೂಲಕ ಆರೋಗ್ಯ, ಕೃಷಿ ಮತ್ತು ಪರಿಸರ ಸುಸ್ಥಿರತೆಯ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:09 pm, Fri, 23 February 24

ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್