AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

What India Thinks Today: ಬಿಜೆಪಿ ಲೋಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹೇಗೆ ಕೆಲಸ ಮಾಡುತ್ತಿದೆ? ಟಿವಿ9ನಲ್ಲಿ ಮಾತನಾಡಲಿರುವ ಜೆಪಿ ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೆಟ್‌ವರ್ಕ್ ಟಿವಿ9ನ What India Thinks Today ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳು ಹೇಗಿದೆ ಎಂಬ ಬಗ್ಗೆ ಮಾತನಾಡಬಹುದು. ಇದಲ್ಲದೆ, ಚುನಾವಣೆಯಲ್ಲಿ ಪಕ್ಷವು ಯಾವ ರೀತಿಯ ಕಾರ್ಯತಂತ್ರವನ್ನು ಮಾಡಿದೆ. ಮತ್ತು ಹ್ಯಾಟ್ರಿಕ್ ಚುನಾವಣಾ ಗೆಲುವಿಗಾಗಿ ಅವರ ಕಾರ್ಯಸೂಚಿಯಲ್ಲಿ ಏನಿದೆ ಎಂಬ ಬಗ್ಗೆಯೂ ಚರ್ಚೆ ನಡೆಸಬಹುದು.

What India Thinks Today: ಬಿಜೆಪಿ ಲೋಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹೇಗೆ ಕೆಲಸ ಮಾಡುತ್ತಿದೆ? ಟಿವಿ9ನಲ್ಲಿ ಮಾತನಾಡಲಿರುವ ಜೆಪಿ ನಡ್ಡಾ
TV9 Web
| Edited By: |

Updated on:Feb 25, 2024 | 11:58 AM

Share

ದೇಶದ ಅತಿದೊಡ್ಡ ಸುದ್ದಿ ನೆಟ್‌ವರ್ಕ್ ಟಿವಿ9 ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ What India Thinks Today ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಎರಡು ರಾಷ್ಟ್ರೀಯ ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟವು ಹ್ಯಾಟ್ರಿಕ್ ಗೆಲುವು ಸಾಧಿಸಲು ಹೇಗೆ ಕೆಲಸ ಮಾಡುತ್ತಿದೆ ಎಂಬುದನ್ನು ಈ ವೇದಿಕೆಯಲ್ಲಿ ಚರ್ಚಿಸಲಿದ್ದಾರೆ.

‘ಮೂರನೇ ಬಾರಿ ಮೋದಿ ಸರ್ಕಾರ?’ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಗ್ಗೆ ಸಂವಾದ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆಗಳು ಹೇಗಿದೆ ಎಂಬ ಬಗ್ಗೆ ಇಲ್ಲಿ ಚರ್ಚೆಯಾಗಲಿದೆ. ಚುನಾವಣೆಯಲ್ಲಿ ಪಕ್ಷವು ಯಾವ ರೀತಿಯ ಕಾರ್ಯತಂತ್ರ ರೂಪಿಸಿದೆ, ಹಾಗೂ ಪಕ್ಷದ ಗೆಲುವಿಗೆ ಅಜೆಂಡಾದಲ್ಲಿ ಏನು ಇರುತ್ತದೆ ಎಂಬ ಬಗ್ಗೆ ಇಲ್ಲಿ ತಿಳಿಸಬಹುದು. ಇದಲ್ಲದೇ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಚಾರದ ಬಗ್ಗೆಯೂ ಚರ್ಚೆ ಮಾಡಬಹುದು.

ಈಗಾಗಲೇ ಚುನಾವಣಾ ದಿನಾಂಕ ಘೋಷಣೆಯಾಗದಿದ್ದರೂ ಎಲ್ಲಾ ಪಕ್ಷಗಳಲ್ಲಿ ಚುನಾವಣಾ ಅಬ್ಬರ ಜೋರಾಗಿದೆ. ಬಿಜೆಪಿಯ ಹ್ಯಾಟ್ರಿಕ್ ಗೆಲುವಿನ ಯೋಜನೆಗೆ ಕಡಿವಾಣ ಹಾಕಲು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ರಣತಂತ್ರ ಹೂಡಿದೆ. ಇತರ ಪ್ರಾದೇಶಿಕ ಪಕ್ಷಗಳೊಂದಿಗೆ ಕಾಂಗ್ರೆಸ್ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸುತ್ತಿದೆ. ಯುಪಿಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಕಾಂಗ್ರೆಸ್ ಚುನಾವಣಾ ಮೈತ್ರಿ ಮಾಡಿಕೊಂಡಿದ್ದರೆ, ದೆಹಲಿ, ಗುಜರಾತ್, ಹರಿಯಾಣ ಮತ್ತು ಗೋವಾದಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಈ ರಾಜ್ಯಗಳಲ್ಲಿ ಬಹುಕೋನ ಸ್ಪರ್ಧೆಯ ಸಾಧ್ಯತೆಗಳಿದ್ದು, ಬಾರಿ ಪೈಪೋಟಿ ನಡೆಯುತ್ತಿದೆ.

ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮುಂಬೈನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಈ ಬಾರಿ ಒಂದೆಡೆ ವಂಶಾಡಳಿತ ಮತ್ತು ಭ್ರಷ್ಟಾಚಾರ, ಇನ್ನೊಂದೆಡೆ ಅಭಿವೃದ್ಧಿ ನಡುವೆ ಸ್ಪರ್ಧೆ ನಡೆಯಲಿದೆ. ಕಳೆದ 10 ವರ್ಷಗಳಲ್ಲಿ, ಮೊದಲ ಬಾರಿಗೆ ಮತದಾರರು ಅಭಿವೃದ್ಧಿಯನ್ನು ಮಾತ್ರ ನೋಡಿದ್ದಾರೆ ಮತ್ತು ಹಿಂದಿನ ಸರ್ಕಾರಗಳಂತೆ ಭ್ರಷ್ಟಾಚಾರವನ್ನು ನೋಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 26 ರಂದು ಪ್ರಧಾನಿ ಮೋದಿ ಮಾತು, 3 ದಿನಗಳ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

‘ಒಂದು ರಾಷ್ಟ್ರ ಒಂದು ಚುನಾವಣೆ’ ಬಗ್ಗೆ ಬಿಜೆಪಿ ಅಭಿಪ್ರಾಯವೇನು?

ಜೆಪಿ ನಡ್ಡಾ ನೇತೃತ್ವದ ಬಿಜೆಪಿ ‘ಒಂದು ರಾಷ್ಟ್ರ ಒಂದು ಚುನಾವಣೆ’ಗೆ ಬೆಂಬಲ ನೀಡಿದೆ. ಇತ್ತೀಚೆಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಗೆ ಪಕ್ಷವು ಈ ವಿಷಯದ ಬಗ್ಗೆ ತನ್ನ ಅಭಿಪ್ರಾಯವನ್ನು ಸಲ್ಲಿಸಿದೆ. ನ್ನ ಅಭಿಪ್ರಾಯದಲ್ಲಿ, ಪಕ್ಷವು ಲೋಕಸಭೆ, ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದನ್ನು ಪ್ರತಿಪಾದಿಸಿತು ಮತ್ತು ಎಲ್ಲಾ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯನ್ನು ಒತ್ತಾಯಿಸಿತು. ಮೂರು ಹಂತದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸಾಧ್ಯವಾಗದಿದ್ದರೆ ಕನಿಷ್ಠ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಬಹುದು ಎಂದು ಎಂದು ಪಕ್ಷ ತನ್ನ ಅಭಿಪ್ರಾಯ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:51 am, Sun, 25 February 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ