What India Thinks Today: ಟಿವಿ9 ಕಾರ್ಯಕ್ರಮದಲ್ಲಿ ಸೇನಾ ಬಲದ ಬಗ್ಗೆ ಚರ್ಚೆ ನಡೆಸಲಿರುವ ರಾಜನಾಥ್ ಸಿಂಗ್

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟಿವಿ9 ನೆಟ್​​ವರ್ಕ್​​ ನಡೆಸುತ್ತಿರುವ What India Thinks Today ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ಅವರು ಭಾರತದ ಸೇನೆ ಎದುರಿಸುತ್ತಿರುವ ಸವಾಲುಗಳು ಹಾಗೂ ಚೀನಾ ಮತ್ತು ಪಾಕಿಸ್ತಾನದ ನಡುವೆ ಭಾರತದ ಸೇನೆ ಯಾವ ರೀತಿಯ ಸವಾಲುಗಳು ಎದುರಿಸುತ್ತಿದೆ ಎಂಬ ಬಗ್ಗೆ ಮಾತನಾಡಲಿದ್ದಾರೆ.

What India Thinks Today: ಟಿವಿ9 ಕಾರ್ಯಕ್ರಮದಲ್ಲಿ ಸೇನಾ ಬಲದ ಬಗ್ಗೆ ಚರ್ಚೆ ನಡೆಸಲಿರುವ ರಾಜನಾಥ್ ಸಿಂಗ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 24, 2024 | 11:49 AM

What India Thinks Today ಎಂಬ ಕಾರ್ಯಕ್ರಮದ ಮೂಲಕ ಮತ್ತೊಂದು ವೇದಿಕೆಯನ್ನು ಟಿವಿ9 ನೆಟ್​​ವರ್ಕ್​​​​​ ಸಿದ್ಧಗೊಳಿಸಿದೆ. ಈ ಕಾರ್ಯಕ್ರಮ ಫೆ. 25ರಿಂದ ಫೆ.27ರವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರು , ವಿಜ್ಞಾನಿಗಳು, ಸಿನಿಮಾ ನಟ-ನಟಿಯರು, ಉದ್ಯಮಿಗಳು ಭಾಗವಹಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಶಕ್ತಿ ತುಂಬಾ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​​​ ಭಾಗವಹಿಸಲಿದ್ದಾರೆ. ಅವರು ಕಾರ್ಯತಂತ್ರದ ಮಟ್ಟದಲ್ಲಿ ಭಾರತದ ಸವಾಲುಗಳು ಮತ್ತು ಅವುಗಳನ್ನು ಎದುರಿಸಲು ರಕ್ಷಣಾ ಸಚಿವಾಲಯದ ಸಿದ್ಧತೆಗಳ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಲಿದ್ದಾರೆ.

ಫೆಬ್ರವರಿ 25 ರಂದು ರಾಜಧಾನಿ ದೆಹಲಿಯ ಅಶೋಕ್ ಹೋಟೆಲ್‌ನಲ್ಲಿ ಆಯೋಜಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಅವರು ಶಕ್ತಿ ಸಮಾವೇಶದಲ್ಲಿ ‘ಎ ಬ್ರೇವ್ ನ್ಯೂ ಇಂಡಿಯಾ’ ಎಂಬ ವಿಚಾರದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಗಡಿಯಲ್ಲಿ ಭಾರತ ಎದುರಿಸುತ್ತಿರುವ ನಿರಂತರ ಸವಾಲುಗಳನ್ನು ಬಗ್ಗೆ ರಕ್ಷಣಾ ಸಚಿವಾಲಯದ ಸಿದ್ಧತೆಗಳ ಹೇಗಿದೆ? ಎಂಬ ವಿಚಾರದ ಮಾತನಾಡಲಿದ್ದಾರೆ.

ಸೇನೆಯಲ್ಲಿ ಎಷ್ಟು ಆಧುನೀಕರಣ ನಡೆದಿದೆ?

ನರೇಂದ್ರ ಮೋದಿ ಸರಕಾರ ಸೇನೆಯ ಆಧುನೀಕರಣ ಮತ್ತು ಸ್ವದೇಶೀಕರಣಕ್ಕೆ ನಿರಂತರವಾಗಿ ಒತ್ತು ನೀಡುತ್ತಿದೆ. ರಕ್ಷಣಾ ಸಚಿವರು ಈ ವಿಷಯದ ಬಗ್ಗೆ ಸಾಮಾನ್ಯ ಜನರ ಮುಂದೆ ಕೆಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಬಹುದು. ಯುದ್ಧ ವಿಮಾನಗಳಿಗೆ ಸಂಬಂಧಿಸಿದಂತೆ ಸೇನೆಯ ನಿಲುವು ಏನು ಮತ್ತು ಇತರ ದೇಶಗಳೊಂದಿಗೆ ಯಾವ ರೀತಿಯ ಒಪ್ಪಂದಗಳು ನಡೆಯುತ್ತಿವೆ ಎಂಬ ಬಗ್ಗೆಯೂ ಅವರು ಮಾಹಿತಿ ನೀಡಬಹುದು. ಚೀನಾ ಮತ್ತು ಪಾಕಿಸ್ತಾನದಿಂದ ಎದುರಾಗುತ್ತಿರುವ ಸವಾಲುಗಳಿಗೆ ಸೇನೆ ಹೇಗೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ? ಅಲ್ಲದೆ, ಸರ್ಕಾರ ಒತ್ತು ನೀಡುತ್ತಿರುವ ಸ್ವದೇಶೀಕರಣದಿಂದ ಸೇನೆಗೆ ಎಷ್ಟರ ಮಟ್ಟಿಗೆ ಲಾಭವಾಗಿದೆ? ಎಂಬ ಬಗ್ಗೆಯು ಈ ಕಾರ್ಯಕ್ರಮದಲ್ಲಿ ಮಾತನಾಡಬಹುದು.

ಇದನ್ನೂ ಓದಿ: ಟಿವಿ9ನಲ್ಲಿ ಕೃತಕ ಬುದ್ಧಿಮತ್ತೆಯ ಅನುಕೂಲಗಳು ಮತ್ತು ಅನಾನುಕೂಲದ ಬಗ್ಗೆ ತಜ್ಞರು ಚರ್ಚೆ

ಹಲವು ರಾಜ್ಯಗಳ ಮುಖ್ಯಮಂತ್ರಿಗಳೂ ಭಾಗವಹಿಸಲಿದ್ದಾರೆ

ಟಿವಿ9ನ ಈ ಪ್ರಮುಖ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಭಾಗವಹಿಸಲಿದ್ದಾರೆ. ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುನ್ ದಾಸ್ ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮವು ಪ್ರಾರಂಭವಾಗುತ್ತದೆ. ಇದಾದ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ. ನಂತರ ಈ ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೇಂದ್ರಾಡಳಿತ ಪ್ರದೇಶದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ದೆಹಲಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅಸಾದುದ್ದೀನ್ ಓವೈಸಿ ಸೇರಿದಂತೆ ವಿರೋಧ ಪಕ್ಷಗಳ ಹಲವು ಹಿರಿಯ ನಾಯಕರು ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ತಮ್ಮ ಪಕ್ಷಗಳ ಕಾರ್ಯತಂತ್ರವನ್ನು ಚರ್ಚಿಸಬಹುದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದೊಂದಿಗೆ ಅಂದಿನ ಚರ್ಚೆ ಮುಕ್ತಗೊಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:36 pm, Fri, 23 February 24

ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ