What India Thinks Today: ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆ-1935 ರದ್ದು, ಈ ಬಗ್ಗೆ ಟಿವಿ9ನಲ್ಲಿ ಹಿಮಂತ ಬಿಸ್ವಾ ಶರ್ಮಾ ಚರ್ಚೆ?

Himanta Biswa Sharma; ಟಿವಿ9 ನೆಟ್‌ವರ್ಕ್ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಎಂಬ ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ತಮ್ಮ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನ ಮತ್ತು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆ-1935 ಅನ್ನು ರದ್ದು ಈ ಬಗ್ಗೆ ಮಾತನಾಡಬಹುದು.

What India Thinks Today: ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆ-1935 ರದ್ದು, ಈ ಬಗ್ಗೆ ಟಿವಿ9ನಲ್ಲಿ ಹಿಮಂತ ಬಿಸ್ವಾ ಶರ್ಮಾ ಚರ್ಚೆ?
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 25, 2024 | 1:01 PM

ದೇಶದ ಅತಿದೊಡ್ಡ ಸುದ್ದಿ ನೆಟ್‌ವರ್ಕ್ ಟಿವಿ9 ಮತ್ತೊಂದು ವೇದಿಕೆಯನ್ನು ಸಿದ್ಧಗೊಳಿಸಿದೆ. ವಾಟ್ ಇಂಡಿಯಾ ಥಿಂಕ್ಸ್ ಟುಡೇ (What India Thinks Today)  ಎಂಬ ಕಾರ್ಯಕ್ರಮ ಇಂದಿನಿಂದ (ಫೆ,25) ಆರಂಭಗೊಂಡು, ಫೆ,27ಕ್ಕೆ ಕೊನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅನೇಕ ಗಣ್ಯರು ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇದಿಕೆಯಲ್ಲಿ, ಅವರು ತಮ್ಮ ರಾಜ್ಯದಲ್ಲಿ ಜಾರಿಗೊಳಿಸಿರುವ UCC (ಏಕರೂಪ ನಾಗರಿಕ ಸಂಹಿತೆ) ಬಗ್ಗೆ ಮಾತನಾಡಲಿದ್ದಾರೆ. ವಿರೋಧಕ ಪಕ್ಷದ ವಿಚಾರಗಳಲ್ಲಿ ಹಿಮಂತ ಬಿಸ್ವಾ ಶರ್ಮಾ ಸ್ವಲ್ಪ ಖಾರ, ಇದರಿಂದಲೇ ಅವರು ಸುದ್ದಿಯಾಗುತ್ತಿದ್ದರು. ಇನ್ನು ತಮ್ಮ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನದ ಬಗ್ಗೆ ಟಿವಿ9 ವೇದಿಕೆಯಲ್ಲಿ ಚರ್ಚೆ ನಡೆಸಬಹುದು ಎಂದು ಹೇಳಲಾಗಿದೆ. ಇದರ ಜತೆಗೆ ಇತ್ತೀಚೆಗೆ ಒಂದು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆ-1935 ಅನ್ನು ರದ್ದುಗೊಳಿಸಿದ್ದಾರೆ. ಎಲ್ಲಾ ವಿವಾಹಗಳು ಮತ್ತು ವಿಚ್ಛೇದನಗಳನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಂದಾಯಿಸಲಾಗುವುದು ಎಂದು ಹೇಳಿದ್ದಾರೆ. ಇದೀಗ ಇದು ಕೂಡ ದೊಡ್ಡ ಚರ್ಚೆಯಾಗುತ್ತಿದೆ. ಈ ಬಗ್ಗೆಯೂ ಅವರು ಟಿವಿ9 ವೇದಿಕೆಯಲ್ಲಿ ಮಾತನಾಡಬಹುದು.

ಹಿಮಂತ ಬಿಸ್ವಾ ಶರ್ಮಾ ಕೆಲವು ದಿನಗಳಿಂದ ಕಾಂಗ್ರೆಸ್​​ ಹಾಗೂ ಗಾಂಧಿ ಕುಟುಂಬ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ತೆಲಂಗಾಣದ ನಿರ್ಮಲ್ ಜಿಲ್ಲೆಯ ಭೈಂಸಾದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆಹ್ವಾನ ನೀಡಿದರೂ ಏಕೆ ಅಯೋಧ್ಯೆಗೆ ಹಾಜರಾಗುತ್ತಿಲ್ಲ ಎಂದು ಪ್ರಶ್ನಿಸಿದರು. ರಾಮಮಂದಿರ ಕಾರ್ಯಕ್ರಮದಲ್ಲಿ ನಾನೇಕೆ ಭಾಗವಹಿಸಲಿಲ್ಲ? ಇದು ಅವರ ರಾಜಕೀಯದ ಮಟ್ಟವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮ ಪ್ರಾಣಪ್ರತಿಷ್ಠೆಗೆ ಆಹ್ವಾನ ಇದ್ದರು ನೀವು ಏಕೆ ಹೋಗಲಿಲ್ಲ? ಎಂದು ನೀವೇ ಹೇಳಬೇಕು? ನೀವು ಹಿಂದೂಗಳನ್ನು ಪ್ರೀತಿಸುವುದಿಲ್ಲವೇ? ನೀವು ಯಾವಾಗಲೂ ರಜಾಕಾರರು ಮತ್ತು ಬಾಬರ್‌ಗಳೊಂದಿಗೆ ಇರುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಟಿವಿ9 ಕಾರ್ಯಕ್ರಮದಲ್ಲಿ ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಸಮಯದಲ್ಲಿ ಉಂಟಾದ ವಿವಾದಗಳ ಬಗ್ಗೆಯೂ ಚರ್ಚಿಸಬಹುದು.

ಇದನ್ನೂ ಓದಿ: ಬಿಜೆಪಿ 370, ಎನ್‌ಡಿಎ 400 ಹೇಗಿದೆ ಚಾಣಕ್ಯನ ಪ್ಲ್ಯಾನ್​​? ಟಿವಿ9 ವೇದಿಕೆಯಲ್ಲಿ ಅಮಿತ್​​​ ಶಾ

ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ವಿರೋಧ ಪಕ್ಷಗಳ ಮೈತ್ರಿಯಾದ ಭಾರತದಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬಿಕ್ಕಟಿನ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಬಹುದು. ಹಾಗೂ ಅಸ್ಸಾಂನಲ್ಲಿ ಬಿಜೆಪಿ ಲೋಕಸಭೆ ಚುನಾವಣೆ ತಯಾರಿ ಹೇಗಿದೆ? ಈ ಬಾರಿ ಬಿಜೆಪಿ 370, ಎನ್‌ಡಿಎ 400 ದಾಟಲಿದೆಯೇ?ಈ ಪ್ರಶ್ನೆಗೆ ಸಿಎಂ ಶರ್ಮಾ ಕೂಡ ತಮ್ಮದೇ ಶೈಲಿಯಲ್ಲಿ ಇಲ್ಲಿ ಉತ್ತರಿಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:00 pm, Sun, 25 February 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್