What India Thinks Today: ಫೆ.27ರ ಟಿವಿ9 ಕಾರ್ಯಕ್ರಮದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಮುಖಾಮುಖಿ
ಟವಿ9 ನೆಟ್‌ವರ್ಕ್ ಆಯೋಜಿಸಿರುವ What India Thinks Today ಕಾರ್ಯಕ್ರಮದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳು ಮುಖಾಮುಖಿಯಾಗಲಿದೆ. ಫೆ.25ರಿಂದ 27ರವರಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಜಗತ್ತಿನ ನಾಯಕರು ಭಾಗವಹಿಸಲಿದ್ದಾರೆ. ಹಾಗೂ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಟವಿ9 ನೆಟ್‌ವರ್ಕ್ ದೆಹಲಿಯಲ್ಲಿ ದೊಡ್ಡ ಶೃಂಗಸಭೆಯನ್ನು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ಸೇರಿದಂತೆ ವಿಶ್ವದ ನಾಯಕರುಗಳು ಭಾಗವಹಿಸಲಿದ್ದಾರೆ. ಹೌದು ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಕಾರ್ಯಕ್ರಮವನ್ನು ಫೆ.25ರಿಂದ 27ರವರೆಗೆ ಟಿವಿ9 ನಡೆಸಲಿದೆ. ಪ್ರಧಾನಿ ಮೋದಿ ಇದರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕೇಂದ್ರ ಸರ್ಕಾರದ ನಾಯಕರು ಹಾಗೂ ಉದ್ಯಮಿಗಳು ಭಾಗವಹಿಸಲಿದ್ದಾರೆ. ಮೋದಿ ಅವರು ಕೂಡ ಸಂವಾದ ನಡೆಸಲಿದ್ದಾರೆ. ಇದರ ಜತೆಗೆ ಬೇರೆ ಬೇರೆ ರಾಜ್ಯ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ವಿರೋಧ ಪಕ್ಷ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಆಡಳಿತ, ಆರ್ಥಿಕತೆ, ಆರೋಗ್ಯದ ಬಗ್ಗೆಯೂ ಚರ್ಚೆ ನಡೆಯಲಿದೆ. ಕ್ರೀಡೆ ಮತ್ತು ಮನರಂಜನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಹಾಗೂ ವ್ಯಾಪಾರದ ಬಗ್ಗೆಯೂ ಚರ್ಚೆ ನಡೆಯಲಿದ್ದು, ಸ್ಟಾರ್ಟ್‌ಅಪ್‌ಗಳು, ಮಹಿಳಾ ಶಕ್ತಿ, ವಿಶ್ವದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವ, ಜಾಗತಿಕ ದಕ್ಷಿಣದಲ್ಲಿ ಭಾರತದ ಪ್ರಾಬಲ್ಯ ಹೀಗೆ ಅನೇಕ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ.
27ರಂದು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ನಾಯಕರ ಸಮಾವೇಶ ನಡೆಯಲಿದೆ:
ಫೆ.27ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ ಏನು ಯೋಚನೆ ಮಾಡುತ್ತಿದೆ ಎಂಬ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಮತ್ತು ಎಐಎಂಐಎಂ ಮುಖ್ಯಸ್ಥ ಅಸ್ಸಾಮುದ್ದೀನ್ ಓವೈಸಿ ಅವರು ತಮ್ಮ ಅಭಿಪ್ರಾಯಗಳನ್ನು ತಿಳಿಸಲಿದ್ದಾರೆ. ಟಿವಿ9ನ ಭವ್ಯ ವೇದಿಕೆಯಲ್ಲಿ ವಿವಿಧ ಸಂವಾದಗಳನ್ನು ನಡೆಸಲಾಗುತ್ತಿದೆ. ಈ ಮೂಲಕ ದೇಶದ ಜನತೆಯ ಧ್ವನಿಯಾಗುತ್ತಿದೆ. ಆಡಳಿತ ಪಕ್ಷದಿಂದ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮತ್ತು ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳ ಸಿಎಂಗಳೂ ಬರಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ‘ಅಖಿಲ ಭಾರತ ಭಾಯಿಜಾನ್’ ವಿಚಾರದ ಬಗ್ಗೆ ತಮ್ಮ ವಿಷಯ ಮಂಡಿಸಲಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ‘ಯುಪಿ ಯಾರ ರಾಜ್ಯ’ ಎಂಬ ಬಗ್ಗೆ ಸಂವಾದ ನಡೆಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಭಾರತದ ಅರ್ಜುನ’ ವಿಷಯ ಕುರಿತು ಚರ್ಚೆ ನಡೆಸಲಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ‘ಸಬ್ ಬಂತೆ ಹುಯೇ ಹೈ ಜೀ’ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಿದ್ದು, ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ‘ಆಪ್ ಕಾ ಮಾನ್’ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.
ಇದನ್ನೂ ಓದಿ: ಟಿವಿ9 ನೆಟ್ವರ್ಕ್ನ ವೇದಿಕೆಯಲ್ಲಿ ಆರ್ಥಿಕತೆ, ಮಹಿಳಾ ಶಕ್ತಿಯ ಪ್ರದರ್ಶನ
ಇನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಫೆ.27ರಂದು ನಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅವರು ‘ನವ ಭಾರತದ ಶೌರ್ಯ ಕಥೆ’ ಎಂಬ ವಿಚಾರದ ಬಗ್ಗೆ ಸಂವಾದ ನಡೆಸಲಿದ್ದಾರೆ. ತೆರೆಮರೆಯ ಹೀರೋ ಎಂಬ ವಿಷಯದ ಕುರಿತು ಅಮಿತ್ ಶಾ ಮಾತನಾಡಲಿದ್ದಾರೆ. ‘2024ರಲ್ಲಿ ಯಾರ ಶಕ್ತಿ?’ ಎಂಬ ವಿಚಾರದ ಬಗ್ಗೆ ಕಾಂಗ್ರೆಸ್ ನಾಯಕ ಪವನ್ ಖೇಡಾ ಮತ್ತು ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಚರ್ಚೆ ನಡೆಸಲಿದ್ದಾರೆ. ಇದರ ಜತೆಗೆ ‘ಗ್ಲೋಬಲ್ ಸ್ವಾಮಿ’ ಎಂಬ ವಿಚಾರದ ಬಗ್ಗೆ ಯೋಗ ಗುರು ರಾಮ್‌ದೇವ್ ಮಾತನಾಡಲಿದ್ದಾರೆ. ಇನ್ನು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ‘ಜಮ್ಮು ಮತ್ತು ಕಾಶ್ಮೀರದ ಹೊಸ ಕಥೆ’ ಎಂಬ ವಿಚಾರ ಬಗ್ಗೆ ಮಾತನಾಡಲಿದ್ದಾರೆ. ಹಾಗೂ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ‘ಈ ಬಾರಿ 400 ದಾಟಿದ್ದೇವೆ’ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ‘ಹಿಂದುವೋನ್ ಕಾ ಹಿಂದೂಸ್ತಾನ್’ ವಿಚಾರದ ಬಗ್ಗೆ ಮಾತನಾಡಲಿದ್ದಾರೆ.
ಬೇರೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ‘ಯುಪಿಯಲ್ಲಿ 80 ಸೀಟು ಗ್ಯಾರಂಟಿ’ ಕುರಿತು ಅಭಿಪ್ರಾಯ ಮಂಡಿಸಲಿದ್ದು, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ‘ಒಂದು ರಾಷ್ಟ್ರ-ಒಂದು’ ವಿಷಯದ ಕುರಿತು ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ. ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಮತ್ತು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ‘ನವ ಭಾರತದ ಖಾತರಿ’ ಕುರಿತು ಚರ್ಚೆ ನಡೆಸಲಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:39 pm, Thu, 22 February 24