What India Thinks Today: ರೈತರ ಚಳವಳಿಗೆ ಪರಿಹಾರವೇನು? ಟಿವಿ9 ವೇದಿಕೆಯಲ್ಲಿ ಕೃಷಿ ಸಚಿವ ಅರ್ಜುನ್ ಮುಂಡಾ ಉತ್ತರ ಏನು?

ವಾಟ್ ಇಂಡಿಯಾ ಟುಡೇ' ಟಿವಿ9 ನೆಟ್​​​​ವರ್ಕ್​​​ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವರು 'ಜೈ ಕಿಸಾನ್, ಕ್ಯಾ ಸಮಾಧಾನ್' ಎಂಬ ವಿಚಾರದ ಬಗ್ಗೆ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ರೈತರ ಬೇಡಿಕೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ಪರಿಹಾರಗಳನ್ನು ಪ್ರಸ್ತಾಪಿಸಬಹುದು. What India Thinks Today ಕಾರ್ಯಕ್ರಮ ದೆಹಲಿಯಲ್ಲಿ ಫೆ.25ರಿಂದ 27ರವರೆಗೆ ನಡೆಯಲಿದೆ.

What India Thinks Today: ರೈತರ ಚಳವಳಿಗೆ ಪರಿಹಾರವೇನು? ಟಿವಿ9 ವೇದಿಕೆಯಲ್ಲಿ ಕೃಷಿ ಸಚಿವ ಅರ್ಜುನ್ ಮುಂಡಾ ಉತ್ತರ ಏನು?
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 24, 2024 | 2:36 PM

ಟಿವಿ9 ನೆಟ್​​​ವರ್ಕ್​​​ ಬಹುದೊಡ್ಡ ವೇದಿಕೆಯನ್ನು ನಿರ್ಮಾಣ ಮಾಡಿದ ‘ವಾಟ್ ಇಂಡಿಯಾ ಟುಡೇ ಥಿಂಕ್ಸ್’ ಎಂಬ ಕಾರ್ಯಕ್ರಮದ ಮೂಲಕ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದೆ.ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಫೆ.25ರಿಂದ ಫೆ.27ರವರೆಗೆ ದೆಹಲಿಯಲ್ಲಿ ನಡೆಯಲಿದೆ. ಈ ವೇದಿಕೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರು ಅರ್ಜುನ್ ಮುಂಡಾ ಭಾಗವಹಿಸಲಿದ್ದಾರೆ. ದೇಶದ ರೈತರ ಅಸಮಾಧಾನ ಮತ್ತು ಅವರ ಚಳವಳಿಯ ಅಂತ್ಯಕ್ಕೆ ಸಂಬಂಧಿಸಿದಂತೆ ಮುಂಡಾ ಅವರು ಕೆಲವು ಪರಿಣಾಮಕಾರಿ ವಿಚಾರಗಳನ್ನು ಉಲ್ಲೇಖಿಸಬಹುದು. ಈಗಾಗಲೇ ಚಳವಳಿ ಅಂತ್ಯಗೊಳಿಸುವ ಕುರಿತು 3 ಕೇಂದ್ರ ಸಚಿವರ ತಂಡವು ಮುಂಡಾ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದೆ.

ಅರ್ಜುನ್ ಮುಂಡಾ ‘ಜೈ ಕಿಸಾನ್, ಕ್ಯಾ ಸಮಾಧಾನ್’ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ರೈತರ ಬೇಡಿಕೆಗಳು ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ಬಗ್ಗೆ ಮಾತನಾಡಬಹುದು. ಆದರೆ ಈಗಾಗಲೇ ಸರಕಾರ ಮತ್ತು ರೈತ ಸಂಘಟನೆಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಎಲ್ಲವೂ ವಿಫಲವಾಗಿವೆ. ಇದೀಗ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ.

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ರೈತರ ಆಂದೋಲನದ ಬಗ್ಗೆ ಕೃಷಿ ಸಚಿವ ಅರ್ಜುನ್ ಮುಂಡಾ ಈಗಾಗಲೇ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಹಲವು ಸುತ್ತಿನ ಮಾತುಕತೆಗಳಲ್ಲಿ ಕೆಲವು ವಿಷಯಗಳನ್ನು ಒಪ್ಪಿಕೊಳ್ಳಬೇಕು ಅದಕ್ಕೆ ಕೆಲವೊಂದು ಪ್ರಯತ್ನಗಳು ನಡೆಯುತ್ತದೆ. ರೈತರ ಹಿತದೃಷ್ಟಿಯಿಂದ ಕೆಲಸ ಮಾಡಲು ಮೋದಿ ಸರ್ಕಾರ ಬದ್ಧವಾಗಿದೆ. ಇದುವರೆಗೆ ನಡೆದ 4ನೇ ಸುತ್ತಿನ ಮಾತುಕತೆಯಲ್ಲಿ ಸಾಕಷ್ಟು ಅರ್ಥಪೂರ್ಣ ಮಾತುಕತೆ ನಡೆದಿದೆ. ಪ್ರತಿಯೊಬ್ಬರ ಹಿತಾಸಕ್ತಿ ಹೊಂದಿರುವ ಇಂತಹ ಪರಿಹಾರವನ್ನು ನಾವು ಬಯಸುತ್ತೇವೆ. ಮಾತುಕತೆಯಿಂದ ಮಾತ್ರ ಈ ಪರಿಹಾರ ಸಾಧ್ಯ. ನಾವು ಮತ್ತೆ ಮಾತುಕತೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ರೈತರ ಚಳವಳಿ ದೆಹಲಿಗೆ ಬರದಂತೆ ತಡೆಯಲು ಹರಿಯಾಣ ಮತ್ತು ಪಂಜಾಬ್ ಗಡಿಯಲ್ಲಿ ಅತ್ಯಂತ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪಂಜಾಬ್ ಮತ್ತು ಹರಿಯಾಣದ ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಕೂಡ ನಿಷೇಧಿಸಲಾಗಿದೆ. ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ಜೊತೆಗೆ ಪಿಂಚಣಿ, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು, 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ, ವಿದ್ಯುತ್ ದರ ಹೆಚ್ಚಳ ಮತ್ತು 2020-21 ಆಂದೋಲನದಲ್ಲಿ ಸಾವನ್ನಪ್ಪಿದವರಿಗೆ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರಕ್ಕೆ ಒತ್ತಡ ತರಲಾಗಿದೆ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್