What India Thinks Today: ಅಗ್ನಿಪಥ್ ಯೋಜನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?

What India Thinks Today:ಅಗ್ನಿಪಥ ಯೋಜನೆ ನೂತನ ಯೋಜನೆಯಾಗಿರುವುದರಿಂದ ಗೊಂದಲಗಳಿರುವುದು ಸಹಜ ಆದರೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಜಾಗತಿಕ ಸಮಾವೇಶದಲ್ಲಿ ಮಾತನಾಡಿರುವ ಅವರು, ಈ ಯೋಜನೆಯನ್ನು ಜಾರಿಗೊಳಿಸುವ ಮೊದಲು ನಾವು ಸಾಕಷ್ಟು ಚರ್ಚೆ ನಡೆಸಿದ್ದೇವೆ, ಒಂದೂವರೆ ವರ್ಷದಿಂದ ತಯಾರಿ ನಡೆದಿತ್ತು

What India Thinks Today: ಅಗ್ನಿಪಥ್ ಯೋಜನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?
Rajnath Singh
Follow us
TV9 Web
| Updated By: ನಯನಾ ರಾಜೀವ್

Updated on: Jun 18, 2022 | 12:38 PM

ಅಗ್ನಿಪಥ ಯೋಜನೆ ನೂತನ ಯೋಜನೆಯಾಗಿರುವುದರಿಂದ ಗೊಂದಲಗಳಿರುವುದು ಸಹಜ ಆದರೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಜಾಗತಿಕ ಸಮಾವೇಶದಲ್ಲಿ ಮಾತನಾಡಿರುವ ಅವರು, ಈ ಯೋಜನೆಯನ್ನು ಜಾರಿಗೊಳಿಸುವ ಮೊದಲು ನಾವು ಸಾಕಷ್ಟು ಚರ್ಚೆ ನಡೆಸಿದ್ದೇವೆ, ಒಂದೂವರೆ ವರ್ಷದಿಂದ ತಯಾರಿ ನಡೆದಿತ್ತು. ದೇಶದ ನಾಗರಿಕರು ದೇಶಕ್ಕಾಗಿ ಬದ್ಧತೆಯನ್ನು ಹೊಂದಿರಬೇಕೆಂದು ನಾವು ಬಯಸುತ್ತೇವೆ. ಇದು ನಾಲ್ಕು ವರ್ಷಗಳ ಸೇವೆಯಾಗಿದೆ. ನಾಲ್ಕು ವರ್ಷ ಮುಗಿದ ನಂತರ ಅವರ ಕೈಯಲ್ಲಿ 11 ಲಕ್ಷದ 71 ಸಾವಿರ ರೂ ಇರಲಿದೆ.

ಅಗ್ನಿಪಥ್ ಯೋಜನೆಯು ರಕ್ಷಣಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲಿದೆ ಎಂದು ದೇಶದ ರಕ್ಷಣಾ ಸಚಿವರು ಹೇಳಿದ್ದಾರೆ. ಕೆಲವರು ಅಗ್ನಿಪಥ್ ವಿರುದ್ಧ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಆದರೆ ಅಗ್ನಿವೀರರಿಗೆ ಹೊಸ ಉದ್ಯೋಗಾವಕಾಶಗಳು ಸಿಗಲಿವೆ. ಅನೇಕ ರಾಜ್ಯ ಸರ್ಕಾರಗಳು ಅಗ್ನಿವೀರರಿಗೆ ಉದ್ಯೋಗವನ್ನು ನೀಡುವುದಾಗಿ ಭರವಸೆ ನೀಡಿದೆ ಎಂದರು.

ಅಗ್ನಿವೀರರಿಗೆ ಸರ್ಕಾರ ಅಗ್ಗದ ಸಾಲವನ್ನೂ ನೀಡಲಿದೆ, ಅಗ್ನಿವೀರರ ಭವಿಷ್ಯದ ಬಗ್ಗೆ ಎದ್ದಿರುವ ಪ್ರಶ್ನೆಗಳು ಆಧಾರರಹಿತವಾಗಿವೆ ಎಂದು ಹೇಳಿದರು. ಅಗ್ನಿವೀರರ ತರಬೇತಿ, ಮಿಲಿಟರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಇರುವುದಿಲ್ಲ. ಯುದ್ಧದ ಹೊಸ ಸವಾಲುಗಳಿಗೂ ನಾವು ಸಿದ್ಧರಿದ್ದೇವೆ. ಸೇನೆಯಂತೆ ತರಬೇತಿಯನ್ನು ಪಡೆಯಲಿದ್ದಾರೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ರರಿಗೆ ಶೇಕಡಾ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಶನಿವಾರ ಪ್ರಕಟಿಸಿದೆ.

ಗೃಹ ಸಚಿವರ ಕಚೇರಿ ಟ್ವೀಟ್ ಮಾಡಿದ್ದು, “ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ಶೇಕಡಾ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸಲು ಗೃಹ ವ್ಯವಹಾರಗಳ ಸಚಿವಾಲಯ ನಿರ್ಧರಿಸಿದೆ.”

ಗೃಹ ವ್ಯವಹಾರಗಳ ಸಚಿವಾಲಯವು CAPF ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಘೋಷಿಸಿದೆ.

ಮತ್ತೊಂದು ಟ್ವೀಟ್‌ನಲ್ಲಿ, ಗೃಹ ಸಚಿವಾಲಯದ ಕಚೇರಿಯು, ‘ಗೃಹ ವ್ಯವಹಾರಗಳ ಸಚಿವಾಲಯವು ಸಿಎಪಿಎಫ್‌ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರರಿಗೆ ಮೂರು ವರ್ಷಗಳ ಗರಿಷ್ಠ ವಯಸ್ಸಿನ ಮಿತಿಯನ್ನು ಸಡಿಲಿಸಲು ನಿರ್ಧರಿಸಿದೆ. ಜೊತೆಗೆ, ಮೊದಲ ಬ್ಯಾಚ್ ಅಗ್ನಿವೀರರಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಐದು ವರ್ಷಗಳ ಸಡಿಲಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು