AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Keller: ಭಾರತೀಯ ಸೇನೆಯ ಹೊಸ ಕಾರ್ಯಾಚರಣೆ ‘ಆಪರೇಷನ್ ಕೆಲ್ಲರ್’ ಏನಿದು?

What Is Operation Keller: ಆಪರೇಷನ್ ಸಿಂಧೂರ್​ ವಿಜಯದ ಬಳಿಕ ಭಾರತೀಯ ಸೇನೆಯು ಆಪರೇಷನ್ ಕೆಲ್ಲರ್​ ಎಂಬ ಕಾರ್ಯಾಚರಣೆಯನ್ನು ಶುರು ಮಾಡಿದೆ. ಈ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಕೊಲ್ಲಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಸೇನೆಯು ಕಾರ್ಯಾಚರಣೆ ಬಗ್ಗೆ ಅಧಿಕೃತ ಹೇಳಿಕೆಯನ್ನು ನೀಡಿದೆ. ಪೋಸ್ಟ್​ನಲ್ಲಿ ಆಪರೇಷನ್ ಕೆಲ್ಲರ್ ಮೇ 13 2025ರಂದು ರಾಷ್ಟ್ರೀಯ ರೈಫಲ್ಸ್ ಘಟಕದ ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನು ಆಧರಿಸಿ, ಭಾರತೀಯ ಸೇನೆಯು ಶೋಪಿಯಾನ್‌ನ ಶೋಕಲ್ ಕೆಲ್ಲರ್‌ನಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಬರೆಯಲಾಗಿದೆ.

Operation Keller: ಭಾರತೀಯ ಸೇನೆಯ ಹೊಸ ಕಾರ್ಯಾಚರಣೆ ‘ಆಪರೇಷನ್ ಕೆಲ್ಲರ್’ ಏನಿದು?
ಭಾರತೀಯ ಸೇನೆ Image Credit source: Swarajya
ನಯನಾ ರಾಜೀವ್
|

Updated on: May 14, 2025 | 7:43 AM

Share

ನವದೆಹಲಿ, ಮೇ 14: ಆಪರೇಷನ್ ಸಿಂಧೂರ್(Operation Sindoor) ಯಶಸ್ಸಿನಿಂದಾಗಿ ಭಾರತೀಯ ಸೇನೆಯ ನೈತಿಕ ಸ್ಥೈರ್ಯ ಹೆಚ್ಚಾಗಿದೆ. ಸೇನೆಯು ಈಗ ಭಯೋತ್ಪಾದನೆ ವಿರುದ್ಧ ಹೊಸ ಕಾರ್ಯಾಚರಣೆಯನ್ನು ಆರಂಭಿಸಿದೆ ಅದಕ್ಕೆ ‘ಆಪರೇಷನ್ ಕೆಲ್ಲರ್’(Operation Keller) ಎಂದು ಹೆಸರಿಡಲಾಗಿದೆ. ಮಂಗಳವಾರ ಭಾರತೀಯ ಸೇನೆಯು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲರ್ ದಡ್ಡ ಅರಣ್ಯ ಪ್ರದೇಶದಲ್ಲಿ ಲಷ್ಕರ್​-ಎ-ತೊಯ್ಬಾದ ಮೂವರು ಉಗ್ರರನ್ನು ಸದೆಬಡಿದಿದೆ. ಹೀಗಾಗಿ ಈ ಪ್ರದೇಶದ ಹೆಸರನ್ನೇ ನಾಮಕರಣ ಮಾಡಲಾಗಿದೆ.  ಈ ಹಿಂದೆ ಶೋಕಲ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ರಾಷ್ಟ್ರೀಯ ರೈಫಲ್ಸ್ ಘಟಕವು ನಿಖರವಾದ ಗುಪ್ತಚರ ಮಾಹಿತಿಯನ್ನು ನೀಡಿತ್ತು. ಅದರ ನಂತರ ಸೇನೆಯು ಈ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.

ಸಾಮಾಜಿಕ ಮಾಧ್ಯಮದಲ್ಲಿ ಸೇನೆಯು ಕಾರ್ಯಾಚರಣೆ ಬಗ್ಗೆ ಅಧಿಕೃತ ಹೇಳಿಕೆಯನ್ನು ನೀಡಿದೆ. ಪೋಸ್ಟ್​ನಲ್ಲಿ ಆಪರೇಷನ್ ಕೆಲ್ಲರ್ ಮೇ 13 2025ರಂದು ರಾಷ್ಟ್ರೀಯ ರೈಫಲ್ಸ್ ಘಟಕದ ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನು ಆಧರಿಸಿ, ಭಾರತೀಯ ಸೇನೆಯು ಶೋಪಿಯಾನ್‌ನ ಶೋಕಲ್ ಕೆಲ್ಲರ್‌ನಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಬರೆಯಲಾಗಿದೆ.

ಇದನ್ನೂ ಓದಿ
Image
ಪ್ರಧಾನಿ ಮೋದಿ ಈ ವಿಚಾರಗಳನ್ನು ಗೆಲ್ಲಲೇಬೇಕು, ಎಚ್ಚರ ತಪ್ಪಿದ್ರೆ ಸಂಕಷ್ಟ!
Image
ಭಾರತ-ಪಾಕ್ ಕದನ ವಿರಾಮಕ್ಕೆ ಏಕಾಏಕಿ ಸಿದ್ಧರಾಗಿದ್ದೇಕೆ?
Image
ಪಾಕ್​ ದಾಳಿ: ಅವಳಿ ಮಕ್ಕಳ ಸಾವು, ತಂದೆ ಐಸಿಯುನಲ್ಲಿ, ಇಡೀ ಕುಟುಂಬವೇ ನಾಶ
Image
ನರೇಂದ್ರ ಮೋದಿ ಅವರಿಂದ ರವಾನೆಯಾದ ಸಂದೇಶಗಳೇನು?

ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರು ಭಾರೀ ಗುಂಡು ಹಾರಿಸಿದರು, ಅದಕ್ಕೆ ಸೂಕ್ತ ಪ್ರತ್ಯುತ್ತರ ನೀಡಲಾಯಿತು ಎಂದು ಸೇನೆ ತಿಳಿಸಿದೆ. ಕಾರ್ಯಾಚರಣೆಯಲ್ಲಿ ಮೂವರು ಕಟ್ಟಾ ಭಯೋತ್ಪಾದಕರು ಸಾವನ್ನಪ್ಪಿದರು. ಮತ್ತು ಈ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರ ಹತ್ಯೆ ವರದಿಗಳ ಪ್ರಕಾರ, ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಆದಾಗ್ಯೂ, ನಂತರ ಭಯೋತ್ಪಾದಕರು ಶೋಪಿಯಾನ್‌ನಲ್ಲಿಯೂ ಗುಂಡು ಹಾರಿಸಲು ಪ್ರಾರಂಭಿಸಿದರು. ಕಾರ್ಯಾಚರಣೆಯ ಸಮಯದಲ್ಲಿ ಭಾರತೀಯ ಸೇನೆಯು ಅಂತಿಮವಾಗಿ ಭಯೋತ್ಪಾದಕರನ್ನು ಕೊಂದಿತು.

ಮತ್ತಷ್ಟು ಓದಿ: ನಮ್ಮ ಡ್ರೋನ್‌, ಕ್ಷಿಪಣಿಗಳ ಬಗ್ಗೆ ಯೋಚಿಸಿದರೂ ಪಾಕಿಸ್ತಾನಕ್ಕೆ ನಿದ್ರೆ ಬರುವುದಿಲ್ಲ; ಆದಂಪುರ ವಾಯುನೆಲೆಯಲ್ಲಿ ಪ್ರಧಾನಿ ಮೋದಿ

ಈ ಸಮಯದಲ್ಲಿ ಶಾಹಿದ್ ಕುಟ್ಟೆ, ಅದ್ನಾನ್ ಶಫಿ ದಾರ್ ಮತ್ತು ಹರಿಸ್ ನಜೀರ್ ಎಂಬ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ. ಇವರೆಲ್ಲರೂ ಪಾಕಿಸ್ತಾನ ಬೆಂಬಲಿತ ಲಷ್ಕರ್-ಎ-ತೈಬಾ (ಎಲ್‌ಇಟಿ) ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು.

ಏತನ್ಮಧ್ಯೆ, ಭಾರತೀಯ ಗುಪ್ತಚರ ಸಂಸ್ಥೆಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಅವರ ಪೋಸ್ಟರ್‌ಗಳನ್ನು ಶೋಪಿಯಾನ್‌ನಲ್ಲಿ ಅಂಟಿಸಿವೆ. ಛಾಯಾಚಿತ್ರಗಳ ಕೆಳಗೆ ಸೇನೆಯು ಭಯೋತ್ಪಾದನಾ ಮುಕ್ತ ಕಾಶ್ಮೀರ ಎಂಬ ಘೋಷಣೆಯನ್ನು ಸಹ ಬರೆದಿದೆ.

ಅದೇ ಸಮಯದಲ್ಲಿ, ಈ ಭಯೋತ್ಪಾದಕರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡುವ ವ್ಯಕ್ತಿಗೆ 20 ಲಕ್ಷ ರೂ.ಗಳ ಬಹುಮಾನವನ್ನೂ ಘೋಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ