Chandrababu Naidu: ಆಂಧ್ರಪ್ರದೇಶದಲ್ಲಿ ಕೌಶಲ್ಯ ಗಣತಿಯ ಭರವಸೆ ನೀಡಿದ್ದ ಚಂದ್ರಬಾಬು ನಾಯ್ಡು; ಏನಿದರ ಅರ್ಥ?

ಈ ಬಾರಿ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಪ್ರಣಾಳಿಕೆಯಲ್ಲಿ ಆಂಧ್ರಪ್ರದೇಶದಲ್ಲಿ ಕೌಶಲ್ಯ ಗಣತಿ ನಡೆಸುವುದಾಗಿ ಭರವಸೆ ನೀಡಿತ್ತು. ಈ ಹೊಸ ಪರಿಕಲ್ಪನೆಯ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿಲ್ಲ. ಕೌಶಲ್ಯ ಗಣತಿಯ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

Chandrababu Naidu: ಆಂಧ್ರಪ್ರದೇಶದಲ್ಲಿ ಕೌಶಲ್ಯ ಗಣತಿಯ ಭರವಸೆ ನೀಡಿದ್ದ ಚಂದ್ರಬಾಬು ನಾಯ್ಡು; ಏನಿದರ ಅರ್ಥ?
ಚಂದ್ರಬಾಬು ನಾಯ್ಡು
Follow us
|

Updated on: Jun 07, 2024 | 8:31 PM

ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಮತ್ತು ಎನ್‌ಡಿಎ ಸದಸ್ಯ ಚಂದ್ರಬಾಬು ನಾಯ್ಡು (Chandrababu Naidu) ಅವರು ಆಂಧ್ರಪ್ರದೇಶದಲ್ಲಿ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿ ಕೌಶಲ್ಯ ಗಣತಿ ನಡೆಸುವುದಾಗಿ ಘೋಷಿಸಿದ್ದರು. ಕೌಶಲ್ಯ ಗಣತಿಯು ಆಂಧ್ರಪ್ರದೇಶ (Andhra Pradesh Elections) ರಾಜ್ಯದಾದ್ಯಂತ ಇರುವ ವ್ಯಕ್ತಿಗಳ ಕೌಶಲ್ಯಗಳನ್ನು ಗುರುತಿಸುವ ಮತ್ತು ಪಟ್ಟಿ ಮಾಡುವ ಗುರಿಯನ್ನು ಹೊಂದಿದೆ. ಈ ಗಣತಿಯ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

ಕೌಶಲ್ಯ ಗಣತಿ ಎಂದರೆ ಜನರು ಹೊಂದಿರುವ ಅಥವಾ ಆಸಕ್ತಿ ಇರುವ ಕೌಶಲ್ಯಗಳ ಆಧಾರದ ಮೇಲೆ ಸೂಕ್ತವಾದ ತರಬೇತಿಯನ್ನು ನೀಡುವುದರ ಮೂಲಕ ಉತ್ಪಾದಕತೆಯನ್ನು ಹೆಚ್ಚಿಸುವುದು. ಹೀಗಾಗಿ ಅವರನ್ನು ಹೆಚ್ಚು ಉದ್ಯೋಗಿಯನ್ನಾಗಿ ಮಾಡಬಹುದು ಮತ್ತು ಒಟ್ಟಾರೆ ದಕ್ಷತೆಯನ್ನು ಹೆಚ್ಚಿಸಬಹುದು.

ಆಂಧ್ರಪ್ರದೇಶದ ಟಿಡಿಪಿ-ಬಿಜೆಪಿ-ಜೆಎಸ್‌ಪಿ ಮೈತ್ರಿಯು ರಾಜ್ಯದಲ್ಲಿ ಮುಂಬರುವ ಚುನಾವಣೆಗೆ ‘ಪ್ರಜಾ ಪ್ರಣಾಳಿಕೆ’ ಎಂದು ನಾಮಕರಣಗೊಂಡ ತನ್ನ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮಹಿಳೆಯರಿಗೆ ಮಾಸಿಕ 1,500 ಪಿಂಚಣಿ ನೀಡುವುದಾಗಿ ಭರವಸೆ ನೀಡಿದೆ.

ಇದನ್ನೂ ಓದಿ: ಸರ್ಕಾರ ರಚನೆಗೂ ಮುನ್ನ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಭೇಟಿಯಾದ ಪ್ರಧಾನಿ ಮೋದಿ

ಗುಂಟೂರಿನ ಉಂಡವಳ್ಳಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಟಿಡಿಪಿ ರಾಷ್ಟ್ರೀಯ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು, ಜೆಎಸ್‌ಪಿ ಮುಖ್ಯಸ್ಥ ಕೆ ಪವನ್ ಕಲ್ಯಾಣ್ ಮತ್ತು ಆಂಧ್ರಪ್ರದೇಶ ಬಿಜೆಪಿ ಉಸ್ತುವಾರಿ ಸಿದ್ಧಾರ್ಥ್ ನಾಥ್ ಸಿಂಗ್ ಅವರು ಟಿಡಿಪಿ ಮತ್ತು ಜೆಎಸ್‌ಪಿ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದರು.

ರಾಜ್ಯದ ಮಹಿಳೆಯರಿಗೆ ಮಾಸಿಕ 1,500 ರೂ. ಇದರೊಂದಿಗೆ, ಅವರು ಹೆಚ್ಚುವರಿಯಾಗಿ ವಾರ್ಷಿಕ 18,000 ರೂಗಳನ್ನು ಪಡೆಯುತ್ತಾರೆ. ಇದು 5 ವರ್ಷಗಳಲ್ಲಿ 90,000 ರೂ. ಆಗುತ್ತದೆ. ಇದಲ್ಲದೆ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣವಿದೆ’ ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಕಾಲಿಗೆ ಬೀಳಲು ಬಂದ ನಿತೀಶ್​ ಕುಮಾರ್​ಗೆ ಪಿಎಂ ನರೇಂದ್ರ ಮೋದಿ ಮಾಡಿದ್ದೇನು?

ತೆಲುಗು ದೇಶಂ ಪಕ್ಷ, ಜನಸೇನಾ ಮತ್ತು ಬಿಜೆಪಿ ಸೇರಿ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿವೆ. ಹಾಗೇ, ತಲ್ಲಿಕಿ ವಂದನಂ ಮೂಲಕ ಶಾಲೆಗೆ ಹೋಗುವ ಪ್ರತಿ ಮಗುವಿಗೆ 15,000 ರೂಪಾಯಿ ನೀಡುವುದಾಗಿ ಪಕ್ಷಗಳು ಹೇಳಿವೆ.

ಜೂನ್ 12ರಂದು ಆಂಧ್ರ ಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್