10 ವರ್ಷದಲ್ಲಿ ಕೇಂದ್ರ ಸರ್ಕಾರ ಮಾಡಿದ ಕೆಲಸಗಳ ಬಗ್ಗೆ ನಿಮ್ಮ ಅಭಿಪ್ರಾಯವೇನು?, ಜನ್​​ ಮ್ಯಾನ್​​​​​​ ಸಮೀಕ್ಷೆ ಆರಂಭಿಸಿದ ಮೋದಿ

ಕೇಂದ್ರ ಸರ್ಕಾರ 10 ವರ್ಷದಲ್ಲಿ ಮಾಡಿದ ಕೆಲಸದ ಬಗ್ಗೆ ಜನರ ಅಭಿಪ್ರಾಯ ಏನು? ಎಂಬುದನ್ನು ತಿಳಿದುಕೊಳ್ಳಲು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನ್​​ ಮ್ಯಾನ್​​​​ ಸಮೀಕ್ಷೆಯನ್ನು ಆರಂಭಿಸಿದೆ. ಜನರಲ್ಲಿ ನಮ್ಮ ಸರ್ಕಾರದ ಬಗ್ಗೆ ಯಾವ ಅಭಿಪ್ರಾಯವಿದೆ. ಹಾಗೂ ಸಂಸದರು, ಸಚಿವರ ಬಗ್ಗೆ ಇರುವ ಅಭಿಪ್ರಾಯ ಏನು? ಎಂಬುದನ್ನು ಈ ಮೂಲಕ ತಿಳಿದುಕೊಳ್ಳಲು ಪ್ರಯತ್ನವನ್ನು ಮಾಡುತ್ತಿದೆ.

10 ವರ್ಷದಲ್ಲಿ ಕೇಂದ್ರ ಸರ್ಕಾರ ಮಾಡಿದ ಕೆಲಸಗಳ ಬಗ್ಗೆ ನಿಮ್ಮ ಅಭಿಪ್ರಾಯವೇನು?, ಜನ್​​ ಮ್ಯಾನ್​​​​​​ ಸಮೀಕ್ಷೆ ಆರಂಭಿಸಿದ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 01, 2024 | 6:04 PM

ದೆಹಲಿ, ಜ.1: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ 10 ವರ್ಷದ ಆಡಳಿತ ಬಗ್ಗೆ ಹಾಗೂ ಭಾರತದ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸದ ಬಗ್ಗೆ ಜನರ ಅಭಿಪ್ರಾಯವನ್ನು ಕೇಳಿದ್ದಾರೆ. ಈ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನು ‘ನಮೋ’ ಅಪ್ಲಿಕೇಶನ್ ಮೂಲಕ ಜನ್​​ ಮ್ಯಾನ್​​​​​​ ಸಮೀಕ್ಷೆ (Jan Man Survey) ಅಭಿಮಾನದ ಮೂಲಕ ತಿಳಿಸಬಹುದು. ಪ್ರಧಾನಿ ಮೋದಿ ಅವರು 10 ವರ್ಷದಲ್ಲಿ ಮಾಡಿದ ಕೆಲಸದ ಬಗ್ಗೆ ಹಾಗೂ ಸಂಸದರು ತಮ್ಮ ಕ್ಷೇತ್ರದಲ್ಲಿ ಮಾಡಿದ ಕೆಲಸದ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನು ಈ ಅಭಿಯಾನದ ಮೂಲಕ ತಿಳಿಸಬಹುದು.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದಂತೆ, ಬಿಜೆಪಿ ಸರ್ಕಾರ ಈ ಅಭಿಯಾನವನ್ನು ಆರಂಭಿಸಿದೆ. ಈ ಮೂಲಕ ತಮ್ಮ ಸರ್ಕಾರದ ಮತ್ತು ಸಂಸದರು, ಸಚಿವರ ಕಾರ್ಯಕ್ಷಮತೆಯ ಬಗ್ಗೆ ಜನರಲ್ಲಿರುವ ಅಭಿಪ್ರಾಯ ಏನು? ಎಂಬುದನ್ನು ಈ ಮೂಲಕ ತಿಳಿಯುತ್ತಿದ್ದಾರೆ. ಇನ್ನು ಈ ಅಭಿಮಾನದ ಬಗ್ಗೆ ಪ್ರಧಾನಿ ಮೋದಿ ಅವರೇ ತಮ್ಮ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು? NaMo ಅಪ್ಲಿಕೇಶನ್‌ನಲ್ಲಿ ಜನ್ ಮ್ಯಾನ್ ಸಮೀಕ್ಷೆಯ ಮೂಲಕ ನಿಮ್ಮ ಪ್ರತಿಕ್ರಿಯೆಯನ್ನು ನೇರವಾಗಿ ನನ್ನೊಂದಿಗೆ ಹಂಚಿಕೊಳ್ಳಿ ಎಂದು ಮೋದಿ ಅವರು ಲಿಂಕ್​​ನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಈಗ ಡಿಜಿಲಾಕರ್ ಮೂಲಕ ಪಿಂಚಣಿ ಪ್ರಮಾಣಪತ್ರ ಪಡೆಯಿರಿ: ಹೇಗೆ ನೋಡಿ

ಮೋದಿ ಎಕ್ಸ್​​​ ಪೋಸ್ಟ್​​​ ಇಲ್ಲಿದೆ

ಜನ್ ಮ್ಯಾನ್ ಸಮೀಕ್ಷೆ’ಯು ಆಡಳಿತ ಮತ್ತು ನಾಯಕತ್ವದ ವಿವಿಧ ಅಂಶಗಳ ಕುರಿತು ಜನರ ಪ್ರತಿಕ್ರಿಯೆಗಳನ್ನು ಪಡೆದುಕೊಂಡು ಮತ್ತು ಅವರ ಪ್ರಶ್ನೆಗಳು ಹಾಗೂ ಸರ್ಕಾರದ ಮೇಲೆ ಇರುವ ಜನ ಅಭಿಪ್ರಾಯವನ್ನು ಸಂಗ್ರಹ ಮಾಡಿ ಮುಂದಿನ ದಿನಗಳಲ್ಲಿ ಜನರಿಗೆ ಬೇಕಾದ ಅಭಿವೃದ್ಧಿ ಮತ್ತು ಕ್ಷೇತ್ರಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. 2018ರಲ್ಲೂ ಈ ರೀತಿಯ ಸಮೀಕ್ಷೆಯನ್ನು ನಡೆಸಿದರು. NaMo ಅಪ್ಲಿಕೇಶನ್‌ 2 ಕೋಟಿಗೂ ಅಧಿಕ ಜನರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ