AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಮಾಧ್ಯಮಗಳೂ ಇದನ್ನೇ ಅನುಸರಿಸುತ್ತವೆ; ಟಿವಿ9ಗೆ ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಜಾಗತಿಕ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿದರು. ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಭಾಷಣದಲ್ಲಿ ಪ್ರಧಾನಿ ಮೋದಿ ಟಿವಿ9 ಅನ್ನು ಶ್ಲಾಘಿಸಿದರು. ಈ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಟಿವಿ9 ಸಕಾರಾತ್ಮಕ ಉಪಕ್ರಮವನ್ನು ತೆಗೆದುಕೊಂಡಿದೆ. ಹೋಟೆಲ್ ಸಂಪ್ರದಾಯವನ್ನು ಮುರಿದು ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ಟಿವಿ9 ಅನ್ನು ಅಭಿನಂದಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಬೇರೆ ಮಾಧ್ಯಮಗಳೂ ಇದನ್ನೇ ಅನುಸರಿಸುತ್ತವೆ; ಟಿವಿ9ಗೆ ಪ್ರಧಾನಿ ಮೋದಿ ಶ್ಲಾಘನೆ
M Modi Praises Tv9 Network At Witt 2025
ಸುಷ್ಮಾ ಚಕ್ರೆ
|

Updated on:Mar 28, 2025 | 6:48 PM

Share

ನವದೆಹಲಿ, ಮಾರ್ಚ್ 28: ಟಿವಿ9 ಆಯೋಜಿಸಿರುವ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit)’ ಜಾಗತಿಕ ಶೃಂಗಸಭೆಯಲ್ಲಿ ಟಿವಿ9 ವಾಹಿನಿಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಟಿವಿ9 ಶೃಂಗಸಭೆ ದೇಶದ ಒಳಿತಿಗಾಗಿ ಎಂದ ಪ್ರಧಾನಿ ಮೋದಿ ಅವರು ಟಿವಿ9 ಕ್ರೀಡಾ ಅಭಿಯಾನವನ್ನು ಶ್ಲಾಘಿಸಿದರು. ಇಂತಹ ಅದ್ಭುತ ಪ್ರತಿಭೆಗಳನ್ನು ಕಂಡುಹಿಡಿದಿದ್ದಕ್ಕಾಗಿ ನಿಮಗೆ ಅಭಿನಂದನೆಗಳು ಎಂದು ಹೇಳಿದರು. ಹಾಗೇ, ‘ಇಂದು ಟಿವಿ9 ಏನು ಯೋಚಿಸುತ್ತದೆಯೋ ಇತರ ಮಾಧ್ಯಮ ಕೇಂದ್ರಗಳು ಶೀಘ್ರದಲ್ಲೇ ಇದನ್ನು ಅನುಸರಿಸುತ್ತವೆ’ ಎಂದು ಪ್ರಧಾನಿ ಮೋದಿ WITT 2025 ಜಾಗತಿಕ ಶೃಂಗಸಭೆಯಲ್ಲಿ ಟಿವಿ9 ನೆಟ್‌ವರ್ಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಜಾಗತಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಟಿವಿ9 ನೆಟ್‌ವರ್ಕ್ ಅನ್ನು ಶ್ಲಾಘಿಸಿದರು. “ಈ ವಾಹಿನಿಯ ಬೆಳೆಯುತ್ತಿರುವ ಜಾಗತಿಕ ಪ್ರೇಕ್ಷಕರು ಮತ್ತು ಭಾರತದ ಹೆಚ್ಚುತ್ತಿರುವ ಪ್ರಭಾವದ ಬಗ್ಗೆ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದರು. ಟಿವಿ9ಗೆ ಅಭಿನಂದನೆಗಳು. ಟಿವಿ9ನ ಈ ಶೃಂಗಸಭೆಯಲ್ಲಿ ಅನೇಕ ವಿಷಯಗಳನ್ನು ಚರ್ಚಿಸಲಾಗುವುದು. ಇಂದು ನಾವು ಏನು ಯೋಚಿಸುತ್ತೇವೆಯೋ ಅದು ಭವಿಷ್ಯವನ್ನು ವಿನ್ಯಾಸಗೊಳಿಸುತ್ತದೆ. ಈ ದಶಕದಲ್ಲಿ ನಾವು ಅಭಿವೃದ್ಧಿ ಹೊಂದಿದ ಭಾರತದ ಗುರಿಯತ್ತ ಸಾಗುತ್ತಿದ್ದೇವೆ. ಇದರಲ್ಲಿ ಪ್ರತಿಯೊಬ್ಬರ ಪ್ರಯತ್ನಗಳು ಅಗತ್ಯ ಎಂದು ನಾನು ಕೆಂಪು ಕೋಟೆಯ ಭಾಷಣದಲ್ಲಿ ಹೇಳಿದ್ದೇನೆ. ಈ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಟಿವಿ9 ಸಕಾರಾತ್ಮಕ ಉಪಕ್ರಮವನ್ನು ತೆಗೆದುಕೊಂಡಿದೆ. ಹೋಟೆಲ್ ಸಂಪ್ರದಾಯವನ್ನು ಮುರಿದು ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ಟಿವಿ9 ಅನ್ನು ಅಭಿನಂದಿಸುತ್ತೇನೆ. ಮುಂಬರುವ ದಿನಗಳಲ್ಲಿ ಇತರ ಮಾಧ್ಯಮ ಸಂಸ್ಥೆಗಳು ಸಹ ಇದನ್ನು ಅನುಸರಿಸಬೇಕಾಗುತ್ತದೆ. ನಿಮ್ಮೆಲ್ಲರೊಂದಿಗೆ, ಭರವಸೆ ನೀಡುವ ಜನರೊಂದಿಗೆ ಫೋಟೋ ತೆಗೆಸಿಕೊಳ್ಳುವ ಅವಕಾಶ ನನಗೆ ಸಿಕ್ಕಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ
Image
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
Image
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
Image
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
Image
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?

ಇದನ್ನೂ ಓದಿ: ಟಿವಿ9 ನೆಟ್​ವರ್ಕ್​ನ WITT ಶೃಂಗಸಭೆಗೆ ಮತ್ತೆ ವೇದಿಕೆ ಸಿದ್ಧ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಭಾಗಿ

“ಟಿವಿ9 ನೆಟ್‌ವರ್ಕ್ ದೊಡ್ಡ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿರುವುದರ ಜೊತೆಗೆ, ಟಿವಿ9 ಈಗ ಬೆಳೆಯುತ್ತಿರುವ ಜಾಗತಿಕ ವೀಕ್ಷಕರನ್ನು ಸಹ ಆಕರ್ಷಿಸುತ್ತಿದೆ. ಟಿವಿ9 ನೆಟ್‌ವರ್ಕ್ ಅಪಾರ ಪ್ರೇಕ್ಷಕರನ್ನು ಹೊಂದಿದೆ ಮತ್ತು ಜಾಗತಿಕ ಪ್ರೇಕ್ಷಕರು ಈಗ ರೂಪುಗೊಳ್ಳುತ್ತಿದ್ದಾರೆ. ಈ ಶೃಂಗಸಭೆಯಲ್ಲಿ, ಅನೇಕ ದೇಶಗಳಲ್ಲಿನ ಭಾರತೀಯ ವಲಸಿಗರ ಜನರು ನೇರಪ್ರಸಾರದಲ್ಲಿ ಸೇರಿದ್ದಾರೆ” ಎಂದು ಹೇಳಿದರು.

WITT ಶೃಂಗಸಭೆಯ 3ನೇ ಆವೃತ್ತಿ:

ಟಿವಿ9 ನೆಟ್‌ವರ್ಕ್‌ನ ಮೆಗಾ ಪ್ಲಾಟ್‌ಫಾರ್ಮ್ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ಯ ಮೂರನೇ ಆವೃತ್ತಿಯು ಇಂದು (ಮಾರ್ಚ್ 28) ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರಾರಂಭವಾಯಿತು. ಮಾರ್ಚ್ 28-29ರಂದು ನಡೆಯುವ ಈ ಎರಡು ದಿನಗಳ ಕಾರ್ಯಕ್ರಮವು ರಾಜಕೀಯ, ಕ್ರೀಡೆ, ಸಿನಿಮಾ ಮತ್ತು ಉದ್ಯಮದ ಪ್ರಮುಖ ವ್ಯಕ್ತಿಗಳನ್ನು ಒಟ್ಟುಗೂಡಿಸಿ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚಿಸಲಿದೆ. ಈ ಶೃಂಗಸಭೆಯು ರಾಜಕೀಯ, ಆಡಳಿತ, ಅರ್ಥಶಾಸ್ತ್ರ, ಆರೋಗ್ಯ, ಸಂಸ್ಕೃತಿ ಮತ್ತು ಕ್ರೀಡೆಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ಮುಕ್ತ ಚರ್ಚೆಗಳನ್ನು ಪ್ರೋತ್ಸಾಹಿಸುವುದಕ್ಕೆ ಹೆಸರುವಾಸಿಯಾದ ಇದು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಪ್ರಸ್ತುತ ವ್ಯವಹಾರಗಳನ್ನು ವಿಶ್ಲೇಷಿಸಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ: ಭಾರತ ಜಾಗತಿಕ ದಕ್ಷಿಣದ ದೇಶಗಳ ಧ್ವನಿಯಾಗುತ್ತಿದೆ; ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಟಿವಿ9 ಗ್ರೂಪ್ 2024ರಲ್ಲಿ ದೆಹಲಿಯಲ್ಲಿ WITT ಶೃಂಗಸಭೆಯ ಮೊದಲ ಆವೃತ್ತಿಯನ್ನು ಪ್ರಾರಂಭಿಸಿತು. ಆ ವರ್ಷದ ನಂತರ, ಟಿವಿ9 ನೆಟ್‌ವರ್ಕ್ ನವೆಂಬರ್ 21ರಿಂದ 23 ರವರೆಗೆ ಜರ್ಮನಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿತು. ಜರ್ಮನಿ ಶೃಂಗಸಭೆಯಲ್ಲಿ ಭಾರತ ಮತ್ತು ಜರ್ಮನಿ ನಡುವಿನ ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ಸಹಕಾರವನ್ನು ಚರ್ಚಿಸಿದ ಜಾಗತಿಕ ನಾಯಕರು ಭಾಗವಹಿಸಿದ್ದರು. ಪ್ರಧಾನಿ ಮೋದಿ ಕೂಡ ಆ ಕಾರ್ಯಕ್ರಮದ ಭಾಗವಾಗಿದ್ದರು. ಅಲ್ಲಿ ಅವರು ಪ್ರಮುಖ ಅಭಿವೃದ್ಧಿ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದರು. 2025ರ ಈ ಶೃಂಗಸಭೆಯು ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಹಲವಾರು ದೇಶಗಳಲ್ಲಿನ ಭಾರತೀಯ ವಲಸಿಗರ ವೀಕ್ಷಕರು ನೇರಪ್ರಸಾರದಲ್ಲಿ ಭಾಗವಹಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Fri, 28 March 25

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ