Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಆಹ್ವಾನ ನೀಡುವ ಅಗತ್ಯವೇನಿತ್ತು?: ವಿಪಕ್ಷ ನಾಯಕರ ಪ್ರಶ್ನೆ

ರಾಮಮಂದಿರ ಬಿಜೆಪಿಯದ್ದೇ? ಇದು ನಮ್ಮ ದೇಶದ ಪ್ರತಿಯೊಬ್ಬರಿಗೂ ಸೇರಿದೆ. ಇದು ನಮ್ಮ ಸನಾತನ ಧರ್ಮದ ಬಹು ದೊಡ್ಡ ಸಂಕೇತ. ಕೊನೆಗೂ ರಾಮಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಹೇಳಿದ್ದಾರೆ.ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಜನವರಿ 22, 2024 ರಂದು ಅಯೋಧ್ಯೆ ದೇವಾಲಯದ ರಾಮಮಂದಿರದ ಗರ್ಭಗೃಹದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಲು ಪ್ರಧಾನಿ ಮೋದಿಯನ್ನು ಆಹ್ವಾನಿಸಿದೆ.

ರಾಮ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಆಹ್ವಾನ ನೀಡುವ ಅಗತ್ಯವೇನಿತ್ತು?: ವಿಪಕ್ಷ ನಾಯಕರ ಪ್ರಶ್ನೆ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Oct 26, 2023 | 1:42 PM

ದೆಹಲಿ ಅಕ್ಟೋಬರ್ 26:  2024 ರ ಜನವರಿ 22 ರಂದು ನಿಗದಿಯಾಗಿರುವ ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರದ (Ram Temple) ಉದ್ಘಾಟನೆಗೆ ಪ್ರಧಾನಿ  ನರೇಂದ್ರ ಮೋದಿಯವರಿಗೆ (Narendra Modi) ಆಹ್ವಾನ ನೀಡಿದ್ದು ಯಾಕೆ ಎಂದು ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದ್ದು, ಇದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷದ ಕಾರ್ಯಕ್ರಮವಾಗುತ್ತದೆಯೇ ಎಂದು ಕೇಳಿದ್ದಾರೆ. ಕೇವಲ ಒಂದು ಪಕ್ಷಕ್ಕೆ ಮಾತ್ರ ಆಹ್ವಾನ ಕಳುಹಿಸಲಾಗುತ್ತಿದೆಯೇ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಪ್ರಶ್ನಿಸಿದ್ದಾರೆ. “ಇದು ಈಗ ಪಕ್ಷದ ಕಾರ್ಯಕ್ರಮವಾಗುತ್ತಿದೆಯೇ? ದೇವರು ಎಲ್ಲರಿಗೂ ಸೇರಿದ್ದಾನೆ. ಪ್ರತಿಯೊಂದು ಪಕ್ಷವೂ ಆಹ್ವಾನವನ್ನು ಸ್ವೀಕರಿಸಬೇಕಿತ್ತು. ಅವರು ಎಲ್ಲರಿಗೂ ಆಹ್ವಾನ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಬೇಕಿತ್ತು. ಅಂತಹ ಯಾವುದೇ ಹೇಳಿಕೆ ನನಗೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಶಿವಸೇನಾ (ಉದ್ಧವ್ ಬಣ) ನಾಯಕ ಸಂಜಯ್ ರಾವುತ್ ಅವರು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸುವ ಅಗತ್ಯವಿಲ್ಲ, ಏಕೆಂದರೆ ಅವರೇ ಅಂತಹ ದೊಡ್ಡ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. “ರಾಮ ಮಂದಿರ ನಿರ್ಮಾಣವಾಗಬೇಕಿತ್ತು. ಅದಕ್ಕಾಗಿ ಸಾವಿರಾರು ಕರಸೇವಕರು ಪ್ರಾಣ ತೆತ್ತಿದ್ದಾರೆ. ಎಲ್ಲಾ ಹಿಂದುತ್ವವಾದಿ ಸಂಘಟನೆಗಳು ಮತ್ತು ಪಕ್ಷಗಳು ಭಾಗಿಯಾಗಿದ್ದವು. ಶಿವಸೇನಾ, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಅಲ್ಲಿದ್ದವು.ಎಲ್ ಕೆ ಅಡ್ವಾಣಿ ರಥಯಾತ್ರೆ ನಡೆಸಿದರು. ಇದೆಲ್ಲದರ ಫಲವೇ ರಾಮಮಂದಿರ ನಿರ್ಮಾಣವಾಗುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ ಆದರೆ ಇದು ಚುನಾವಣೆಯ ತಯಾರಿ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ರಾಮಮಂದಿರ ಬಿಜೆಪಿಯದ್ದೇ? ಇದು ನಮ್ಮ ದೇಶದ ಪ್ರತಿಯೊಬ್ಬರಿಗೂ ಸೇರಿದೆ. ಇದು ನಮ್ಮ ಸನಾತನ ಧರ್ಮದ ಬಹು ದೊಡ್ಡ ಸಂಕೇತ. ಕೊನೆಗೂ ರಾಮಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಹೇಳಿದ್ದಾರೆ.

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಜನವರಿ 22, 2024 ರಂದು ಅಯೋಧ್ಯೆ ದೇವಾಲಯದ ರಾಮಮಂದಿರದ ಗರ್ಭಗೃಹದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಲು ಪ್ರಧಾನಿ ಮೋದಿಯನ್ನು ಆಹ್ವಾನಿಸಿದೆ. ಪ್ರಧಾನಿ ಮೋದಿ ಆಹ್ವಾನವನ್ನು ಸ್ವೀಕರಿಸಿದ್ದು, ಒಂದು ಐತಿಹಾಸಿಕ ಸಂದರ್ಭ.ಅಂತಹ ದೃಶ್ಯಗಳಿಗೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನವರಿ 22ರಂದು ಅಯೋಧ್ಯೆಯಲ್ಲಿ ಮೂರ್ತಿ ಪ್ರತಿಷ್ಠಾಪನೆ; ಮೋದಿಗೆ ರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನ

“ನಾನು ಏನು ಹೇಳಲಿ? ಅವರು ಇತಿಹಾಸವನ್ನು ತಿದ್ದಿ ಅದನ್ನು ಪುರಾಣದಿಂದ ಬದಲಾಯಿಸಿದ್ದಾರೆ. ಯಾವುದೇ ದೇಶವು ಅದರ ಇತಿಹಾಸದ ಬಗ್ಗೆ ಹೆಮ್ಮೆ ಪಡಬೇಕು, ಅದು ಇತಿಹಾಸವನ್ನು ತಿಳಿದುಕೊಳ್ಳಬೇಕು. ರಾಮನ ಜನ್ಮ ಪುರಾಣ, ಇದು ರಾಮಾಯಣದ ಕಥೆ. ಇದು ಸಾಹಿತ್ಯ. ಅವರು ಇತಿಹಾಸವನ್ನು ಪುರಾಣದಿಂದ ಬದಲಿಸಲು ಬಯಸುತ್ತಾರೆ. ಬಿಜೆಪಿ ಮಾಡಲು ಪ್ರಯತ್ನಿಸುತ್ತಿರುವುದೂ ಅದನ್ನೇ. ಇಂಥವರು ಅಧಿಕಾರದಲ್ಲಿರುವಾಗ ನಾವು ಏನನ್ನು ನಿರೀಕ್ಷಿಸಬಹುದು? ಅದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಅವರು ಬಯಸುತ್ತಾರೆ. ಅವರಿಗೆ ರಾಮನಲ್ಲಿ ಆಸಕ್ತಿ ಇಲ್ಲ. ಬಿಜೆಪಿಯು ರಾಮನನ್ನು ಮುಖ್ಯವೆಂದು ಪರಿಗಣಿಸುವುದಿಲ್ಲ ಆದರೆ ಅವರ ರಾಜಕೀಯ ಲಾಭವು ಮುಖ್ಯವಾಗುತ್ತದೆ ಆದ್ದರಿಂದ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಮನನ್ನು ಬಳಸಿಕೊಳ್ಳುತ್ತಿದ್ದಾರೆ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Thu, 26 October 23

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ