ಕಥುವಾ ರೇಪ್​ ಕೇಸ್ ಆರೋಪಿಗೆ ಜಾಮೀನು; ನ್ಯಾಯದ ಚಕ್ರ ಕುಸಿದುಬಿದ್ದಿದೆ ಎಂದ ಮೆಹಬೂಬಾ ಮುಫ್ತಿ

2018ರ ಜನವರಿಯಲ್ಲಿ ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಜಾಬ್​ನ ಪಠಾಣ್​ಕೋಟ್​ ನ್ಯಾಯಾಲಯ 2019ರ ಜೂನ್​ 10ರಂದು ತೀರ್ಪು ನೀಡಿತ್ತು.

ಕಥುವಾ ರೇಪ್​ ಕೇಸ್ ಆರೋಪಿಗೆ ಜಾಮೀನು; ನ್ಯಾಯದ ಚಕ್ರ ಕುಸಿದುಬಿದ್ದಿದೆ ಎಂದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
Follow us
TV9 Web
| Updated By: Lakshmi Hegde

Updated on: Dec 25, 2021 | 6:06 PM

2018ರಲ್ಲಿ ಜಮ್ಮು-ಕಾಶ್ಮೀರದ ಕಥುವಾದಲ್ಲಿ 8 ವರ್ಷದ ಮುಸ್ಲಿಂ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಪಂಜಾಬ್​-ಹರ್ಯಾಣ ಉಚ್ಛ ನ್ಯಾಯಾಲಯ ಜಾಮೀನು ನೀಡಿದೆ. ಅದರ ಬೆನ್ನಲ್ಲೇ  ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ ನೀಡಿ, ನ್ಯಾಯದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂದು ಹೇಳಿದ್ದಾರೆ. ಕಥುವಾ ರೇಪ್​ ಕೇಸ್​ಗೆ ಸಂಬಂಧಪಟ್ಟಂತೆ ಸಾಕ್ಷ್ಯ ನಾಶ ಮಾಡಲು ಸಹಕಾರ ನೀಡಿದ್ದ ಎಂಬ ಆರೋಪದಡಿ ಆನಂದ ದತ್ತ ಎಂಬುವರನ್ನು ಬಂಧಿಸಲಾಗಿತ್ತು. ಆತನಿಗೆ ಡಿಸೆಂಬರ್​ 21ರಂದು ಹೈಕೋರ್ಟ್ ಜಾಮೀನು ನೀಡಿದ್ದು, ಶ್ಯೂರಿಟಿ ಬಾಂಡ್​ಗೆ ಸಹಿ ಹಾಕಿಸಿಕೊಂಡು ಬೇಲ್​ ನೀಡಿದೆ. ಘಟನೆ ನಡೆದಾಗ ಈ ಆನಂದ್ ದತ್ತಾ ಸ್ಟೇಶನ್​ ಆಫೀಸರ್​ ಆಗಿದ್ದರು. ಅವರು ಸಾಕ್ಷ್ಯ ನಾಶ ಪಡಿಸಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ ಐದು ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿತ್ತು. 

ಡಿ.21ರಂದು ಆನಂದ್​ ದತ್ತಗೆ ಜಾಮೀನು ನೀಡುತ್ತಿದ್ದಂತೆ ಮೆಹಬೂಬಾ ಮುಫ್ತಿ ಟ್ವೀಟ್​ ಮಾಡಿದ್ದಾರೆ. ಕಥುವಾ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ನಾಶ ಪಡಿಸಿದ್ದಾರೆ ಎಂದು ಜೈಲಿಗೆ ಹಾಕಲಾಗಿದ್ದ ಪೊಲೀಸ್​ ಸಿಬ್ಬಂದಿಯನ್ನು ಇದೀಗ ಬಿಡುಗಡೆಗೊಳಿಸಲಾಗಿದೆ. ಅವರ ಉಳಿದ ವರ್ಷದ ಜೈಲು ಶಿಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಗೊಂದಲಕ್ಕೆ ಕಾರಣವಾಗಿದೆ. ಅತ್ಯಾಚಾರಕ್ಕೆ ಒಳಗಾಗಿ ಕೊಲ್ಲಲ್ಪಟ್ಟ ಮಗುವಿಗೆ ಸಿಗಬೇಕಾಗಿದ್ದ ನ್ಯಾಯ ಪೂರ್ತಿ ಸಿಗದಂತಾಯಿತು. ನ್ಯಾಯದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ದೇಶವನ್ನು ನಡುಗಿಸಿತ್ತು ಈ ಅತ್ಯಾಚಾರ 2018ರ ಜನವರಿಯಲ್ಲಿ ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಜಾಬ್​ನ ಪಠಾಣ್​ಕೋಟ್​ ನ್ಯಾಯಾಲಯ 2019ರ ಜೂನ್​ 10ರಂದು ತೀರ್ಪು ನೀಡಿತ್ತು. ಇದರಲ್ಲಿ ಪ್ರಮುಖ ಆರೋಪಿ ಸಂಜಿ ರಾಮ್​ ಸೇರಿ ಒಟ್ಟು ಆರು ಮಂದಿಯನ್ನು ದೋಷಿ ಎಂದು ಘೋಷಿಸಿತ್ತು. ಹಾಗೇ, ಆನಂದ್​ ದತ್ತಾ, ತಿಲಕ್​ ರಾಜ್​ ಮತ್ತು ಸುರೇಂದ್ರ ವರ್ಮಾರು ಸಾಕ್ಷ್ಯ ನಾಶ ಪಡಿಸಿದ್ದಕ್ಕಾಗಿ ಅವರಿಗೆ 5ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಶಿಕ್ಷೆ ಕಡಿಮೆ ಮಾಡುವಂತೆ ಆನಂದ್​ ದತ್ತ ಮನವಿಯನ್ನು ಪುರಸ್ಕರಿಸಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ಕನಸಿನಂತೆ ಖಾದಿ ಕುಶಲಕರ್ಮಿಗಳ ಆರ್ಥಿಕ ವಿಮೋಚನೆ ಅಗತ್ಯ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ