AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಗತಿಯಲ್ಲಿ ಶಿಕ್ಷಕರ ಎದುರೇ ಸಹಪಾಠಿಯ ಕತ್ತು ಸೀಳಿದ ವಿದ್ಯಾರ್ಥಿ

ಮಹಾರಾಷ್ಟ್ರದ ರಾಜಗುರು ನಗರದಲ್ಲಿ ತರಗತಿಯಲ್ಲಿ ಶಿಕ್ಷಕರ ಎದುರೇ ವಿದ್ಯಾರ್ಥಿಯೊಬ್ಬ ಸಹಪಾಠಿಯ ಕತ್ತು ಸೀಳಿದ ಆಘಾತಕಾರಿ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಶಾಲಾ ಆವರಣಗಳಲ್ಲಿ ಹೆಚ್ಚುತ್ತಿರುವ ಇಂತಹ ಹಿಂಸಾಚಾರಗಳು ಮಕ್ಕಳಲ್ಲಿನ ಆಕ್ರಮಣಶೀಲತೆ ಮತ್ತು ಭಾವನಾತ್ಮಕ ನಿಯಂತ್ರಣದ ಕೊರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯದ ತುರ್ತು ಅಗತ್ಯವನ್ನು ಇದು ಎತ್ತಿ ತೋರಿಸುತ್ತದೆ.

ತರಗತಿಯಲ್ಲಿ ಶಿಕ್ಷಕರ ಎದುರೇ ಸಹಪಾಠಿಯ ಕತ್ತು ಸೀಳಿದ ವಿದ್ಯಾರ್ಥಿ
ಸಾಂದರ್ಭಿಕ ಚಿತ್ರImage Credit source: Newsx
ನಯನಾ ರಾಜೀವ್
|

Updated on: Dec 16, 2025 | 12:41 PM

Share

ಮಹಾರಾಷ್ಟ್ರ, ಡಿಸೆಂಬರ್ 16: ತರಗತಿಯಲ್ಲಿ ಶಿಕ್ಷಕರ ಎದುರೇ ವಿದ್ಯಾರ್ಥಿ(Student)ಯೊಬ್ಬ ತನ್ನ ಸಹಪಾಠಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ರಾಜಗುರು ನಗರದಲ್ಲಿ ನಡೆದಿದೆ. ಶಿಕ್ಷಕರು ಪಾಠ ಮಾಡುತ್ತಿರುವಾಗ ಸಹಪಾಠಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಇತರ ವಿದ್ಯಾರ್ಥಿಗಳ ಮುಂದೆಯೇ ಈ ಹಿಂಸಾತ್ಮಕ ಘಟನೆ ನಡೆದಿದ್ದು, ಶಾಲಾ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸ್ ಮೂಲಗಳ ಪ್ರಕಾರ, ಗಾಯಗೊಂಡ ವಿದ್ಯಾರ್ಥಿ ತರಗತಿಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಇನ್ನೂ ಗಂಭೀರವಾಗಿದೆ. ಆರೋಪಿ ವಿದ್ಯಾರ್ಥಿ ದ್ವಿಚಕ್ರ ವಾಹನ ಬಳಸಿ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ದಾಳಿಯ ಆಘಾತಕಾರಿ ಸ್ವರೂಪವು, ಶಾಲೆಗೆ ಹೋಗುವ ಮಕ್ಕಳಲ್ಲಿ ಹೆಚ್ಚುತ್ತಿರುವ ಆಕ್ರಮಣಶೀಲತೆ ಮತ್ತು ಚಿಕ್ಕ ವಯಸ್ಸಿನಲ್ಲಿಯೇ ಭಾವನಾತ್ಮಕ ನಿಯಂತ್ರಣವನ್ನು ಪರಿಹರಿಸುವ ತುರ್ತು ಅಗತ್ಯದ ಬಗ್ಗೆ ಕಳವಳವನ್ನು ಮತ್ತೆ ಹುಟ್ಟುಹಾಕಿದೆ.

ಇದು ಹೊಸ ಘಟನೆಯಲ್ಲ, ಈ ವರ್ಷದ ನವೆಂಬರ್‌ನಲ್ಲಿ, ಪುಣೆಯ ಮಂಜರಿ ಪ್ರದೇಶದಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲೆಯ ವಾರ್ಷಿಕೋತ್ಸವದ ಸಮಾರಂಭಕ್ಕೆ ಸಂಬಂಧಿಸಿದ ತೀವ್ರ ವಾಗ್ವಾದದ ನಂತರ ತನ್ನ ಸಹಪಾಠಿಯ ಕುತ್ತಿಗೆಯನ್ನು ಗಾಜಿನ ಬಾಟಲಿಯನ್ನು ಸೀಳಿ ಕ್ರೂರವಾಗಿ ಹಲ್ಲೆ ನಡೆಸಿದ್ದ.

ಮತ್ತಷ್ಟು ಓದಿ: ಮುಂಬೈ: ಪತ್ನಿ ಹಾಗೂ ಅಪ್ರಾಪ್ತ ಮಗಳ ಹತ್ಯೆಗೆ ಯತ್ನ, ವ್ಯಕ್ತಿಯ ಬಂಧನ

ನವೆಂಬರ್ 19 ರಂದು ಈ ಘಟನೆ ನಡೆದಿದ್ದು, ಆರೋಪಿ 15 ವರ್ಷದ ಬಾಲಕ ಬಾಲಕಿಯ ಹಿಂಭಾಗದಿಂದ ಹಲ್ಲೆ ನಡೆಸಿ ಕುತ್ತಿಗೆಗೆ ಗಾಯ ಮಾಡಿದ್ದ. ಇದರಿಂದಾಗಿ ಭಾರೀ ರಕ್ತಸ್ರಾವ ಉಂಟಾಗಿತ್ತು. ನವೆಂಬರ್ 20 ರಂದು ಎಫ್‌ಐಆರ್ ದಾಖಲಿಸಲಾಗಿತ್ತು.

ಶಾಲಾ ಆವರಣಗಳಲ್ಲಿ ಪದೇ ಪದೇ ನಡೆಯುತ್ತಿರುವ ಕ್ರೂರ ಹಿಂಸಾಚಾರವು ಮಕ್ಕಳು ಕೋಪ, ಹತಾಶೆ ಮತ್ತು ಸಂಘರ್ಷವನ್ನು ಹೇಗೆ ಎದುರಿಸುತ್ತಾರೆ ಎಂಬುದರ ಕುರಿತು ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಭಾವನೆಗಳನ್ನು ನಿಯಂತ್ರಿಸಲು ಕಲಿಯದಿದ್ದರೆ, ಇದೇ ರೀತಿಯ ಅಪಾಯಕಾರಿ ಮನಸ್ಥಿತಿ ಮುಂದುವರೆದರೆ, ಅಪರಾಧ ಪ್ರಕರಣಗಳು ಹೆಚ್ಚುವುದರಲ್ಲಿ ಸಂಶಯವಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ 

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ