Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ.

Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ
ರಣ​ದೀಪ್ ಸುರ್ಜೇವಾಲಾ
Follow us
Lakshmi Hegde
|

Updated on: May 02, 2021 | 9:13 AM

ಇಂದು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಡೀ ದೇಶ ಕುತೂಹಲದಿಂದ ಕಾಯುತ್ತಿದೆ. ಬೆಳಗ್ಗೆಯಿಂದಲೇ ಸುದ್ದಿ ಮಾಧ್ಯಮಗಳು ಚುನಾವಣಾ ಫಲಿತಾಂಶದ ಸುದ್ದಿಗಳನ್ನು ಬಿತ್ತರಿಸುತ್ತಿವೆ. ರಾಜಕೀಯ ಪಕ್ಷಗಳ ವಕ್ತಾರರು ಡಿಬೇಟ್​ಗಳಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಒಂದು ಮಹತ್ವದ ನಿರ್ಧಾರ ಮಾಡಿದ್ದು, ನಮ್ಮ ಪಕ್ಷದಿಂದ ಯಾವುದೇ ವಕ್ತಾರನನ್ನೂ ಟಿವಿ ಡಿಬೇಟ್​ಗಳಿಗೆ ಕಳಿಸುವುದಿಲ್ಲ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ. ಈಗ ನಾವು ಅವುಗಳ ಬಗ್ಗೆ ಚರ್ಚಿಸಬೇಕೇ ಹೊರತು ಚುನಾವಣೆಯ ಸೋಲು ಗೆಲುವುಗಳನ್ನಲ್ಲ ಎಂದು ಹೇಳಿದ್ದಾರೆ.

ನಾವು ಈಗ ಚುನಾವಣಾ ಡಿಬೇಟ್​​ಗಳಿಗೆ ನಮ್ಮ ಪಕ್ಷದಿಂದ ಯಾವುದೇ ವಕ್ತಾರರನ್ನೂ ಕಳಿಸದೆ ಇರಲು ನಿರ್ಧರಿಸಿದ್ದೇವೆ. ಅದರ ಹೊರತಾಗಿ ಮಾಧ್ಯಮ ಸ್ನೇಹಿತರು ಹೊರಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ. ನಾವು ಈ ಚುನಾವಣೆಯಲ್ಲಿ ಗೆಲ್ಲಬಹುದು.. ಸೋಲಬಹುದು. ಆದರೆ ಈಗ ಜನರು ಆಮ್ಲಜನಕ, ಹಾಸಿಗೆ, ಔಷಧ, ವೆಂಟಿಲೇಟರ್​ ಇಲ್ಲದೆ ಪರದಾಡುತ್ತಿದ್ದಾರೆ. ನಾವು ಅವರ ಪರ ನಿಲ್ಲುತ್ತೇವೆ. ಅವರಿಗೆ ಸಹಾಯ ಮಾಡುತ್ತೇವೆ ಎಂದು ಸುರ್ಜೇವಾಲಾ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೋಗಿಗಳ ನೆರವಿಗೆ ನಿಂತು, ಅನಾಥ ಶವಗಳಿಗೆ ಮುಕ್ತಿ ಕೊಡುತ್ತಿದ್ದಾರೆ ಹಾವೇರಿಯ ಅಬ್ದುಲ್ ಖಾದರ

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ