Assembly Elections 2026 Result Live Streaming: ತಮಿಳುನಾಡು, ಬಂಗಾಳ ಸೇರಿ 5 ರಾಜ್ಯಗಳ ಚುನಾವಣೆ ಮತ ಎಣಿಕೆ ಯಾವಾಗ? ಫಲಿತಾಂಶ ನೋಡುವುದು ಹೇಗೆ?

West Bengal, Tamil Nadu, Kerala, Assam, Puducherry Assembly Election Results 2026 Online Live Streaming: ಈಗಾಗಲೇ ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದ್ದರೆ ಇನ್ನೆರಡು ರಾಜ್ಯಗಳಲ್ಲಿ ಕಾಂಗ್ರೆಸ್ ಬೆಂಬಲಿತ ಪಕ್ಷ ಅಧಿಕಾರಕ್ಕೆ ಏರುವ ಸಾಧ್ಯತೆಯಿದೆ ಎಂದು ಮತದಾನೋತ್ತರ ಸಮೀಕ್ಷೆ ವರದಿ ನೀಡಿದೆ. ಈ ಪಂಚ ರಾಜ್ಯಗಳ ಮತ ಎಣಿಕೆ ಯಾವಾಗ ಪ್ರಾರಂಭವಾಗುತ್ತದೆ? ಅದನ್ನು ಎಲ್ಲಿ ವೀಕ್ಷಿಸಬೇಕು? ಎಂಬುದರ ಕುರಿತು ಪೂರ್ತಿ ಮಾಹಿತಿ ಇಲ್ಲಿದೆ.

Assembly Elections 2026 Result Live Streaming: ತಮಿಳುನಾಡು, ಬಂಗಾಳ ಸೇರಿ 5 ರಾಜ್ಯಗಳ ಚುನಾವಣೆ ಮತ ಎಣಿಕೆ ಯಾವಾಗ? ಫಲಿತಾಂಶ ನೋಡುವುದು ಹೇಗೆ?
Election Results
Image Credit source: AI
Edited By:

Updated on: May 04, 2026 | 7:09 AM

ನವದೆಹಲಿ, ಮೇ 4: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು (Assembly Elections Results 2026) ಚುನಾವಣಾ ಆಯೋಗವು ಇಂದು (ಮೇ 4) ಪ್ರಕಟಿಸಲಿದೆ. ಮೊದಲು ಅಂಚೆ ಮತಪತ್ರಗಳನ್ನು ಎಣಿಸಿ ನಂತರ ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಎಣಿಸುವ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ.

ಈ ಬಾರಿಯ ಚುನಾವಣೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಹಳ ನಿರ್ಣಾಯಕವಾಗಿದೆ. ಏಕೆಂದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಈ ಬಾರಿ ಬಿಜೆಪಿ ನೇರ ಪೈಪೋಟಿಗೆ ಇಳಿದಿದೆ. ಎಕ್ಸಿಟ್ ಪೋಲ್ ವರದಿ ಪ್ರಕಾರ ಈ ಬಾರಿ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಹೀಗಾಗಿ, ಮಮತಾ ಬ್ಯಾನರ್ಜಿ ತನ್ನ ಖುರ್ಚಿ ಉಳಿಸಿಕೊಳ್ಳುತ್ತಾರೋ ಇಲ್ಲವೋ ಎಂಬ ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ: Tamil Nadu Election Exit Poll Results 2026: ತಮಿಳುನಾಡಿನಲ್ಲಿ ನಡೆಯಲಿಲ್ಲ ಬಿಜೆಪಿ ಕಮಾಲ್; ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ 

ತಮಿಳುನಾಡಿನಲ್ಲಿ, ಆಡಳಿತಾರೂಢ ಡಿಎಂಕೆ ತನ್ನ ಹಿಡಿತವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಆದರೆ ಬಿಜೆಪಿ ಬೆಂಬಲಿತ ಎಐಎಡಿಎಂಕೆ ಕೂಡ ಸಾಕಷ್ಟು ಪೈಪೋಟಿ ನೀಡಿದೆ. ಸದ್ಯದ ಸಮೀಕ್ಷೆ ಪ್ರಕಾರ ತಮಿಳುನಾಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಡಿಎಂಕೆ ಮತ್ತೆ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಾಗಿದೆ. ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಬರುವ ನಿರೀಕ್ಷೆಯಿದೆ.

ಅಸ್ಸಾಂನಲ್ಲಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ತನ್ನ ಭದ್ರಕೋಟೆಯನ್ನು ರಕ್ಷಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: 5 State Assembly Election Exit Poll Results 2026: ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಜಯ, ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಗೆ ಗೆಲುವು; ಎಕ್ಸಿಟ್ ಪೋಲ್ ಸಮೀಕ್ಷೆ ಇಲ್ಲಿದೆ

ಚುನಾವಣಾ ಫಲಿತಾಂಶಗಳ ದಿನಾಂಕ ಮತ್ತು ಸಮಯ:

ದಿನಾಂಕ: ಮೇ 4ರ ಸೋಮವಾರ

ಮತ ಎಣಿಕೆ: ಬೆಳಿಗ್ಗೆ 8 ಗಂಟೆಗೆ ಆರಂಭ

ಫಲಿತಾಂಶವನ್ನು ಎಲ್ಲಿ ನೋಡಬಹುದು?:

ವಿಧಾನಸಭಾ ಚುನಾವಣೆಯ ಅಧಿಕೃತ ಫಲಿತಾಂಶಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ (eci.gov.in) ವೀಕ್ಷಿಸಬಹುದು. ಫಲಿತಾಂಶದ ವಿವರವಾದ ವರದಿ ಮತ್ತು ಅಪ್ಡೇಟ್​​ಗಾಗಿ ಟಿವಿ9 ವಾಹಿನಿ ಮತ್ತು ವೆಬ್​ಸೈಟ್​ ವೀಕ್ಷಿಸಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:48 pm, Sat, 2 May 26

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us