Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್​​​ಗೆ ಯಾವಾಗ ಮದುವೆ ಎಂದ ರೈತ ಮಹಿಳೆಯರ ಬಳಿ ನೀವೇ ಹುಡುಗಿ ಹುಡುಕಿ ಎಂದ ಸೋನಿಯಾ ಗಾಂಧಿ

ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಸೋನಿಪತ್ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಈ ಬಗ್ಗೆ ರಾಹುಲ್​​ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ.

Rahul Gandhi: ರಾಹುಲ್​​​ಗೆ ಯಾವಾಗ ಮದುವೆ ಎಂದ ರೈತ ಮಹಿಳೆಯರ ಬಳಿ ನೀವೇ ಹುಡುಗಿ ಹುಡುಕಿ ಎಂದ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ ಮತ್ತು ರೈತ ಮಹಿಳೆಯರು, ರಾಹುಲ್​​ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 29, 2023 | 4:40 PM

ದೆಹಲಿ,ಜು.29: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ (Sonia Gandhi )ಅವರನ್ನು ಇಂದು ಹರಿಯಾಣ ರೈತ ಮಹಿಳೆಯರು ಭೇಟಿಯಾಗಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ರೈತ ಮಹಿಳೆಯರು ಸೋನಿಯಾ ಗಾಂಧಿಯವರಿಗೆ ರಾಹುಲ್​​ ಗಾಂಧಿ (Rahul Gandhi) ಅವರು ಯಾವಾಗ ಮದುವೆಯಾಗುತ್ತಾರೆ ಎಂದು ಹಾಸ್ಯವಾಗಿ ಪ್ರಶ್ನಿಸಿದ್ದಾರೆ. ಇದಕ್ಕೆ ಜೋರಾಗಿ ನಗುತ್ತಲೇ ಉತ್ತರಿಸಿದ ಸೋನಿಯಾ ಗಾಂಧಿ, ನೀವೇ ಅವನಿಗೆ ಹುಡುಗಿಯನ್ನು ಹುಡುಕಿ ಎಂದು ಹೇಳಿದ್ದಾರೆ. ಇನ್ನು ಪಕ್ಕದಲ್ಲೇ ನಿಂತಿದ್ದ ರಾಹುಲ್​ ಗಾಂಧಿ ಅವರು “ಮುಂದೆ ನೋಡುವ” ಎಂದು ನಗುತ್ತಲೇ ಉತ್ತರಿಸಿದ್ದಾರೆ.

ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಸೋನಿಪತ್ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಈ ಬಗ್ಗೆ ರಾಹುಲ್​​ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ಇಂದು ನಾನು, ಅಮ್ಮ, ಪ್ರಿಯಾಂಕ ನೆನಪಿಡುವ ದಿನ, ಏಕೆಂದರೆ ದೆಹಲಿಯಲ್ಲಿ ಇಂದು ಬೆಳಿಗ್ಗೆ ಸೋನಿಪತ್‌ನ ರೈತ ಸಹೋದರಿಯರ ದರ್ಶನವಾಗಿದೆ, ಮನೆಯಲ್ಲಿ ಅವರೊಂದಿಗೆ ಭೋಜನ, ಒಂದಿಷ್ಟು ಹಾಸ್ಯ, ಹರಟೆ ಎಲ್ಲವೂ ನಡೆಯಿತು.  ಅವರು ನಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅಮೂಲ್ಯವಾದ ಉಡುಗೊರೆಗಳನ್ನು ನೀಡಿದ್ದಾರೆ. ದೇಸಿ ತುಪ್ಪ, ಸಿಹಿ ಲಸ್ಸಿ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ ಮತ್ತು ಬಹಳಷ್ಟು ಪ್ರೀತಿ ಎಲ್ಲವನ್ನು ನಮ್ಮ ಜತೆಗೆ ಹಂಚಿಕೊಂಡಿದ್ದಾರೆ ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:  ಮಾನನಷ್ಟ ಮೊಕದ್ದಮೆ, ರಾಹುಲ್ ಮೇಲ್ಮನವಿ ಅರ್ಜಿ ವಿಚಾರಣೆ ಆ.4ಕ್ಕೆ ಮುಂದೂಡಿದ ಸುಪ್ರೀಂ

ರಾಹುಲ್​​ ಗಾಂಧಿ ಅವರು ಈ ಹಿಂದೆ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹರಿಯಾಣದ ಸೋನಿಪತ್​​ಗೆ ಭೇಟಿ ನೀಡಿದ್ದ ಸಮಯದಲ್ಲಿ ಅಲ್ಲಿನ ಜನರ ಜತೆಗೆ ಸಂವಾದ ನಡೆಸಿದ್ದರು. ನಾನು ದೆಹಲಿಯಲ್ಲಿ ಸೋನಿಪತ್ ರೈತ ಮಹಿಳೆಯರನ್ನು ಭೇಟಿ ಮಾಡಿ. ಜತೆಗೆ ಅವರಿಗಾಗಿ ಔತಣಕೂಟದ ವ್ಯವಸ್ಥೆಯನ್ನು ಮಾಡುವೆ ಎಂದು ಹೇಳಿದ್ದರು. ಅದೇ ರೀತಿಯಲ್ಲಿ ರಾಹುಲ್​​ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:30 pm, Sat, 29 July 23

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ