ದೆಹಲಿ,ಜು.29: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi )ಅವರನ್ನು ಇಂದು ಹರಿಯಾಣ ರೈತ ಮಹಿಳೆಯರು ಭೇಟಿಯಾಗಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ರೈತ ಮಹಿಳೆಯರು ಸೋನಿಯಾ ಗಾಂಧಿಯವರಿಗೆ ರಾಹುಲ್ ಗಾಂಧಿ (Rahul Gandhi) ಅವರು ಯಾವಾಗ ಮದುವೆಯಾಗುತ್ತಾರೆ ಎಂದು ಹಾಸ್ಯವಾಗಿ ಪ್ರಶ್ನಿಸಿದ್ದಾರೆ. ಇದಕ್ಕೆ ಜೋರಾಗಿ ನಗುತ್ತಲೇ ಉತ್ತರಿಸಿದ ಸೋನಿಯಾ ಗಾಂಧಿ, ನೀವೇ ಅವನಿಗೆ ಹುಡುಗಿಯನ್ನು ಹುಡುಕಿ ಎಂದು ಹೇಳಿದ್ದಾರೆ. ಇನ್ನು ಪಕ್ಕದಲ್ಲೇ ನಿಂತಿದ್ದ ರಾಹುಲ್ ಗಾಂಧಿ ಅವರು “ಮುಂದೆ ನೋಡುವ” ಎಂದು ನಗುತ್ತಲೇ ಉತ್ತರಿಸಿದ್ದಾರೆ.
ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಸೋನಿಪತ್ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಈ ಬಗ್ಗೆ ರಾಹುಲ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ಇಂದು ನಾನು, ಅಮ್ಮ, ಪ್ರಿಯಾಂಕ ನೆನಪಿಡುವ ದಿನ, ಏಕೆಂದರೆ ದೆಹಲಿಯಲ್ಲಿ ಇಂದು ಬೆಳಿಗ್ಗೆ ಸೋನಿಪತ್‌ನ ರೈತ ಸಹೋದರಿಯರ ದರ್ಶನವಾಗಿದೆ, ಮನೆಯಲ್ಲಿ ಅವರೊಂದಿಗೆ ಭೋಜನ, ಒಂದಿಷ್ಟು ಹಾಸ್ಯ, ಹರಟೆ ಎಲ್ಲವೂ ನಡೆಯಿತು. ಅವರು ನಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅಮೂಲ್ಯವಾದ ಉಡುಗೊರೆಗಳನ್ನು ನೀಡಿದ್ದಾರೆ. ದೇಸಿ ತುಪ್ಪ, ಸಿಹಿ ಲಸ್ಸಿ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ ಮತ್ತು ಬಹಳಷ್ಟು ಪ್ರೀತಿ ಎಲ್ಲವನ್ನು ನಮ್ಮ ಜತೆಗೆ ಹಂಚಿಕೊಂಡಿದ್ದಾರೆ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
मां, प्रियंका और मेरे लिए एक यादगार दिन, कुछ खास मेहमानों के साथ!
सोनीपत की किसान बहनों का दिल्ली दर्शन, उनके साथ घर पर खाना, और खूब सारी मज़ेदार बातें।
साथ मिले अनमोल तोहफे – देसी घी, मीठी लस्सी, घर का अचार और ढेर सारा प्यार।
पूरा वीडियो यूट्यूब पर:https://t.co/2rATB9CQoz pic.twitter.com/8ptZuUSDBk
— Rahul Gandhi (@RahulGandhi) July 29, 2023
ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ, ರಾಹುಲ್ ಮೇಲ್ಮನವಿ ಅರ್ಜಿ ವಿಚಾರಣೆ ಆ.4ಕ್ಕೆ ಮುಂದೂಡಿದ ಸುಪ್ರೀಂ
ರಾಹುಲ್ ಗಾಂಧಿ ಅವರು ಈ ಹಿಂದೆ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹರಿಯಾಣದ ಸೋನಿಪತ್ಗೆ ಭೇಟಿ ನೀಡಿದ್ದ ಸಮಯದಲ್ಲಿ ಅಲ್ಲಿನ ಜನರ ಜತೆಗೆ ಸಂವಾದ ನಡೆಸಿದ್ದರು. ನಾನು ದೆಹಲಿಯಲ್ಲಿ ಸೋನಿಪತ್ ರೈತ ಮಹಿಳೆಯರನ್ನು ಭೇಟಿ ಮಾಡಿ. ಜತೆಗೆ ಅವರಿಗಾಗಿ ಔತಣಕೂಟದ ವ್ಯವಸ್ಥೆಯನ್ನು ಮಾಡುವೆ ಎಂದು ಹೇಳಿದ್ದರು. ಅದೇ ರೀತಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:30 pm, Sat, 29 July 23