Crime News: ಕೃಷ್ಣ ಜನ್ಮಾಷ್ಟಮಿಗೆ ದೇವಸ್ಥಾನಕ್ಕೆ ಹೋಗಿದ್ದ ಉತ್ತರ ಪ್ರದೇಶದ ಇಬ್ಬರು ಬಾಲಕಿಯರ ನಿಗೂಢ ಸಾವು

ಉತ್ತರ ಪ್ರದೇಶದ ಫರುಕಾಬಾದ್‌ನಲ್ಲಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆಯಾಗಿವೆ. ಈ ಕುರಿತು ತನಿಖೆಗೆ ಅಖಿಲೇಶ್ ಯಾದವ್ ಆಗ್ರಹ ಮಾಡಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನದಂದೇ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯರ ಶವಗಳು ಪತ್ತೆಯಾಗಿವೆ. ಇದು ಮಹಿಳಾ ಸುರಕ್ಷತೆಯನ್ನು ಪ್ರಶ್ನಿಸುವಂತಿದೆ ಎಂದು ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ನಾಯಕರು ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Crime News: ಕೃಷ್ಣ ಜನ್ಮಾಷ್ಟಮಿಗೆ ದೇವಸ್ಥಾನಕ್ಕೆ ಹೋಗಿದ್ದ ಉತ್ತರ ಪ್ರದೇಶದ ಇಬ್ಬರು ಬಾಲಕಿಯರ ನಿಗೂಢ ಸಾವು
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on:Aug 27, 2024 | 5:08 PM

ನವದೆಹಲಿ: ದುರಂತ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ ಸೋಮವಾರ ಇಬ್ಬರು ಬಾಲಕಿಯರ ಶವಗಳು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಕೋಟ್ವಾಲಿ ಕೈಮ್‌ಗಂಜ್ ಪ್ರದೇಶದ ಭಗೌತಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಆ ಇಬ್ಬರು ಹೆಣ್ಣು ಮಕ್ಕಳು ಕೃಷ್ಣ ಜನ್ಮಾಷ್ಟಮಿ ನಿಮಿತ್ತ ದೇವಸ್ಥಾನಕ್ಕೆ ಹೋಗಿದ್ದರು. ತಡರಾತ್ರಿಯಾದರೂ ದೇವಸ್ಥಾನದಿಂದ ವಾಪಸ್ ಬಾರದೆ ಇದ್ದಾಗ ಕುಟುಂಬಸ್ಥರು ಅವರಿಬ್ಬರೂ ಅವರ ಚಿಕ್ಕಮ್ಮನ ಮನೆಯಲ್ಲಿ ತಂಗಿದ್ದಾರೆಂದುಕೊಂಡು ಸುಮ್ಮನಾಗಿದ್ದರು.

ಆದರೆ, ಮರುದಿನ ಆ ಇಬ್ಬರು ಯಾವ ಸಂಬಂಧಿಕರ ಮನೆಗೂ ಹೋಗಿಲ್ಲ ಎಂಬುದು ಮನೆಯವರಿಗೆ ಗೊತ್ತಾಗಿದೆ. ಇದರಿಂದ ಆತಂಕಗೊಂಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟರ ವೇಳೆಗೆ ದೇವಸ್ಥಾನವಿದ್ದ ಗ್ರಾಮದ ಮರದಲ್ಲಿ ಇಬ್ಬರು ಹೆಣ್ಣುಮಕ್ಕಳ ಶವಗಳು ನೇತಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ.

ಇದನ್ನೂ ಓದಿ: Unified Pension Scheme: ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಪ್ರಧಾನಿ ಮೋದಿ ಸಂಪುಟ ಅನುಮೋದನೆ

ಬಾಲಕಿಯರಿಬ್ಬರ ಶವ ಒಂದೇ ದುಪಟ್ಟಾದಲ್ಲಿ ನೇತಾಡುತ್ತಿರುವುದನ್ನು ಕಂಡು ಗ್ರಾಮಸ್ಥರಲ್ಲಿ ಸಂಚಲನ ಮೂಡಿಸಿದೆ. ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಶವಗಳನ್ನು ನೇಣು ಹಾಕಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದೆ. ಪೊಲೀಸರು ಎರಡೂ ಶವಗಳನ್ನು ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಘಟನೆಗೆ ಎಸ್​ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, ‘ಉತ್ತರ ಪ್ರದೇಶದ ಫರೂಕಾಬಾದ್ ನಲ್ಲಿ ಜನ್ಮಾಷ್ಟಮಿ ಹಬ್ಬ ನೋಡಲು ದೇವಸ್ಥಾನಕ್ಕೆ ತೆರಳಿದ್ದ ಇಬ್ಬರು ಬಾಲಕಿಯರ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅತ್ಯಂತ ಸೂಕ್ಷ್ಮ ಘಟನೆ’ ಎಂದಿದ್ದಾರೆ. ಬಿಜೆಪಿ ಸರ್ಕಾರ ಕೂಡಲೇ ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಈ ಅನುಮಾನಾಸ್ಪದ ಕೊಲೆ ಪ್ರಕರಣದ ವರದಿಯನ್ನು ಸಲ್ಲಿಸಬೇಕು, ಇಂತಹ ಘಟನೆಗಳು ಸಮಾಜದಲ್ಲಿ ಭಯಾನಕ ವಾತಾವರಣವನ್ನು ಸೃಷ್ಟಿಸುತ್ತದೆ, ಇದು ಮಹಿಳಾ ಸಮಾಜಕ್ಕೆ ಮಾನಸಿಕ ಆಘಾತವನ್ನು ಉಂಟುಮಾಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Russia-Ukraine Conflict: ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ; ಉಕ್ರೇನ್ ಭೇಟಿಯ ಬಗ್ಗೆ ಚರ್ಚೆ

ಈ ಘಟನೆ ಬಗ್ಗೆ ಕಾಂಗ್ರೆಸ್ ಪಕ್ಷವೂ ಪ್ರತಿಕ್ರಿಯಿಸಿದೆ. ಯುಪಿ ಕಾಂಗ್ರೆಸ್ ತನ್ನ ಎಕ್ಸ್ ಹ್ಯಾಂಡಲ್ ಮೂಲಕ, “ಫರೂಕಾಬಾದ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ದಿನದಂದು ದೇವಸ್ಥಾನಕ್ಕೆ ಹೋಗಿದ್ದ ಇಬ್ಬರು ಬಾಲಕಿಯರ ಶವಗಳು ಮಾವಿನ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇದು ಮಹಿಳಾ ಸುರಕ್ಷತೆ ಬಗ್ಗೆ ಆತಂಕ ಹೆಚ್ಚಿಸಿದೆ” ಎಂದು ಹೇಳಿದೆ.

ಈ ರಾಜ್ಯವು ಮಹಿಳೆಯರ ಪಾಲಿಗೆ ಸ್ಮಶಾನವಾಗಿದೆ. ತನ್ನ ಮನೆಯಿಂದ ಹೊರಬರುವ ಯಾವುದೇ ಮಹಿಳೆ ಇಲ್ಲಿ ಸುರಕ್ಷಿತವೆಂದು ಭಾವಿಸುವುದಿಲ್ಲ. ಸರ್ಕಾರ ಈ ನಿರ್ಭೀತ ಮೃಗಗಳನ್ನು ನಿಯಂತ್ರಿಸಲು, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆಯನ್ನು ಕಾಪಾಡಲು ಆದ್ಯತೆ ವಹಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Tue, 27 August 24

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ