PM Modi: ಗುಜರಾತಿನ ವಡೋದರಾದಲ್ಲಿ ಹಬ್ಬದ ವಾತಾವಾರಣ, ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಸದರಿ ಕಾರ್ಯಕ್ರಮದ ಸಂದರ್ಭದಲ್ಲೇ, ಖೇಡಾ, ಆನಂದ್, ವಡೋದರಾ, ಛೋಟಾ ಉದೇಪುರ್ ಮತ್ತು ಪಂಚಮಹಲ್‌ನಲ್ಲಿ 680 ಕೋಟಿ ರೂ. ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಪ್ರಧಾನಮಂತ್ರಿ ನೆರವೇರಿಸಿದರು. ಯೋಜನೆಳಿಂದಾಗಿ ಸದರಿ ಪ್ರಾಂತ್ಯದ ಜನಜೀವನ ಸುಗಮಗೊಳ್ಳಲಿದೆ.

PM Modi: ಗುಜರಾತಿನ ವಡೋದರಾದಲ್ಲಿ ಹಬ್ಬದ ವಾತಾವಾರಣ, ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ವಡೋದರನಲ್ಲಿ ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jun 18, 2022 | 9:55 PM

Vadodara: ಗುಜರಾತಿನ ವಡೋದರದಲ್ಲಿ ಶನಿವಾರ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ತಮ್ಮ ತಾಯಿ ಹೀರಾಬೆನ್ (Heeraben) ಅವರ 100ನೇ ಹುಟ್ಟುಹಬ್ಬವನ್ನು ಆಚರಿಸಲು ತವರು ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಅವರೊಂದಿಗೆ ಸಮಯ ಕಳೆದು ಆಶೀರ್ವಾದ ಪಡೆದ ಬಳಿಕ ವಡೋದರ ಅಜ್ವಾ ರಸ್ತೆಯ ಲೆಪ್ರಸಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ‘ಗುಜರಾತ್ ಗೌರವ್ ಅಭಿಯಾನ’ (Gujarat Gaurav Abhiyan) ಸಾರ್ವಜನಿಕ ಸಭೆಯಲ್ಲಿ ರೂ. 21, 504 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ವೇದಿಕೆಯನ್ನು ತಲುಪುವ ಮೊದಲು ಪ್ರಧಾನಿ ಮೋದಿಯವರು ಒಂದು ಓಪನ್ ಜೀಪನಲ್ಲಿ ಲೆಪ್ರಸಿ ಮೈದಾನದ ಒಂದು ಸುತ್ತುಹಾಕಿದರು ಮತ್ತು ಅಲ್ಲಿ ನೆರೆದಿದ್ದ ಅಸಂಖ್ಯಾತ ಜನರಿಂದ ಅಭಿನಂದನೆ ಮತ್ತು ಹಾರೈಕೆ ಸ್ವೀಕರಿಸಿದರು.

ಆಮೇಲೆ ಸಭೆಯನ್ನುದ್ದೇಶಿಸಿ ಮಾತಾಡಿದ ಮೋದಿಯವರು, ‘ಇಂದು ನನಗೆ ಮಾತೃವಂದನದ ದಿನವಾಗಿದೆ ಮತ್ತು 21,000 ಕೋಟಿ ರೂ, ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಿರುವುದು ನನಗೆ ಅತೀವ ಸಂತಸ ನೀಡಿದೆ. ಈ ಯೋಜನೆಗಳು ಭಾರತದ ಜೊತೆ ಗುಜರಾತಿನ ಅಭಿವೃದ್ಧಿ ವೇಗವನ್ನೂ ದ್ವಿಗುಣಗೊಳಿಸಲಿವೆ. ಈ ಎಲ್ಲ ದೊಡ್ಡ ಯೋಜನೆಗಳು ಗುಜರಾತನಲ್ಲಿ ಈ ತೆರನಾದ ಭಾರಿ ಪ್ರಮಾಣದ ಹೂಡಿಕೆಯಿಂದಾಗಿ ಉತ್ತಮ ಸಂಪರ್ಕಗಳನ್ನು ಕಲ್ಪಿಸುವುದರ ಜೊತೆಗೆ ಯುವಕರಿಗೆ ಆನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ ಎಂದು ಹೇಳಿದರು.

ಒಬ್ಬ ತಾಯಿ ಮಗುವನ್ನು ಪೋಷಿಸಿ ಬೆಳೆಸುವ ಹಾಗೆ ವಡೋದರ ನಗರ ತಮ್ಮನ್ನು ಸಾಕಿ ಸಲುಹಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು 16,000 ಕೋಟಿ ರೂ ಮೌಲ್ಯದ ಹಲವಾರು ರೇಲ್ವೇ ಯೋಜನೆಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಪಾಲನ್ ಪುರ-ಮಾದಾರ್ ನಡುವೆ 3578 ಕಿಮೀ ಉದ್ದದ ಫ್ರೈಟ್ ಕಾರಿಡಾರ್, ಅಹ್ಮದಾಬಾದ್-ಬೊತಾಡ್ ಸೆಕ್ಷನ್ ನಲ್ಲಿ 166 ಕಿಮೀ ಉದ್ದದ ಗೇಜ್ ಬದಲಾವಣೆ ಹಾಗೂ 81 ಕಿಮೀ ಉದ್ದ್ದದ ಪಾಲನ್ ಪುರ್-ಮಿತಾ ಸೆಕ್ಷನ್ ವಿದ್ಯುದ್ದೀಕರಣ ಮೊದಲಾದವು ಇದರಲ್ಲಿ ಸೇರಿವೆ.

ರೈಲ್ವೆ ವಲಯದ ಇತರ ಉಪಕ್ರಮಗಳ ಜೊತೆಗೆ ಸೂರತ್, ಉದ್ನಾ, ಸೋಮನಾಥ್ ಮತ್ತು ಸಾಬರಮತಿ ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅಡಿಪಾಯ ಹಾಕಿದರು. ಈ ಯೋಜನೆಗಳು ಲಾಜಿಸ್ಟಿಕ್ ವೆಚ್ಚಗಳನ್ನು ಕಡಿಮೆ ಮಾಡಲು ಮತ್ತು ಪ್ರದೇಶದಲ್ಲಿ ಉದ್ಯಮ ಮತ್ತು ಕೃಷಿ ವಲಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ, ನಗರ ಪ್ರದೇಶದಲ್ಲಿ ಸುಮಾರು 1,800 ಕೋಟಿ ರೂಪಾಯಿ ಮೌಲ್ಯದ ಮನೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ 1,530 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮನೆಗಳು ಸೇರಿದಂತೆ ಒಟ್ಟು 1.38 ಲಕ್ಷ ಮನೆಗಳನ್ನು ಪ್ರಧಾನ ಮಂತ್ರಿಯವರು ಲೋಕಾರ್ಪಣೆ ಮಾಡಲಿದ್ದಾರೆ.

ಸದರಿ ಕಾರ್ಯಕ್ರಮದ ಸಂದರ್ಭದಲ್ಲೇ, ಖೇಡಾ, ಆನಂದ್, ವಡೋದರಾ, ಛೋಟಾ ಉದೇಪುರ್ ಮತ್ತು ಪಂಚಮಹಲ್‌ನಲ್ಲಿ 680 ಕೋಟಿ ರೂ. ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಪ್ರಧಾನಮಂತ್ರಿ ನೆರವೇರಿಸಿದರು. ಯೋಜನೆಳಿಂದಾಗಿ ಸದರಿ ಪ್ರಾಂತ್ಯದ ಜನಜೀವನ ಸುಗಮಗೊಳ್ಳಲಿದೆ.

ದಭೋಯ್ ತಾಲೂಕಿನ ಕುಂಧೇಲಾ ಗ್ರಾಮದಲ್ಲಿ ಗುಜರಾತ್ ಕೇಂದ್ರೀಯ ವಿಶ್ವವಿದ್ಯಾನಿಲಯದ ಶಂಕುಸ್ಥಾಪನೆ ಪ್ರಧಾನಿ ನೆರವೇರಿಸಿದರು. ವಡೋದರಾದಿಂದ ಸುಮಾರು 20 ಕಿಮೀ ದೂರದಲ್ಲಿರುವ ಈ ವಿಶ್ವವಿದ್ಯಾನಿಲಯವನ್ನು ಸುಮಾರು 425 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಮತ್ತು 2,500 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಅಗತ್ಯಗಳನ್ನು ವಿವಿ ಪೂರೈಸುತ್ತದೆ.

ತಾಯಿ ಮತ್ತು ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಸಮಾರು 800 ಕೋಟಿ ರೂ. ವೆಚ್ಚದ ‘ಮುಖ್ಯಮಂತ್ರಿ ಮಾತೃಶಕ್ತಿ ಯೋಜನೆ’ ಯನ್ನು ಸಹ ಪ್ರಧಾನಮಂತ್ರಿಯವರು ಶನಿವಾರ ಉದ್ಘಾಟಿಸಿದರು. ಸದರಿ ಯೋಜನೆಯಡಿ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳಿಂದ 2 ಕೆಜಿ ಕಡಲೆ, 1 ಕೆಜಿ ತೊಗರಿಬೇಳೆ ಮತ್ತು 1 ಕೆಜಿ ಖಾದ್ಯ ಎಣ್ಣೆಯನ್ನು ಉಚಿತವಾಗಿ ನೀಡಲಾಗುತ್ತದೆ.

‘ಪೋಷನ್ ಸುಧಾ ಯೋಜನೆ’ಗೆ ಸುಮಾರು 120 ಕೋಟಿ ರೂಪಾಯಿಗಳನ್ನು ಪ್ರಧಾನಿ ಮೋದಿ ಅವರು ವಿತರಿಸಿದರು. ಇದನ್ನು ಈಗ ರಾಜ್ಯದ ಎಲ್ಲಾ ಬುಡಕಟ್ಟು ಫಲಾನುಭವಿಗಳಿಗೆ ವಿಸ್ತರಿಸಲಾಗಿದೆ. ಬುಡಕಟ್ಟು ಜಿಲ್ಲೆಗಳ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಕಬ್ಬಿಣ ಮತ್ತು ಕ್ಯಾಲ್ಸಿಯಂ ಮಾತ್ರೆಗಳು ಮತ್ತು ಪೌಷ್ಟಿಕಾಂಶದ ಬಗ್ಗೆ ಶಿಕ್ಷಣ ನೀಡುವ ಪ್ರಯೋಗ ಯಶಸ್ವಿಗೊಂಡ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:01 pm, Sat, 18 June 22

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು