AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರ ಎಂಬ ಹೆಗ್ಗಳಿಕೆ ಪಡೆದ ಎಸ್​​​. ಜೈಶಂಕರ್

ಭಾರತದ ವಿದೇಶಾಂಗ ಸಚಿವ ಎಸ್​​​ ಜೈಶಂಕರ್​​ ಅವರು ದೆಹಲಿಯಲ್ಲಿ ಇಂದು ಮತದಾನ ಮಾಡಿದ್ದಾರೆ. ಇದರ ಜತೆಗೆ ತಮ್ಮ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರ ಎಂಬ ಹೆಗ್ಗಳಿಕೆಯನ್ನು ಕೂಡ ಪಡೆದುಕೊಂಡಿದ್ದಾರೆ. ಮಹಿಳೆಯರಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮುಖ್ಯಸ್ಥೆ ರೇಖಾ ಶರ್ಮಾ ಅವರು ಮತದಾನ ಮಾಡಿದ ಮೊದಲ ಹೆಮ್ಮೆಯ ಹಿರಿಯ ನಾಗರಿಕ ಎಂಬ ಪ್ರಶಂಸೆ ಪಡೆದುಕೊಂಡಿದ್ದಾರೆ.

ತಮ್ಮ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರ ಎಂಬ ಹೆಗ್ಗಳಿಕೆ ಪಡೆದ ಎಸ್​​​. ಜೈಶಂಕರ್
ಅಕ್ಷಯ್​ ಪಲ್ಲಮಜಲು​​
|

Updated on:May 25, 2024 | 9:53 AM

Share

ದೆಹಲಿ, ಮೇ.25: ಇಂದು ಲೋಕಸಭೆ ಆರನೇ ಹಂತದ ಮತದಾನ ನಡೆಯುತ್ತಿದೆ. ಬಿಹಾರ (8 ಸ್ಥಾನಗಳು), ಹರಿಯಾಣ (ಎಲ್ಲಾ 10 ಸ್ಥಾನಗಳು), ಜಮ್ಮು ಮತ್ತು ಕಾಶ್ಮೀರ (1 ಸ್ಥಾನ), ಜಾರ್ಖಂಡ್ (4 ಸ್ಥಾನಗಳು), ದೆಹಲಿ (ಎಲ್ಲಾ 7 ಸ್ಥಾನಗಳು), ಒಡಿಶಾ (6 ಸ್ಥಾನಗಳು), ಉತ್ತರ ಪ್ರದೇಶ (14 ಸ್ಥಾನಗಳು), ಮತ್ತು ಪಶ್ಚಿಮ ಬಂಗಾಳ (8 ಸ್ಥಾನಗಳು)ದಲ್ಲಿ ಮತದಾನ ನಡೆಯಲಿದೆ. ಇದೀಗ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ದೇಶದ ವಿದೇಶಾಂಗ ಸಚಿವ ಡಾ. ಜೈಶಂಕರ್​​​ ಅವರು ತಮ್ಮ ಮತವನ್ನು ಚಲಾಯಿಸಿದರೆ. ಇದರಲ್ಲೂ ಒಂದು ವಿಶೇಷವಿದೆ. ತಮಗೆ ಗೊತ್ತುಪಡಿಸಿದ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರ ಎಂಬ ಪ್ರಶಂಸೆ ಪಡೆದುಕೊಂಡಿದ್ದಾರೆ.

ಇದರ ಜತೆಗೆ ಮೊದಲ ಪುರುಷ ಮತದಾರ ಪ್ರಮಾಣಪತ್ರವನ್ನು ಸಹ ಪಡೆದಿದ್ದಾರೆ. “ಈ ಬೂತ್‌ನಲ್ಲಿ ನಾನು ಮೊದಲ ಪುರುಷ ಮತದಾರರಾಗಿದ್ದೇನೆ” ಎಂದು ಜೈಶಂಕರ್ ತಮ್ಮ ಪ್ರಮಾಣಪತ್ರವನ್ನು ಹಿಡಿದುಕೊಂಡು ಫೋಟೋ ಕ್ಲಿಕಿಸಿದ್ದಾರೆ. ದೆಹಲಿಯ ಮತದಾರರು ಮತ್ತೊಮ್ಮೆ ಮೋದಿ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದರು. ದೇಶಕ್ಕೆ ಇದು ನಿರ್ಣಾಯಕ ಕ್ಷಣವಾಗಿರುವುದರಿಂದ ಜನರು ಮತಗಟ್ಟೆಗೆ ಬಂದು ಮತದಾನ ಮಾಡಬೇಕು. ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನನಗೆ ವಿಶ್ವಾಸವಿದೆ ಎಂದರು.

ಮೊದಲ ಪುರುಷ ಮತದಾರ ಪ್ರಮಾಣಪತ್ರವನ್ನು ಹಿಡಿದುಕೊಂಡು ತೆಗೆಸಿಕೊಂಡ ಫೋಟೋವನ್ನು ತಮ್ಮ ಎಕ್ಸ್​​​​ಯಲ್ಲಿ ಹಂಚಿಕೊಂಡಿದ್ದಾರೆ. ಜೂನ್ 1 ರಂದು ಕೊನೆಯ ಹಂತದ ಚುನಾವಣೆ ಮುಗಿದ ನಂತರ ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ

ಮತದಾನ ಮಾಡಿದ ಮೊದಲ ಹೆಮ್ಮೆಯ ಹಿರಿಯ ನಾಗರಿಕ:

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮುಖ್ಯಸ್ಥೆ ರೇಖಾ ಶರ್ಮಾ ಅವರು ಶನಿವಾರ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ಮತ ಚಲಾಯಿಸಿದರು. ಹಾಗೂ ಅವರು ಕೂಡ ತಮ್ಮ ಬೂತ್​​ನಲ್ಲಿ ಮತ ಚಲಾಯಿಸಿದ ಮೊದಲ ಹಿರಿಯ ನಾಗರಿಕ ಹಾಗೂ ಮಹಿಳೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ. ಎಲ್ಲರೂ ದಯವಿಟ್ಟು ಮತ ಚಲಾಯಿಸಿ ಮತ್ತು ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಜಿಲ್ಲಾ ಚುನಾವಣಾ ಕಚೇರಿಯಿಂದ ನೀಡಿದ ಪ್ರಮಾಣಪತ್ರವನ್ನು ಹಿಡಿದುಕೊಂಡು ಫೋಟೋ ಕ್ಲಿಕಿಸಿಕೊಂಡಿದ್ದಾರೆ. ಈ ಚಿತ್ರವನ್ನು ತಮ್ಮ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 am, Sat, 25 May 24