
ದೆಹಲಿ, ಮೇ.25: ಇಂದು ಲೋಕಸಭೆ ಆರನೇ ಹಂತದ ಮತದಾನ ನಡೆಯುತ್ತಿದೆ. ಬಿಹಾರ (8 ಸ್ಥಾನಗಳು), ಹರಿಯಾಣ (ಎಲ್ಲಾ 10 ಸ್ಥಾನಗಳು), ಜಮ್ಮು ಮತ್ತು ಕಾಶ್ಮೀರ (1 ಸ್ಥಾನ), ಜಾರ್ಖಂಡ್ (4 ಸ್ಥಾನಗಳು), ದೆಹಲಿ (ಎಲ್ಲಾ 7 ಸ್ಥಾನಗಳು), ಒಡಿಶಾ (6 ಸ್ಥಾನಗಳು), ಉತ್ತರ ಪ್ರದೇಶ (14 ಸ್ಥಾನಗಳು), ಮತ್ತು ಪಶ್ಚಿಮ ಬಂಗಾಳ (8 ಸ್ಥಾನಗಳು)ದಲ್ಲಿ ಮತದಾನ ನಡೆಯಲಿದೆ. ಇದೀಗ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ದೇಶದ ವಿದೇಶಾಂಗ ಸಚಿವ ಡಾ. ಜೈಶಂಕರ್ ಅವರು ತಮ್ಮ ಮತವನ್ನು ಚಲಾಯಿಸಿದರೆ. ಇದರಲ್ಲೂ ಒಂದು ವಿಶೇಷವಿದೆ. ತಮಗೆ ಗೊತ್ತುಪಡಿಸಿದ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರ ಎಂಬ ಪ್ರಶಂಸೆ ಪಡೆದುಕೊಂಡಿದ್ದಾರೆ.
ಇದರ ಜತೆಗೆ ಮೊದಲ ಪುರುಷ ಮತದಾರ ಪ್ರಮಾಣಪತ್ರವನ್ನು ಸಹ ಪಡೆದಿದ್ದಾರೆ. “ಈ ಬೂತ್‌ನಲ್ಲಿ ನಾನು ಮೊದಲ ಪುರುಷ ಮತದಾರರಾಗಿದ್ದೇನೆ” ಎಂದು ಜೈಶಂಕರ್ ತಮ್ಮ ಪ್ರಮಾಣಪತ್ರವನ್ನು ಹಿಡಿದುಕೊಂಡು ಫೋಟೋ ಕ್ಲಿಕಿಸಿದ್ದಾರೆ. ದೆಹಲಿಯ ಮತದಾರರು ಮತ್ತೊಮ್ಮೆ ಮೋದಿ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದರು. ದೇಶಕ್ಕೆ ಇದು ನಿರ್ಣಾಯಕ ಕ್ಷಣವಾಗಿರುವುದರಿಂದ ಜನರು ಮತಗಟ್ಟೆಗೆ ಬಂದು ಮತದಾನ ಮಾಡಬೇಕು. ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನನಗೆ ವಿಶ್ವಾಸವಿದೆ ಎಂದರು.
Cast my vote in New Delhi this morning.
Urge all voting today to turnout in record numbers and vote in this sixth phase of the elections. pic.twitter.com/FJpskspGq9
— Dr. S. Jaishankar (Modi Ka Parivar) (@DrSJaishankar) May 25, 2024
ಮೊದಲ ಪುರುಷ ಮತದಾರ ಪ್ರಮಾಣಪತ್ರವನ್ನು ಹಿಡಿದುಕೊಂಡು ತೆಗೆಸಿಕೊಂಡ ಫೋಟೋವನ್ನು ತಮ್ಮ ಎಕ್ಸ್ಯಲ್ಲಿ ಹಂಚಿಕೊಂಡಿದ್ದಾರೆ. ಜೂನ್ 1 ರಂದು ಕೊನೆಯ ಹಂತದ ಚುನಾವಣೆ ಮುಗಿದ ನಂತರ ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ
ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮುಖ್ಯಸ್ಥೆ ರೇಖಾ ಶರ್ಮಾ ಅವರು ಶನಿವಾರ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ಮತ ಚಲಾಯಿಸಿದರು. ಹಾಗೂ ಅವರು ಕೂಡ ತಮ್ಮ ಬೂತ್‌ನಲ್ಲಿ ಮತ ಚಲಾಯಿಸಿದ ಮೊದಲ ಹಿರಿಯ ನಾಗರಿಕ ಹಾಗೂ ಮಹಿಳೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ. ಎಲ್ಲರೂ ದಯವಿಟ್ಟು ಮತ ಚಲಾಯಿಸಿ ಮತ್ತು ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಜಿಲ್ಲಾ ಚುನಾವಣಾ ಕಚೇರಿಯಿಂದ ನೀಡಿದ ಪ್ರಮಾಣಪತ್ರವನ್ನು ಹಿಡಿದುಕೊಂಡು ಫೋಟೋ ಕ್ಲಿಕಿಸಿಕೊಂಡಿದ್ದಾರೆ. ಈ ಚಿತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:50 am, Sat, 25 May 24