ಒಂದೇ ಮತದಿಂದ ರಾಜ್ಯಸಭಾ ಚುನಾವಣೆ ಸೋತಿದ್ದ ಅವಿನಾಶ್​ ಪಾಂಡೆಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡಿದ ಕಾಂಗ್ರೆಸ್​

ನಾಲ್ಕು ರಾಜ್ಯಗಳಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್​ನ ಸಂಪೂರ್ಣ ಗಮನ ಈಗ 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯತ್ತ ನೆಟ್ಟಿದೆ. ಇದಕ್ಕಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಉತ್ತರಪ್ರದೇಶದ ಜವಾಬ್ದಾರಿಯನ್ನು ಅವಿನಾಶ್ ಪಾಂಡೆಗೆ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಅಂದರೆ ಲೋಕಸಭೆ ಚುನಾವಣೆ ವೇಳೆ ಅವಿನಾಶ್ ಪಾಂಡೆ ಉತ್ತರ ಪ್ರದೇಶದ ಉಸ್ತುವಾರಿಯಾಗಲಿದ್ದಾರೆ. ಈ ಹಿಂದೆ ಈ ಜವಾಬ್ದಾರಿಯನ್ನು ಪ್ರಿಯಾಂಕಾ ಗಾಂಧಿ ನಿಭಾಯಿಸುತ್ತಿದ್ದರು.

ಒಂದೇ ಮತದಿಂದ ರಾಜ್ಯಸಭಾ ಚುನಾವಣೆ ಸೋತಿದ್ದ ಅವಿನಾಶ್​ ಪಾಂಡೆಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡಿದ ಕಾಂಗ್ರೆಸ್​
ಅವಿನಾಶ್​ ಪಾಂಡೆImage Credit source: NDTV
Follow us
ನಯನಾ ರಾಜೀವ್
|

Updated on: Dec 24, 2023 | 2:23 PM

ನಾಲ್ಕು ರಾಜ್ಯಗಳಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್​ನ ಸಂಪೂರ್ಣ ಗಮನ ಈಗ 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯತ್ತ ನೆಟ್ಟಿದೆ. ಇದಕ್ಕಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಉತ್ತರಪ್ರದೇಶದ ಜವಾಬ್ದಾರಿಯನ್ನು ಅವಿನಾಶ್ ಪಾಂಡೆಗೆ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಅಂದರೆ ಲೋಕಸಭೆ ಚುನಾವಣೆ ವೇಳೆ ಅವಿನಾಶ್ ಪಾಂಡೆ ಉತ್ತರ ಪ್ರದೇಶದ ಉಸ್ತುವಾರಿಯಾಗಲಿದ್ದಾರೆ. ಈ ಹಿಂದೆ ಈ ಜವಾಬ್ದಾರಿಯನ್ನು ಪ್ರಿಯಾಂಕಾ ಗಾಂಧಿ ನಿಭಾಯಿಸುತ್ತಿದ್ದರು.

ಅವಿನಾಶ್ ಮೂಲತಃ ಮಹಾರಾಷ್ಟ್ರದ ನಾಗ್ಪುರದವರಾಗಿದ್ದು, ವೃತ್ತಿಯಲ್ಲಿ ವಕೀಲರೂ ಆಗಿದ್ದಾರೆ. ವಿದ್ಯಾರ್ಥಿ ದಿನಗಳಿಂದಲೇ ಅವರ ರಾಜಕೀಯ ಪಯಣ ಆರಂಭವಾಯಿತು. ಅವಿನಾಶ್ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್‌ನಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಇಂದು ಅವರಿಗೆ ಈ ದೊಡ್ಡ ಜವಾಬ್ದಾರಿಯನ್ನು ನೀಡಿದೆ.

ಇಲ್ಲಿಯವರೆಗಿನ ರಾಜಕೀಯ ಪಯಣದಲ್ಲಿ ಅವಿನಾಶ್ ಪಾಂಡೆ ಕಾಂಗ್ರೆಸ್ ಬಲವರ್ಧನೆಗೆ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ರಾಜ್ಯಮಟ್ಟದಿಂದ ರಾಷ್ಟ್ರಮಟ್ಟದವರೆಗೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. 2008 ರಲ್ಲಿ, ಅವರು ಮಹಾರಾಷ್ಟ್ರದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿದರು ಆದರೆ ಅವರು ಕೇವಲ ಒಂದು ಮತದಿಂದ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ವಿರುದ್ಧ ಸೋತರು. ಇದಾದ ನಂತರ 2010ರಲ್ಲಿ ಮತ್ತೊಮ್ಮೆ ರಾಜ್ಯಸಭಾ ಟಿಕೆಟ್ ನೀಡಿದಾಗ ಈ ಬಾರಿ ಅವಿರೋಧವಾಗಿ ಗೆದ್ದು ಸಂಸದರಾಗಿ ಆಯ್ಕೆಯಾದರು.

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು. ಇದಲ್ಲದೇ ಅವಿನಾಥ್ ಪಾಂಡೆ ಅವರು ಮಹಾರಾಷ್ಟ್ರದ ಹಲವು ಆಡಳಿತ ಸಮಿತಿಗಳ ಸದಸ್ಯರೂ ಆಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಅವಿನಾಶ್ ಪಾಂಡೆ ಅವರನ್ನು ರಾಜಸ್ಥಾನದ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು.

ಆದಾಗ್ಯೂ, ಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲೋಟ್ ನಡುವೆ ನಡೆಯುತ್ತಿರುವ ಉದ್ವಿಗ್ನತೆಯಿಂದಾಗಿ ಅವರನ್ನು ತೆಗೆದುಹಾಕಲಾಯಿತು. 2022 ರಲ್ಲಿ ಅವರಿಗೆ ಜಾರ್ಖಂಡ್ ಕಾಂಗ್ರೆಸ್‌ನ ಜವಾಬ್ದಾರಿಯನ್ನು ನೀಡಲಾಯಿತು. ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವಿನಾಶ್ ಪಾಂಡೆ ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಅನುಭವಿ ನಾಯಕರಲ್ಲಿ ಒಬ್ಬರು. ಅವರು ರಾಹುಲ್ ಗಾಂಧಿಯ ನಿಕಟವರ್ತಿ ಮತ್ತು ಪ್ರಿಯಾಂಕಾ ಗಾಂಧಿಯವರ ನೆಚ್ಚಿನ ನಾಯಕ ಎಂದು ಪರಿಗಣಿಸಲಾಗಿದೆ.

ಹಿರಿಯ ಕಾಂಗ್ರೆಸ್ ನಾಯಕ ಮಧುಸೂದನ್ ಮಿಸ್ತ್ರಿ ಯುಪಿ ಉಸ್ತುವಾರಿಯಾಗಿದ್ದಾಗ, ಅವಿನಾಶ್ ಪಾಂಡೆ ಸಹ ಉಸ್ತುವಾರಿಯಾಗಿ ಕೆಲಸ ಮಾಡುತ್ತಿದ್ದರು. ಇದೇ ಕಾರಣಕ್ಕೆ ಅವರಿಗೆ ಉತ್ತರ ಪ್ರದೇಶದ ರಾಜಕೀಯದ ಬಗ್ಗೆ ತುಂಬಾ ಅರಿವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ