2024ಕ್ಕೆ ಯಾಕೆ ಕಾಯಬೇಕು? ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಈಗಲೇ ಸಿದ್ಧ: ಅಜಿತ್ ಪವಾರ್

ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವಾಗ ಎನ್‌ಸಿಪಿ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸಾಧಿಸಲಿದೆಯೇ ಎಂಬ ಪ್ರಶ್ನೆಗೆ, 2024 ಏಕೆ, ನಾವು ಈಗ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸಾಧಿಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ

2024ಕ್ಕೆ ಯಾಕೆ ಕಾಯಬೇಕು? ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಈಗಲೇ ಸಿದ್ಧ: ಅಜಿತ್ ಪವಾರ್
ಅಜಿತ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on:Apr 22, 2023 | 8:07 PM

ಪುಣೆ: ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಊಹಾಪೋಹಗಳ ನಡುವೆ ನ್ಯಾಷನಲ್ ಕಾಂಗ್ರೆಸ್ ಪಕ್ಷದ (NCP) ಹಿರಿಯ ನಾಯಕ ಅಜಿತ್ ಪವಾರ್ (Ajit Pawar) ಅವರು 2024 ರ ವಿಧಾನಸಭಾ ಚುನಾವಣೆಗೆ ಕಾಯುವ ಬದಲು ಮಹಾರಾಷ್ಟ್ರದ (Maharashtra) ಮುಖ್ಯಮಂತ್ರಿ ಹುದ್ದೆಗೆ ಈಗಲೇ ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಪವಾರ್ ತಾನು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲು 100 ಪ್ರತಿಶತ ಇಷ್ಟಪಡುತ್ತೇನೆ ಎಂದಿದ್ದಾರೆ. ಪುಣೆಯಲ್ಲಿ ಸಕಾಲ್ ಮೀಡಿಯಾ ಗ್ರೂಪ್‌ಗೆ ನೀಡಿದ ಸಂದರ್ಶನದಲ್ಲಿ, ಪವಾರ್ ಅವರು ಜೂನ್ 2022ರಲ್ಲಿ ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯವೆದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅತೃಪ್ತರಾಗಿದ್ದರು ಮತ್ತು ಅವರ ಮನಸ್ಸಿನಲ್ಲಿ ಏನೋ ನಡೆಯುತ್ತಿದೆ ಎಂದು ಕೇಳಿದ್ದೇನೆ ಎಂದು ಹೇಳಿದರು. 2004 ರಲ್ಲಿ ಎನ್‌ಸಿಪಿ ತನ್ನ ಮಿತ್ರ ಪಕ್ಷವಾದ ಕಾಂಗ್ರೆಸ್‌ಗಿಂತ ಹೆಚ್ಚು ಅಸೆಂಬ್ಲಿ ಸ್ಥಾನಗಳನ್ನು ಗೆದ್ದಿದ್ದಾಗ ತನ್ನ ಸಹೋದ್ಯೋಗಿ ದಿವಂಗತ ಆರ್‌ಆರ್ ಪಾಟೀಲ್ ಮುಖ್ಯಮಂತ್ರಿಯಾಗುತ್ತಿದ್ದರು. ಆದರೆ ನಮ್ಮ ಪಕ್ಷವು ಉಪಮುಖ್ಯಮಂತ್ರಿ ಸ್ಥಾನವನ್ನು ಪಡೆಯುತ್ತದೆ ಎಂಬ ಸಂದೇಶವು ದೆಹಲಿಯಿಂದ ಬಂದಿತು.

ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವಾಗ ಎನ್‌ಸಿಪಿ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸಾಧಿಸಲಿದೆಯೇ ಎಂಬ ಪ್ರಶ್ನೆಗೆ, 2024 ಏಕೆ, ನಾವು ಈಗ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸಾಧಿಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ ಈ ಹೇಳಿಕೆಯ ಬಗ್ಗೆ ಅವರು ಹೆಚ್ಚಿನ ವಿವರಣೆ ನೀಡಿಲ್ಲ.

ಪವಾರ್ ಶುಕ್ರವಾರ ತಮ್ಮ ಪಕ್ಷದ ಮುಂಬೈ ಘಟಕದ ಸಭೆಗೆ ಗೈರು ಹಾಜರಾಗಿದ್ದು ಸಾಕಷ್ಟು ಊಹಾಪೋಹಗಳನ್ನು ಹುಟ್ಟು ಹಾಕಿತ್ತು. ಅದೇ ಸಮಯದಲ್ಲಿ ನಡೆಯುತ್ತಿರುವ ಇತರ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿರುವುದರಿಂದ ಎನ್‌ಸಿಪಿ ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಪವಾರ್ ಹೇಳಿದ್ದು, ಈ ಬಗ್ಗೆ ಹೆಚ್ಚು ಊಹಿಸಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.

ಸಂದರ್ಶನದಲ್ಲಿ ಪವಾರ್ ಅವರಲ್ಲಿ ನೀವು ಮುಖ್ಯಮಂತ್ರಿಯಾಗಲು ಬಯಸುತ್ತೀರಾ ಎಂದು ಕೇಳಿದಾಗ ಹೌದು, ನಾನು 100 ಪರ್ಸೆಂಟ್ ಆಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.ಕಳೆದ 20 ವರ್ಷಗಳಲ್ಲಿ ಪಕ್ಷವು ಅನೇಕ ಸಂದರ್ಭಗಳಲ್ಲಿ ಉಪಮುಖ್ಯಮಂತ್ರಿ ಸ್ಥಾನವನ್ನು ಪಡೆದಿರುವುದರ ಬಗ್ಗೆ ಕೇಳಿದಾಗ 2004 ರಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದಲ್ಲಿ ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ್ದವು, ನಾವು ಹೆಚ್ಚು ಸ್ಥಾನ ಗೆದ್ದಿದ್ದೆವು ಎಂದಿದ್ದಾರೆ.

ನಮಗೆ 71 ಸ್ಥಾನಗಳು ಸಿಕ್ಕಿವೆ, ಕಾಂಗ್ರೆಸ್ 69 ಗೆದ್ದಿದೆ. ಕಾಂಗ್ರೆಸ್ ಸೇರಿದಂತೆ ಎಲ್ಲರೂ ಎನ್​​ಸಿಪಿಯವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಭಾವಿಸಿದ್ದರು. ಆದರೆ, ಉನ್ನತ ಮಟ್ಟದಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಎನ್‌ಸಿಪಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂಬ ಸಂದೇಶ ದೆಹಲಿಯಿಂದ ಬಂದಿದೆ. ಹಾಗೆ ಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್ ಪಾಲಾಯಿತು ಎಂದು ಹೇಳಿದ್ದಾರೆ. ತಮ್ಮ ಸಹೋದ್ಯೋಗಿ ಪಾಟೀಲ್ ಅವರನ್ನು ಸದನದ ನಾಯಕರಾಗಿ ಆಯ್ಕೆ ಮಾಡಲಾಯಿತು. ಎನ್‌ಸಿಪಿಗೆ ಉನ್ನತ ಹುದ್ದೆಯನ್ನು ನೀಡಿದರೆ ಅವರು 2004 ರಲ್ಲಿ ಮುಖ್ಯಮಂತ್ರಿಯಾಗುತ್ತಿದ್ದರು ಎಂದಿದ್ದಾರೆ ಪವಾರ್.

ಇದನ್ನೂ ಓದಿ: ಸತ್ಯ ಹೇಳಿದ್ದಕ್ಕೆ ನಾನು ಯಾವುದೇ ಬೆಲೆ ತೆರಲು ಸಿದ್ಧ: ಬಂಗಲೆ ಖಾಲಿ ಮಾಡಿ ಕೀ ಹಸ್ತಾಂತರಿಸಿದ ರಾಹುಲ್ ಗಾಂಧಿ

ನಂತರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎನ್‌ಸಿಪಿಗಿಂತ ಹೆಚ್ಚು ಸ್ಥಾನಗಳನ್ನು ಗಳಿಸಿತು .ಸಹಜವಾಗಿಯೇ ಅದು ಮುಖ್ಯಮಂತ್ರಿ ಸ್ಥಾನವನ್ನು ತನ್ನಲ್ಲಿಯೇ ಇಟ್ಟುಕೊಂಡಿತು ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Sat, 22 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ