AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಾದಲ್ಲಿ ಮಾತ್ರ ಏಕೆ ಸಾಯುತ್ತಿದ್ದಾರೆ?; ವಿದ್ಯಾರ್ಥಿಗಳ ಆತ್ಮಹತ್ಯೆ ಬಗ್ಗೆ ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ ರಾಜಸ್ಥಾನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಕೋಟಾದಲ್ಲಿ ಮಾತ್ರ ವಿದ್ಯಾರ್ಥಿಗಳು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ? ಎಂದು ರಾಜಸ್ಥಾನ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆ ತೆಗೆದುಕೊಂಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಮಾರ್ಚ್ 24ರಂದು ಸುಪ್ರೀಂ ಕೋರ್ಟ್ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಕಾಳಜಿಯನ್ನು ಪರಿಹರಿಸಲು ಮತ್ತು ಅಂತಹ ಘಟನೆಗಳನ್ನು ತಡೆಯಲು ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸಿತ್ತು.

ಕೋಟಾದಲ್ಲಿ ಮಾತ್ರ ಏಕೆ ಸಾಯುತ್ತಿದ್ದಾರೆ?; ವಿದ್ಯಾರ್ಥಿಗಳ ಆತ್ಮಹತ್ಯೆ ಬಗ್ಗೆ ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Supreme Court
ಸುಷ್ಮಾ ಚಕ್ರೆ
|

Updated on: May 23, 2025 | 5:52 PM

Share

ರಾಜಸ್ಥಾನ, ಮೇ 23: ರಾಜಸ್ಥಾನದ (Rajasthan) ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳ ಹೆಚ್ಚಳದ ಬಗ್ಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ರಾಜಸ್ಥಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಈ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾದ ಸಂಗತಿ ಎಂದು ಟೀಕಿಸಿದೆ. ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು ಈ ವರ್ಷ ಇಲ್ಲಿಯವರೆಗೆ ಕೋಟಾದಲ್ಲಿ 14 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ನೀವು ಒಂದು ರಾಜ್ಯವಾಗಿ ಏನು ಮಾಡುತ್ತಿದ್ದೀರಿ? ಎಂದು ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court)  ಪ್ರಶ್ನೆ ಮಾಡಿದೆ.

“ನೀವು ಒಂದು ರಾಜ್ಯವಾಗಿ ಏನು ಮಾಡುತ್ತಿದ್ದೀರಿ? ಈ ಮಕ್ಕಳು ಕೋಟಾದಲ್ಲಿ ಮಾತ್ರ ಆತ್ಮಹತ್ಯೆಯಿಂದ ಏಕೆ ಸಾಯುತ್ತಿದ್ದಾರೆ? ನೀವು ಒಂದು ರಾಜ್ಯ ಸರ್ಕಾರವಾಗಿ ಈ ಬಗ್ಗೆ ಯೋಚಿಸಿಲ್ಲವೇ?” ಎಂದು ರಾಜಸ್ಥಾನ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನು ನ್ಯಾಯಮೂರ್ತಿ ಪಾರ್ದಿವಾಲಾ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ
Image
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
Image
ಭಾರತದ ಸಂಸದರ ನಿಯೋಗ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ
Image
ಪಾಕಿಸ್ತಾನದ ದೊಡ್ಡ ನಗರಗಳಲ್ಲಿ ಉಗ್ರರು ಮುಕ್ತವಾಗಿ ಸುತ್ತಾಡುತ್ತಿದ್ದಾರೆ
Image
ಕ್ಯಾಮೆರಾ ಮುಂದೆ ಮಾತ್ರ ರಕ್ತ ಕುದಿಯೋದೇಕೆ? ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ

ಇದನ್ನೂ ಓದಿ: ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ನೀಡಲು ಸುಪ್ರೀಂಕೋರ್ಟ್​ ನಕಾರ, ಕಾರಣವೇನು?

ಆತ್ಮಹತ್ಯೆ ಪ್ರಕರಣಗಳನ್ನು ಪರಿಶೀಲಿಸಲು ರಾಜಸ್ಥಾನದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ವಕೀಲರು ಹೇಳಿದ್ದಾರೆ. ಖರಗ್‌ಪುರದ ಐಐಟಿಯಲ್ಲಿ ಓದುತ್ತಿರುವ 22 ವರ್ಷದ ವಿದ್ಯಾರ್ಥಿಯ ಸಾವಿನ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಮೇ 4ರಂದು ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ನೀಟ್ ಆಕಾಂಕ್ಷಿಯಾಗಿದ್ದ ಹುಡುಗಿಯೊಬ್ಬಳು ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಕೋಟಾದ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಸಹ ಸುಪ್ರೀಂ ಕೋರ್ಟ್ ಪರಿಗಣಿಸಿದೆ. ಖರಗ್‌ಪುರದ ಐಐಟಿ ವಿದ್ಯಾರ್ಥಿನಿಯ ಸಾವಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಆದರೂ ಮೇ 8ರಂದು ದಾಖಲಾಗಿದ್ದ ಎಫ್‌ಐಆರ್‌ನಲ್ಲಿ 4 ದಿನಗಳ ವಿಳಂಬವಾಗಿದೆ. ಇದಕ್ಕೆ ಕಾರಣವೇನೆಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. “ಈ ವಿಷಯಗಳನ್ನು ಹಗುರವಾಗಿ ಪರಿಗಣಿಸಬೇಡಿ. ಇವು ತುಂಬಾ ಗಂಭೀರ ವಿಷಯಗಳು” ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಸಚಿವರು ಜವಾಬ್ದಾರಿಯಿಂದಿರಬೇಕು; ಸೋಫಿಯಾ ಖುರೇಷಿ ಕುರಿತ ವಿವಾದಾತ್ಮಕ ಹೇಳಿಕೆಗೆ ವಿಜಯ್ ಶಾಗೆ ಸುಪ್ರೀಂ ಕೋರ್ಟ್ ತರಾಟೆ

ವಿದ್ಯಾರ್ಥಿಗಳ ಆತ್ಮಹತ್ಯೆಯ ಪುನರಾವರ್ತಿತ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳನ್ನು ಗಮನಿಸಿದ ಮಾರ್ಚ್ 24ರಂದು ಸುಪ್ರೀಂ ಕೋರ್ಟ್ ತೀರ್ಪನ್ನು ನ್ಯಾಯಪೀಠ ಉಲ್ಲೇಖಿಸಿತು. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕಾಳಜಿಯನ್ನು ಪರಿಹರಿಸಲು ಮತ್ತು ಅಂತಹ ಘಟನೆಗಳನ್ನು ತಡೆಯಲು ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸಿತು. ಇಂದು ತೀರ್ಪಿಗೆ ಅನುಗುಣವಾಗಿ ಅಂತಹ ಪ್ರಕರಣಗಳಲ್ಲಿ ಎಫ್‌ಐಆರ್ ಅನ್ನು ತ್ವರಿತವಾಗಿ ದಾಖಲಿಸುವುದು ಅಗತ್ಯ ಎಂದು ಪೀಠ ಹೇಳಿದೆ. “ಎಫ್‌ಐಆರ್ ದಾಖಲಿಸಲು ನೀವು 4 ದಿನಗಳನ್ನು ಏಕೆ ತೆಗೆದುಕೊಂಡಿದ್ದೀರಿ?” ಎಂದು ನ್ಯಾಯಾಲಯದಲ್ಲಿ ಹಾಜರಿದ್ದ ಸಂಬಂಧಪಟ್ಟ ಪೊಲೀಸ್ ಅಧಿಕಾರಿಯನ್ನು ಪೀಠ ಕೇಳಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!