
ನವದೆಹಲಿ, ಅಕ್ಟೋಬರ್ 14: ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆಯವರನ್ನು ವ್ಯಕ್ತಿಯೊಬ್ಬರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ದೀಪ್ಕೆ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದ ವೇಳೆ ‘ದೇಶವನ್ನು ಏಕೆ ಹಾಳು ಮಾಡುತ್ತಿದ್ದೀಯಾ?’ ಎಂದು ವ್ಯಕ್ತಿ ಪ್ರಶ್ನಿಸಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಹಾರಾಷ್ಟ್ರದಲ್ಲಿರುವ ತಮ್ಮ ಊರಿಗೆ ತೆರಳಿದ್ದ ದೀಪ್ಕೆ ಬುಧವಾರ ಮತ್ತೆ ದೆಹಲಿಗೆ ಮರಳಿದ್ದಾರೆ. ಅವರ ಅಜ್ಜಿ ನಿಧನರಾದ ಹಿನ್ನೆಲೆಯಲ್ಲಿ ಅವರು ಸ್ವಗ್ರಾಮಕ್ಕೆ ತೆರಳಿದ್ದರು. ಇದಕ್ಕೂ ಮೊದಲು, ದೆಹಲಿಯ ಜಂತರ್ ಮಂತರ್ನಲ್ಲಿ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ್ದ ವೇಳೆ ಅವರನ್ನು ಬಂಧಿಸಲಾಗಿತ್ತು.
Watch | CJP founder Abhijeet Dipke booed at an airport.
The guy who said “kyun desh kharab kar raha hai” spoke for majority of INDIANS who are literally sick and tired of useless protests every now and then! https://t.co/kCAEeIggPj
— Yash Rawat (@india_expert) October 14, 2026
ಇನ್ನು ದೆಹಲಿ ಏರ್ಪೋರ್ಟ್ನ್ಲಿ ನಡೆದಿರುವ ಘಟನೆ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿಯೂ ಹಲವರು ಅಭಿಜೀತ್ ದೀಪ್ಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಜೆಪಿ ಪ್ರತಿಭಟನೆಯ ಹಿಂದಿನ ವಾಸ್ತವ ಬಯಲಾಗುತ್ತಿದೆ. ಹೀಗಾಗಿ ದೀಪ್ಕೆ ವಿರುದ್ಧ ಸಾರ್ವಜನಿಕರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಓರ್ವರು ಹೇಳಿದ್ದರೆ, ಅರಾಜಕತಾವಾದಿಯೇ, ನಿಮ್ಮ ಬಣ್ಣ ಬಯಲಾಗಿದೆ. ಜನರು ನಿಮ್ಮನ್ನು ದೇಶದ್ರೋಹಿ ಎಂದು ಕರೆದು ಪ್ರಶ್ನಿಸುತ್ತಿದ್ದಾರೆ ಎಂದು ಮಗದೊಬ್ಬರು ಕಿಡಿ ಕಾರಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿಯ ನಾಟಕದಿಂದ ದೇಶದ ಜನರು ಬೇಸತ್ತಿದ್ದಾರೆ. ಹೀಗಾಗಿ ಅಭಿಜೀತ್ ದೀಪ್ಕೆ ಪ್ರತಿದಿನ ಇಂತಹ ಮುಜುಗರದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಇನ್ನೋರ್ವರು ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ: ಹುಟ್ಟುಹಬ್ಬದಂದೇ ಜೈಲು ಸೇರಿದ ಸಿಜೆಪಿ ನಾಯಕ ಅಶುತೋಷ್ ರಂಕಾ, ಸೌರವ್ ದಾಸ್ಗೆ ಐದು ದಿನಗಳ ನ್ಯಾಯಾಂಗ ಬಂಧನ
ದೆಹಲಿಗೆ ಆಗಮಿಸುತ್ತಿದ್ದಂತೆ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ವಾಗ್ದಾಳಿ ನಡೆಸಿದ್ದು, ಈ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವೇ? ಆಶುತೋಷ್ ಮತ್ತು ಸೌರವ್ ಅವರು ಜಂತರ್ ಮಂತರ್ಗೆ ಹೋಗಿ ತ್ರಿವರ್ಣ ಧ್ವಜ ಹಾರಿಸಿದ್ದಕ್ಕಾಗಿ ಅವರನ್ನು ಐದು ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಇಂತಹ ಘಟನೆ ಕೊನೆಯದಾಗಿ ಬ್ರಿಟಿಷರ ಆಡಳಿತದ ಕಾಲದಲ್ಲಿ ನಡೆದಿತ್ತು. ಆಗ ಸಾರ್ವಜನಿಕ ಸ್ಥಳಗಳಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿ ಜೈಲಿಗೆ ಹಾಕಲಾಗುತ್ತಿತ್ತು. ನರೇಂದ್ರ ಮೋದಿ ಕೂಡ ಅದೇ ರೀತಿಯ ಕೆಲಸ ಮಾಡುತ್ತಿದ್ದಾರೆ ಎಂದವರು ಆರೋಪಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.