Sedition Law: ಬ್ರಿಟಿಷರ ಕಾಲದ ದೇಶದ್ರೋಹ ಕಾಯ್ದೆ ಇನ್ನೂ ಅಗತ್ಯವಿದೆಯೇ?; ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ
ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷದ ಬಳಿಕವೂ ದೇಶದ್ರೋಹ ಕಾಯ್ದೆಯ ಅಗತ್ಯವಿದೆಯಾ? ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.
ನವದೆಹಲಿ: ದೇಶದ್ರೋಹ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ನೇತೃತ್ವದ ಪೀಠ ಇಂದು ನಡೆಸಿದೆ. ದೇಶದ್ರೋಹದ ಕಾಯ್ದೆ (Sedition Law) ದುರ್ಬಳಕೆಯಾಗುತ್ತಿದೆ. ಇದೊಂದು ಬ್ರಿಟಿಷ್ ಕಾಲದ (Colonial Law) ಕಾನೂನು. ಸ್ವಾತಂತ್ರ್ಯ ಬಂದು 75 ವರ್ಷಗಳಾದ ಬಳಿಕವೂ ಈ ಕಾನೂನಿನ ಅಗತ್ಯವಿದೆಯಾ? ಎಂದು ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ (NV Ramana) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ದೇಶದ್ರೋಹ ಕಾಯ್ದೆಯಡಿ ಮಹಾತ್ಮ ಗಾಂಧೀಜಿ, ಬಾಲ ಗಂಗಾಧರ ತಿಲಕ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದು ಬ್ರಿಟಿಷ್ ಕಾಲದ ಕಾನೂನು. ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷದ ಬಳಿಕವೂ ದೇಶದ್ರೋಹ ಕಾಯ್ದೆಯ ಅಗತ್ಯವಿದೆಯಾ? ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ದೇಶದ್ರೋಹದ ಕಾಯ್ದೆಯನ್ನು ರದ್ದು ಪಡಿಸಲು ಕೋರಿ ಕರ್ನಾಟಕದ ಎಸ್.ಜಿ. ಒಂಭತ್ತಕೆರೆ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆ ನಡೆಸಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
Supreme Court, while hearing a plea challenging the constitutional validity of the Sedition Law, tells the Centre that it is a colonial law and was used against freedom fighters. Supreme Court asks Centre if Sedition Law is still required to exist after 75 years of independence. pic.twitter.com/MCeVT24lqv
— ANI (@ANI) July 15, 2021
ಐಪಿಸಿ ಸೆಕ್ಷನ್ 124ಎ ಅಡಿಯಲ್ಲಿ ಬರುವ ದೇಶದ್ರೋಹ ಕಾಯ್ದೆಯು ಭಾರತೀಯ ಪ್ರಜೆಗಳ ಮೂಲಭೂತ ಹಕ್ಕುಗಳಾದ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಬ್ರಿಟಿಷರ ಕಾಲದಲ್ಲಿ ಜಾರಿಗೆ ಬಂದ ದೇಶದ್ರೋಹ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ಮೂಲದ ನಿವೃತ್ತ ಮೇಜರ್ ಜನರಲ್ ಎಸ್.ಜಿ. ಒಂಭತ್ತೆಕರೆ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ವಸಾಹತುಶಾಹಿಯಾದ ಈ ದೇಶದ್ರೋಹ ಕಾಯ್ದೆಯನ್ನೇ ಬ್ರಿಟಿಷರು ಮಹಾತ್ಮ ಗಾಂಧೀಜಿಯವರ ಬಾಯಿ ಮುಚ್ಚಿಸಲು ಬಳಸಿದ್ದರು ಎಂದು ಸುಪ್ರೀಂಕೋರ್ಟ್ ಸಿಜಿಐ ಎನ್.ವಿ. ರಮಣ ಅರ್ಜಿ ವಿಚಾರಣೆ ವೇಳೆ ಹೇಳಿದ್ದಾರೆ.
(Why Colonial Sedition Law Colonial needed 75 years after Independence Supreme Court Asks Union Government )
Published On - 1:19 pm, Thu, 15 July 21