PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು? 

Narendra Modi | PM Modi travel: ಪ್ರಧಾನಿ ನರೇಂದ್ರ ಮೋದಿಯವರ ವಿದೇಶ ಪ್ರವಾಸದ ವೇಳಾಪಟ್ಟಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅದರಲ್ಲಿ ಒಂದು ಮಾದರಿಯನ್ನು ಗಮನಿಸಬಹುದು. ವಿದೇಶ ಪ್ರವಾಸಕ್ಕೆ ತೆರಳುವಾಗ ಅವರು ರಾತ್ರಿಯ ಪ್ರಯಾಣಕ್ಕೆ ಆದ್ಯತೆ ನೀಡುತ್ತಾರೆ. ಅದೇಕೆ? ಇಲ್ಲಿದೆ ನೋಡಿ.

PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು? 
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
| Updated By: shivaprasad.hs

Updated on: May 21, 2022 | 8:43 AM

ಕಳೆದ ಹದಿನೈದು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಿಡುವಿಲ್ಲದ ವಿದೇಶ ಪ್ರವಾಸದಲ್ಲಿ ಭಾಗಿಯಾಗಿದ್ದಾರೆ. ಈ ತಿಂಗಳ ಆರಂಭದಲ್ಲಿ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್‌ಗೆ ಮೂರು ದಿನಗಳ ಭೇಟಿ ನೀಡಿದ್ದ ಅವರು ನಂತರ ಬುದ್ಧ ಜಯಂತಿಯಂದು ನೇಪಾಳಕ್ಕೆ ತೆರಳಿದ್ದರು. ಮುಂದಿನ ವಾರ ಜಪಾನ್‌ಗೆ ತೆರಳಲಿರುವ ಪ್ರಧಾನಿ, ಈ ತಿಂಗಳಿನ ತಮ್ಮ ವಿದೇಶ ಪ್ರಯಾಣವನ್ನು ಮುಂದುವರೆಸಲಿದ್ದಾರೆ. ಅವರ ವೇಳಾಪಟ್ಟಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅದರಲ್ಲಿ ಒಂದು ಮಾದರಿಯನ್ನು ಗಮನಿಸಬಹುದು. ವಿದೇಶ ಪ್ರವಾಸಕ್ಕೆ ತೆರಳುವಾಗ ಪ್ರಧಾನಿ ರಾತ್ರಿಯ ಪ್ರಯಾಣಕ್ಕೆ ಆದ್ಯತೆ ನೀಡುತ್ತಾರೆ. ಪ್ರಯಾಣದ ನಂತರ ಮರುದಿನ ನೇರವಾಗಿ ಸಭೆಗಳಿಗೆ ಹಾಜರಾಗುತ್ತಾರೆ. ಮತ್ತೆ ರಾತ್ರಿಯಲ್ಲಿ ಅವರು ಮುಂದಿನ ಗಮ್ಯಸ್ಥಾನಕ್ಕೆ ತೆರಳುತ್ತಾರೆ. ಮೋದಿಯವರು ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವುದೇಕೆ? ಇಲ್ಲಿದೆ ನೋಡಿ.

ಪ್ರಧಾನಿಯವರ ಮುಂದಿನ ಭೇಟಿ ಜಪಾನ್​ಗೆ. ಅದೂ ಕೂಡ ಈ ಹಿಂದಿನ ಪ್ರವಾಸಕ್ಕಿಂತ ಭಿನ್ನವಾಗಿಲ್ಲ. ಮೇ 22 ರ ರಾತ್ರಿ ಹೊರಡಲಿರುವ ಪ್ರಧಾನಿ, ಮೇ 23 ರಂದು ಮುಂಜಾನೆ ಟೋಕಿಯೊ ತಲುಪಲಿದ್ದಾರೆ. ಅಲ್ಲಿಂದ ನೇರವಾಗಿ ತಮ್ಮ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಉನ್ನತ ಉದ್ಯಮಿಗಳೊಂದಿಗೆ ಸಭೆಗಳನ್ನು ನಡೆಸಲಿರುವ ಪ್ರಧಾನಿ, ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮರುದಿನ ಕ್ವಾಡ್ ಸಭೆ ಹಾಗೂ ದ್ವಿಪಕ್ಷೀಯ ಮಾತುಕತೆಗಳನ್ನ ನಡೆಸಲಿದ್ದಾರೆ. ನಂತರ ಅದೇ ರಾತ್ರಿ ಭಾರತಕ್ಕೆ ಹಿಂದಿರುಗಲಿದ್ದಾರೆ.

ಪ್ರಧಾನಿ ಮೋದಿ ಅವರ ಇತ್ತೀಚಿನ ಭೇಟಿಗಳನ್ನು ಗಮನಿಸಿದರೆ, ಜರ್ಮನಿ ಮತ್ತು ಡೆನ್ಮಾರ್ಕ್‌ನಲ್ಲಿ ಕೇವಲ ಒಂದೊಂದು ರಾತ್ರಿಗಳನ್ನು ಕಳೆದಿದ್ದರು. ಅದೇ ರೀತಿ, ಜಪಾನ್ ಭೇಟಿಯ ಸಮಯದಲ್ಲಿ ಅವರು ಕೇವಲ ಒಂದು ರಾತ್ರಿಯನ್ನು ಕಳೆಯಲಿದ್ದಾರೆ ಮತ್ತು ರಾತ್ರಿಯಲ್ಲಿ ಸ್ವದೇಶಕ್ಕೆ ಮರಳಲಿದ್ದಾರೆ. ಅವರು ರಾತ್ರಿಯ ಪ್ರಯಾಣಕ್ಕೆ ಆದ್ಯತೆ ನೀಡಲು ಕಾರಣ ಇಲ್ಲಿದೆ.

ಪ್ರಧಾನಿ ರಾತ್ರಿಯ ವೇಳೆ ಪ್ರವಾಸ ಕೈಗೊಳ್ಳುವುದೇಕೆ?

ಈ ತಿಂಗಳಿನಲ್ಲಿ ಪ್ರಧಾನಿ ಮೋದಿ ಒಟ್ಟಿ ಐದು ದೇಶಗಳಿಗೆ ಭೇಟಿ ನೀಡಿದ್ದು, ಆ ದೇಶಗಳಲ್ಲಿ ಒಟ್ಟು ಮೂರು ರಾತ್ರಿಗಳನ್ನು ಮಾತ್ರ ಕಳೆದಿದ್ದಾರೆ. ತಮ್ಮ ಸಮಯವನ್ನು ಉಳಿಸುವ ಸಲುವಾಗಿ ಪ್ರಧಾನಿ ಮೋದಿ ರಾತ್ರಿಯ ಪ್ರಯಾಣಕ್ಕೆ ಆದ್ಯತೆ ನೀಡುತ್ತಾರೆ. ಇತ್ತೀಚಿನ ಪ್ರವಾಸದಲ್ಲಿ ವಿಮಾನ ಪ್ರಯಾಣದಲ್ಲಿಯೇ ನಾಲ್ಕು ರಾತ್ರಿಗಳನ್ನು ಪ್ರಧಾನಿ ಕಳೆದಿದ್ದಾರೆ. ‘ಸಮಯ ಮತ್ತು ಸಂಪನ್ಮೂಲ’ಗಳನ್ನು ಉಳಿಸಲು ಪ್ರಧಾನಿ ನರೇಂದ್ರ ಮೋದು ರೂಡಿಸಿಕೊಂಡಿರುವ ಅಭ್ಯಾಸಗಳಲ್ಲಿ ಇದೂ ಒಂದಾಗಿದೆ ಎಂದು ಪಿಎಂ ಆಪ್ತ ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ವರದಿ ಮಾಡಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ