Assembly Elections: ಚುನಾವಣಾ ಆಯೋಗ ಮಹಾರಾಷ್ಟ್ರ ಚುನಾವಣೆಯ ದಿನಾಂಕವನ್ನು ಏಕೆ ಘೋಷಿಸಲಿಲ್ಲ?
ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಜಮ್ಮು ಕಾಶ್ಮೀರ ಮತ್ತು ಹರಿಯಾಣದ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದ್ದಾರೆ. ಆದರೆ, ಮಹಾರಾಷ್ಟ್ರದ ಜನರು ರಾಜ್ಯಕ್ಕೆ ಚುನಾವಣಾ ದಿನಾಂಕಗಳನ್ನು ಏಕೆ ಘೋಷಿಸಲಿಲ್ಲ ಎಂದು ಆಶ್ಚರ್ಯ ಪಟ್ಟಿದ್ದಾರೆ. ಅದಕ್ಕೆ ಕಾರಣವನ್ನು ಚುನಾವಣಾ ಆಯೋಗ ತಿಳಿಸಿದೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಹರಿಯಾಣ ರಾಜ್ಯಗಳಲ್ಲಿ ಬಹು ನಿರೀಕ್ಷಿತ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಪ್ರಕಟಿಸಿದೆ. ಆದರೆ, ಜಮ್ಮು ಮತ್ತು ಕಾಶ್ಮೀರ ಚುನಾವಣೆಗೆ ಭದ್ರತಾ ಅಗತ್ಯತೆಗಳು ಸೇರಿದಂತೆ ಹಲವು ಕಾರಣಗಳನ್ನು ಉಲ್ಲೇಖಿಸಿ ಚುನಾವಣಾ ಸಂಸ್ಥೆಯು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸಲಿಲ್ಲ.
ಇಂದು (ಶುಕ್ರವಾರ) ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ (ಸಿಇ) ರಾಜೀವ್ ಕುಮಾರ್, ಜಮ್ಮು ಮತ್ತು ಕಾಶ್ಮೀರಕ್ಕೆ ಭದ್ರತೆಯ ಅಗತ್ಯತೆಗಳ ಕಾರಣದಿಂದ ಮಹಾರಾಷ್ಟ್ರ ಚುನಾವಣೆಯನ್ನು ನಂತರ ಘೋಷಿಸಲಾಗುವುದು ಎಂದು ಹೇಳಿದರು.
“ಕಳೆದ ಬಾರಿ, ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗಳು ಒಟ್ಟಿಗೆ ನಡೆದಿದ್ದವು. ಆ ಸಮಯದಲ್ಲಿ ಜಮ್ಮು ಕಾಶ್ಮೀರ ಒಂದು ಅಂಶವಾಗಿರಲಿಲ್ಲ. ಆದರೆ, ಈ ಬಾರಿ ಈ ವರ್ಷ 4 ಚುನಾವಣೆಗಳು ಮತ್ತು ಇದರ ನಂತರ ತಕ್ಷಣವೇ ಐದನೇ ಚುನಾವಣೆಗಳು ನಡೆಯಲಿವೆ. ಇನ್ನೊಂದು ಅಂಶವೆಂದರೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದೆ ಮತ್ತು ಹಲವಾರು ಹಬ್ಬಗಳು ಕೂಡ ಸಾಲುಗಟ್ಟಿವೆ. ಹೀಗಾಗಿ, ಮಹಾರಾಷ್ಟ್ರದಲ್ಲಿ ನಂತರ ಚುನಾವಣೆ ಘೋಷಿಸಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ, ಜಮ್ಮು ಕಾಶ್ಮೀರದಲ್ಲಿ ನಮ್ಮದೇ ಬಹುಮತ ಬರಲಿದೆ: ಫಾರೂಕ್ ಅಬ್ದುಲ್ಲಾ
ಇಸಿಐ ಮಹಾರಾಷ್ಟ್ರದ ಚುನಾವಣೆಯ ದಿನಾಂಕವನ್ನು ಪ್ರಕಟಿಸುತ್ತದೆಯೇ ಎಂದು ತಿಳಿಯಲು ನಾಗರಿಕರು ಉತ್ಸುಕರಾಗಿದ್ದರು. ಆದರೆ, ಮುಖ್ಯ ಚುನಾವಣಾ ಆಯುಕ್ತರು ಭಾರೀ ಮಳೆ, ಗಣಪತಿ ಹಬ್ಬ ಮತ್ತು ದೀಪಾವಳಿ ಹಬ್ಬಗಳಂತಹ ಸವಾಲುಗಳನ್ನು ಉಲ್ಲೇಖಿಸಿದ್ದಾರೆ. ಜೊತೆಗೆ, ಜಮ್ಮು ಕಾಶ್ಮೀರದಲ್ಲಿ ಹೆಚ್ಚುವರಿ ಭದ್ರತೆಯ ಅವಶ್ಯಕತೆಗಳು ಮುಂದಿನ ಹಂತದಲ್ಲಿ ಮಹಾರಾಷ್ಟ್ರದ ಚುನಾವಣಾ ದಿನಾಂಕಗಳನ್ನು ಘೋಷಿಸಲು ಕಾರಣವಾಗುತ್ತವೆ.
#WATCH | On being asked about Assembly Elections in Maharashtra, Chief Election Commissioner Rajiv Kumar says, “Last time, Maharashtra and Haryana Assembly elections were held together. At that time, J&K was not a factor but this time there are 4 elections this year and 5th… pic.twitter.com/PsrV0724BR
— ANI (@ANI) August 16, 2024
ರಾಜಕೀಯ ಪ್ರಭಾವದಿಂದ ಮಹಾರಾಷ್ಟ್ರದಲ್ಲಿ ಚುನಾವಣೆ ವಿಳಂಬವಾಗುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಯಾವುದೇ ರಾಜಕೀಯ ಹಸ್ತಕ್ಷೇಪವನ್ನು ನಿರಾಕರಿಸಿ, ಹರಿಯಾಣ ಮತ್ತು ಮಹಾರಾಷ್ಟ್ರದ ಅಧಿಕಾರಾವಧಿಯು ಕೆಲವೇ ದಿನಗಳ ಅಂತರದಲ್ಲಿ ಕೊನೆಗೊಳ್ಳುತ್ತಿರುವುದು ನಿಜ. ಆದರೆ, 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಸ್ಥಿತಿ ವಿಭಿನ್ನವಾಗಿತ್ತು, ನಾವು ಎರಡು ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ನಿರ್ಧರಿಸಿರುವುದರಿಂದ ಹರಿಯಾಣದೊಂದಿಗೆ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಯಿತು.
ಇದನ್ನೂ ಓದಿ: Assembly Elections: ಜಮ್ಮು ಕಾಶ್ಮೀರದಲ್ಲಿ ಸೆ. 18, ಹರಿಯಾಣದಲ್ಲಿ ಅಕ್ಟೋಬರ್ 1ಕ್ಕೆ ವಿಧಾನಸಭಾ ಚುನಾವಣೆ
ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಶಾಸಕಾಂಗ ಸಭೆಗಳ ಅವಧಿಯು ಕ್ರಮವಾಗಿ ನವೆಂಬರ್ 3 ಮತ್ತು ನವೆಂಬರ್ 26 ರಂದು ಮುಕ್ತಾಯಗೊಳ್ಳುತ್ತದೆ. ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಲು ಮತ್ತು ಮೇಲ್ವಿಚಾರಣೆ ಮಾಡಲು ಈ ತಿಂಗಳು ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣಕ್ಕೆ ಪ್ರವಾಸ ಮಾಡಿದ್ದೇನೆ. ಆದರೆ ಇನ್ನೂ ಮಹಾರಾಷ್ಟ್ರಕ್ಕೆ ಭೇಟಿ ನೀಡಿಲ್ಲ ಎಂದು ಚುನಾವಣಾ ಆಯೋಗದ ಆಯುಕ್ತರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮುಂದಿನ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್ ಕೊನೆಯ ವಾರದಲ್ಲಿ ಮಹಾರಾಷ್ಟ್ರದ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ದೀಪಾವಳಿ ನಂತರ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ