ದೇವರೇಕೆ ಮೋದಿಗೆ ಅದಾನಿಗೆ ಮಾತ್ರ ಸಹಾಯ ಮಾಡಲು ಹೇಳುತ್ತಿದ್ದಾನೆ?; ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಕಿಡಿ

ಹರಿಯಾಣ ವಿಧಾನಸಭಾ ಚುನಾವಣೆಗೆ ಪ್ರಚಾರದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಪೊರೇಟ್ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ರೈತರ ಸಂಕಷ್ಟಗಳನ್ನು ಪರಿಹರಿಸುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೇವರೇಕೆ ಮೋದಿಗೆ ಅದಾನಿಗೆ ಮಾತ್ರ ಸಹಾಯ ಮಾಡಲು ಹೇಳುತ್ತಿದ್ದಾನೆ?; ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಕಿಡಿ
ರಾಹುಲ್ ಗಾಂಧಿ
Follow us
|

Updated on: Sep 30, 2024 | 5:54 PM

ನವದೆಹಲಿ: ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರಿಗೆ ಮಾತ್ರ ಸಹಾಯ ಮಾಡಲು ದೇವರು ಏಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳುತ್ತಿದ್ದಾನೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದ ಅಂಬಾಲಾದಲ್ಲಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಜ್ವಲಂತವಾಗಿದ್ದರೂ ಇಂದು 20 ಲಕ್ಷ ಸರ್ಕಾರಿ ಉದ್ಯೋಗಗಳು ಏಕೆ ಖಾಲಿ ಇವೆ ಎಂದು ನಾನು ಕೇಂದ್ರ ಸರ್ಕಾರವನ್ನು ಕೇಳಲು ಬಯಸುತ್ತೇನೆ. ಹರಿಯಾಣ ಸರ್ಕಾರವು ಹರಿಯಾಣದ ಜನರಿಗೆ ಈ ಉದ್ಯೋಗಗಳನ್ನು ಏಕೆ ಒದಗಿಸಿಲ್ಲ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹರಿಯಾಣಕ್ಕೆ ಭೇಟಿ ನೀಡಿ ಭಾಷಣ ಮಾಡಲು ಮತ್ತು ತಮಗೆ ಬೇಕಾದುದನ್ನು ಹೇಳಿ ಹೋಗುತ್ತಾರೆ. ಆದರೆ ಅವರು ಹರಿಯಾಣ ರಾಜ್ಯದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನಹರಿಸುವುದಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ವಿದೇಶದಲ್ಲಿ ಭಾರತವನ್ನು ಕಾಂಗ್ರೆಸ್ ಅವಮಾನಿಸಿದೆ; ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನೀವೆಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ್ದೀರಿ. ಅವರು ದೇವರೊಂದಿಗೆ ನೇರ ಸಂಪರ್ಕವನ್ನು ಹೊಂದಿದ್ದಾರೆ ಮತ್ತು ಅವರು ಸ್ವೀಕರಿಸುವ ಎಲ್ಲ ಆದೇಶವನ್ನು ಅನುಸರಿಸುತ್ತಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ಆದರೆ, ಅದಾನಿಗೆ ಸಹಾಯ ಮಾಡಲು ದೇವರು ಏಕೆ ಎಲ್ಲಾ ಮೋದಿಗೆ ನೀಡುತ್ತಾನೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ರಾಹುಲ್ ಲೇವಡಿ ಮಾಡಿದ್ದಾರೆ.

ನರೇಂದ್ರ ಮೋದಿ ಅವರು ಕಾರ್ಪೊರೇಟ್ ಸಂಸ್ಥೆಗಳಿಗೆ ಬೇಕಾದಂತಹ ಕ್ರಮಗಳನ್ನೇ ತೆಗೆದುಕೊಳ್ಳುತ್ತಿದ್ದಾರೆ. ರೈತರ ಸಂಕಷ್ಟಗಳನ್ನು ಪರಿಹರಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕಾಂಗ್ರೆಸ್ ಹರಿಯಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸಲು ನಿರ್ಧರಿಸಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ಹಾಡು-ನೃತ್ಯ; ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪ್ರತಿ ಸಮುದಾಯದ ಯುವಕರಿಗೆ 2 ಲಕ್ಷ ಉದ್ಯೋಗಗಳನ್ನು ನೀಡಲಿದೆ ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ರಾಜ್ಯ ಚುನಾವಣೆಗೆ ಕಾಂಗ್ರೆಸ್ ತನ್ನ ವಿವರವಾದ ಚುನಾವಣಾ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಮಾದಕ ವ್ಯಸನದ ವಿರುದ್ಧ ಹೋರಾಡಲು ವಿಶೇಷ ಕಾರ್ಯಪಡೆಯ ಭರವಸೆ ನೀಡಿದೆ. ನಿವೃತ್ತ ಅಗ್ನಿವೀರರಿಗೆ ಉದ್ಯೋಗ ನೀಡುವುದಾಗಿ, ಕ್ರೀಡಾ ಪಟುಗಳಿಗೆ ‘ಪದಕ್ ಲಾವೋ-ಪದ ಪಾವೋ’ ಯೋಜನೆ ಮತ್ತು ರೈತರಿಗೆ ಸಾಲ ಪರಿಹಾರ ನೀಡಲು ಕಿಸಾನ್ ಆಯೋಗವನ್ನು ಮರುಪ್ರಾರಂಭಿಸುವುದಾಗಿ ಭರವಸೆ ನೀಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ