ಬೇರೆ ವೈದ್ಯಕೀಯ ಪದ್ಧತಿಗಳನ್ನು ನೀವು ಹಳಿಯುವುದೇಕೆ? ಬಾಬಾ ರಾಮದೇವ್​​ಗೆ ಸುಪ್ರೀಂ ತರಾಟೆ

ರಾಮದೇವ್ ಅಲೋಪಥಿ ವೈದ್ಯರ ಮೇಲೆ ಆರೋಪ ಮಾಡುತ್ತಿರುವುದೇಕೆ? ಅವರು ಯೋಗವನ್ನು ಜನಪ್ರಿಯಗೊಳಿಸಿದರು, ಒಳ್ಳೆಯದೇ. ಆದರೆ ಅವರು ಇತರ ವೈದ್ಯ ಪದ್ಧತಿಗಳನ್ನು ಟೀಕಿಸಬಾರದು

ಬೇರೆ ವೈದ್ಯಕೀಯ ಪದ್ಧತಿಗಳನ್ನು ನೀವು ಹಳಿಯುವುದೇಕೆ? ಬಾಬಾ ರಾಮದೇವ್​​ಗೆ ಸುಪ್ರೀಂ ತರಾಟೆ
ಬಾಬಾ ರಾಮದೇವ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 23, 2022 | 4:15 PM

ದೆಹಲಿ: ಅಲೋಪತಿಯಂಥ ಆಧುನಿಕ ವೈದ್ಯಕೀಯ ಪದ್ಧತಿಗಳನ್ನು ನೀವು ಹಳಿಯುವುದೇಕೆ? ಎಂದು ಸುಪ್ರೀಂಕೋರ್ಟ್ (Supreme Court) ಮಂಗಳವಾರ ಯೋಗ ಗುರು ಬಾಬಾ ರಾಮದೇವ್ (Baba Ramdev) ಅವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಮದೇವ್ ಆಯುರ್ವೇದವನ್ನು ಪ್ರಚುರ ಪಡಿಸಲು ಅಭಿಯಾನ ಮಾಡಬಹುದು ಆದರೆ ಇತರ ವೈದ್ಯಕೀಯ ಪದ್ಧತಿಗಳನ್ನು ನಿಂದಿಸಬಾರದು ಎಂದು ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ (Chief Justice N V Ramana) ನೇತೃತ್ವದ ನ್ಯಾಯಪೀಠ ಹೇಳಿದೆ. ರಾಮದೇವ್ ಅಲೋಪಥಿ ವೈದ್ಯರ ಮೇಲೆ ಆರೋಪ ಮಾಡುತ್ತಿರುವುದೇಕೆ? ಅವರು ಯೋಗವನ್ನು ಜನಪ್ರಿಯಗೊಳಿಸಿದರು, ಒಳ್ಳೆಯದೇ. ಆದರೆ ಅವರು ಇತರ ವೈದ್ಯ ಪದ್ಧತಿಗಳನ್ನು ಟೀಕಿಸಬಾರದು. ಅವರು ಅನುಸರಿಸುತ್ತಿರುವ  ಪದ್ಧತಿ ಎಲ್ಲವನ್ನೂ ಗುಣಪಡಿಸುತ್ತದೆ ಎಂಬುದು ಏನು ಗ್ಯಾರೆಂಟಿ? ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ. ಅಲೋಪತಿ ವೈದ್ಯಕೀಯ ಪದ್ಧತಿ ಬಗ್ಗೆ, ವೈದ್ಯರ ಬಗ್ಗೆ ಮತ್ತು ಕೋವಿಡ್ ಲಸಿಕೆ ವಿರುದ್ಧ ಬಾಬಾ ರಾಮದೇವ್ ಅಭಿಯಾನ ನಡೆಸುತ್ತಿರುವುದನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘಟಣೆ(IMA) ಸುಪ್ರೀಂಗೆ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ರೀತಿ ಯೋಗಗುರುವನ್ನು ತರಾಟೆಗೆ ತೆಗೆದುಕೊಂಡಿದೆ. ಅದೇ ವೇಳೆ ಐಎಂಎಯ ಅರ್ಜಿಗೆ ಪ್ರತಿಕ್ರಿಯಿಸುವಂತೆ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಕಳೆದ ವರ್ಷ ಕೊವಿಡ್ ಎರಡನೇ ಅಲೆಯಲ್ಲಿ ದೇಶದಲ್ಲಿ ಸಾವಿರಾರು ಮಂದಿ ಸಾವಿಗೀಡಾದಾಗ, ರಾಮದೇವ್ ಅವರು ವಿಡಿಯೊವೊಂದರಲ್ಲಿ ಅಲೋಪತಿ ವೈದ್ಯಕೀಯ ಪದ್ಧತಿಯಿಂದಾಗಿ ಲಕ್ಷಗಟ್ಟಲೆ ಜನ ಸಾವಿಗೀಡಾಗಿದ್ದಾರೆ. ಸರಿಯಾದ ಚಿಕಿತ್ಸೆ ಸಿಗದೆ ಅಥವಾ ಆಕ್ಸಿಜನ್ ಸಿಗದೆ ಹೆಚ್ಚಿನವರು ಸಾವಿಗೀಡಾಗಿದ್ದಾರೆ. ಅಲೋಪಥಿಯನ್ನು ಮೂರ್ಖ, ದೀವಾಳಿಯಾದ ವಿಜ್ಞಾನ ಎಂದು ಹೇಳಿರುವುದಾಗಿಯೂ ಯೋಗ ಗುರು ಮೇಲೆ ಆಪಾದನೆ ಇದೆ. ಕೊರೊನಾವೈರಸ್ ಲಸಿಕೆಯ ಎರಡು ಡೋಸ್ ಸ್ವೀಕರಿಸಿದ ಹಲವು ವೈದ್ಯರು ಕೂಡಾ ಸಾವಿಗೀಡಾಗಿದ್ದಾರೆ ಎಂದು ಬಾಬಾ ರಾಮದೇವ್ ಹೇಳಿದ್ದಾರೆ.

ಈ ಹಿಂದೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದ ಐಎಂಎ, ಕೇಂದ್ರ ಆರೋಗ್ಯ ಸಚಿವಾಲಯ ಕ್ರಮ ಕೈಗೊಳ್ಳಬೇಕು. ಸಾಂಕ್ರಾಮಿಕ ರೋಗಗಳ ಕಾಯಿದೆ ಅಡಿಯಲ್ಲಿ ರಾಮದೇವ್​​ನ್ನು ವಿಚಾರಣೆಗೊಳಪಡಿಸಬೇಕು. ತಪ್ಪಾದ ವಾದಗಳಿಂದ ಅವರು ಜನರ ಹಾದಿ ತಪ್ಪಿಸುತ್ತಿದ್ದು, ವೈಜ್ಞಾನಿಕ ಔಷಧಿಯನ್ನು ಅವಹೇಳನ ಮಾಡಿದ್ದಾರೆ ಎಂದಿತ್ತು.

ಸಾಂಕ್ರಾಮಿಕ ಸಮಯದಲ್ಲಿ ಜೀವಗಳನ್ನು ಉಳಿಸಲು ಶ್ರಮಿಸುತ್ತಿರುವಾಗ ರಾಮದೇವ್ ಅಲೋಪತಿ ಮತ್ತು ಆಧುನಿಕ ಔಷಧದ ಅಭ್ಯಾಸ ಮಾಡುವವರ ಖ್ಯಾತಿಯನ್ನು ಹಾಳುಮಾಡಿದ್ದಾರೆ ಎಂದು ಭಾರತೀಯ ವೈದ್ಯರ ಸಂಘ ಹೇಳಿದೆ. ಕಳೆದ ವಾರ, ದೆಹಲಿ ಹೈಕೋರ್ಟ್ ಬಾಬಾ ರಾಮ್‌ದೇವ್‌ಗೆ ಆಯುರ್ವೇದದ ಬಗ್ಗೆ ತಪ್ಪುದಾರಿಗೆಳೆಯುವ ಕಾಮೆಂಟ್‌ಗಳನ್ನು ಮಾಡದಂತೆ ಕೇಳಿಕೊಂಡಿತ್ತು.

ಕೋವಿಡ್ -19 ಗಾಗಿ ಪತಂಜಲಿಯ ಕರೋನಿಲ್ ಅನ್ನು ಬಳಸುವ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿದ ಆರೋಪದ ಮೇಲೆ ಬಾಬಾ ರಾಮ್‌ದೇವ್ ವಿರುದ್ಧ ವೈದ್ಯರ ವಿವಿಧ ಗುಂಪುಗಳು ಸಲ್ಲಿಸಿದ ಅರ್ಜಿಯನ್ನು ಪೀಠವು ವಿಚಾರಣೆ ನಡೆಸುತ್ತಿದೆ.

ಅಮೆರಿಕ ಅಧ್ಯಕ್ಷ ಜೋ ಬಿಡನ್‌ಗೆ ಲಸಿಕೆ ಹಾಕಿಸಿಕೊಂಡಿದ್ದರೂ ಕೋವಿಡ್‌ ಪಾಸಿಟಿವ್‌ ಎಂದು ಪರೀಕ್ಷೆಗೆ ಒಳಪಡಿಸಲಾಗಿದೆ ಎಂಬ ಯೋಗ ಗುರು ಹೇಳಿಕೆ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಯಿತು.

ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭನ್ ಅವರು ಅಂತಹ ಹೇಳಿಕೆಗಳಲ್ಲಿ “ಹೆಸರಿಸಲ್ಪಟ್ಟ ಜನರು” ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು . “ಇಂತಹ ಹೇಳಿಕೆಗಳು ಆಯುರ್ವೇದವನ್ನು ಕೆಟ್ಟ ಖ್ಯಾತಿಗೆ ತರುವುದರ ಜೊತೆಗೆ ಇತರ ರಾಷ್ಟ್ರಗಳೊಂದಿಗೆ ದೇಶದ ಸಂಬಂಧದ ಮೇಲೆ ಪರಿಣಾಮ ಬೀರಬಹುದು” ಎಂದು ಹೇಳಿದರು.

Published On - 3:09 pm, Tue, 23 August 22

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್