The Kerala Story: “ದಿ ಕೇರಳ ಸ್ಟೋರಿ” ನಿಮ್ಮ ರಾಜ್ಯದಲ್ಲಿ ಯಾಕೆ ನಿಷೇಧ? ಸುಪ್ರೀಂ ಪ್ರಶ್ನೆಗೆ ಉತ್ತರಿಸಿದ ತಮಿಳುನಾಡು ಸರ್ಕಾರ

ತಮಿಳುನಾಡು ಸರ್ಕಾರ, ದಿ ಕೇರಳ ಸ್ಟೋರಿ ಬಿಡುಗಡೆಗೊಂಡು 2 ದಿನವಾದರು ಸಿನಿಮಾ ನೋಡಲು ಯಾರು? ಬರುತ್ತಿಲ್ಲ ಎಂಬ ಕಾರಣಕ್ಕೆ ರಾಜ್ಯಾದ್ಯಂತ ಥಿಯೇಟರ್​​​ ಮಾಲೀಕರು ಈ ಕ್ರಮಕ್ಕೆ ಬಂದಿದ್ದಾರೆ ಎಂದು ಸುಪ್ರೀಂ ಕೋರ್ಟ್​​​ ನೋಟಿಸ್​​​ಗೆ ತಮಿಳುನಾಡು ಸರ್ಕಾರ ಉತ್ತರಿಸಿದೆ.

The Kerala Story: ದಿ ಕೇರಳ ಸ್ಟೋರಿ ನಿಮ್ಮ ರಾಜ್ಯದಲ್ಲಿ ಯಾಕೆ ನಿಷೇಧ? ಸುಪ್ರೀಂ ಪ್ರಶ್ನೆಗೆ ಉತ್ತರಿಸಿದ ತಮಿಳುನಾಡು ಸರ್ಕಾರ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:May 16, 2023 | 3:55 PM

ದೆಹಲಿ:ದಿ ಕೇರಳ ಸ್ಟೋರಿ(The Kerala Story) ಸಿನಿಮಾವನ್ನು ಯಾಕೆ ನಿಮ್ಮ ರಾಜ್ಯಗಳಲ್ಲಿ ನಿಷೇಧಿಸಲಾಗಿದೆ ಎಂದು ಮೇ 12ರಂದು ಸುಪ್ರೀಂ ಕೋರ್ಟ್​​ ಪ್ರಶ್ನೆ ಮಾಡಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ನೋಟಿಸ್​​ ನೀಡಲಾಗಿತ್ತು. ಇದೀಗ ಈ ನೋಟಿಸ್​​ಗೆ ಉತ್ತರಿಸಿದ ತಮಿಳುನಾಡು ಸರ್ಕಾರ, ದಿ ಕೇರಳ ಸ್ಟೋರಿ ಬಿಡುಗಡೆಗೊಂಡು 2 ದಿನವಾದರು ಸಿನಿಮಾ ನೋಡಲು ಯಾರು? ಬರುತ್ತಿಲ್ಲ ಎಂಬ ಕಾರಣಕ್ಕೆ ರಾಜ್ಯಾದ್ಯಂತ ಥಿಯೇಟರ್​​​ ಮಾಲೀಕರು ಈ ಕ್ರಮಕ್ಕೆ ಬಂದಿದ್ದಾರೆ ಎಂದು ಸುಪ್ರೀಂ ಕೋರ್ಟ್​​​ ನೋಟಿಸ್​​​ಗೆ ತಮಿಳುನಾಡು ಸರ್ಕಾರ ಉತ್ತರಿಸಿದೆ. ಮಲ್ಟಿಪ್ಲೆಕ್ಸ್​​​ ಮಾಲೀಕರು ಮೇ7 ರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇದಕ್ಕೆ ಕಾರಣ ಪ್ರಸಿದ್ಧ ನಟರ ಕೊರತೆ, ಕಳಪೆ ಪ್ರದರ್ಶನ ಮತ್ತು ಹೆಚ್ಚಾಗಿ ಈ ಚಿತ್ರವನ್ನು ನೋಡು ಜನರೇ ಇರಲಿಲ್ಲ ಎಂದು ತಮಿಳುನಾಡು ಸರ್ಕಾರ ಪತ್ರದಲ್ಲಿ ಉತ್ತರಿಸಿದೆ. ಜತೆಗೆ ಇದು ಹಿಂದಿ ಭಾಷೆಯಲ್ಲಿ ಮೇ 5ರಂದು 19 ಮಲ್ಟಿಪ್ಲೆಕ್ಸ್​​​ಗಳಲ್ಲಿ ​​ ಬಿಡುಗಡೆಯಾಗಿದೆ ಎಂದು ಹೇಳಿದೆ.

ಈ ಚಿತ್ರದಲ್ಲಿ ಯಾವುದೇ ಜನಪ್ರಿಯ ನಟರು ಇಲ್ಲ ಅದಕ್ಕಾಗಿ ಕಳಪೆ ಪ್ರದರ್ಶನಗೊಂಡು ಬಾಕ್ಸ್​​ ಆಫೀಸ್​​ಗೆ​​ ಭಾರೀ ತೊಂದರೆಯಾಗಿದೆ ಎಂದು ಹೇಳಿದೆ. ಇದರ ಜತೆಗೆ ಈ ಸಿನಿಮಾವನ್ನು ನೋಡಲು ಅಷ್ಟೊಂದು ಜನ ಬಂದಿಲ್ಲ ಎಂದು ಸ್ವತಃ ಚಲನಚಿತ್ರ ಪ್ರದರ್ಶಕರೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇನ್ನೂ ಈ ಸಿನಿಮಾ ನೋಡು ಜನ ಬರಬೇಕು ಎಂದು ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ:The Kerala Story: ದಿ ಕೇರಳ ಸ್ಟೋರಿ’ ಸಿನಿಮಾ ಯಾಕೆ ನಿಷೇಧಿಸಬೇಕು? ಪಶ್ಚಿಮ ಬಂಗಾಳ, ತಮಿಳುನಾಡು ಸರ್ಕಾರಕ್ಕೆ ನೋಟಿಸ್​​: ಸುಪ್ರೀಂ

ದಿ ಕೇರಳ ಸ್ಟೋರಿಯಲ್ಲಿ ಲವ್​​ ಜಿಹಾದ್​​ ಮತ್ತು ಅವರನ್ನು ಭಯೋತ್ಪಾದನೆ ಕೃತ್ಯಕ್ಕೆ ಬಳಸಲಾಗುತ್ತಿದೆ ಎಂದು ಇದರಲ್ಲಿ ಉದ್ದೇಶಿತ ಪೂರಕವಾಗಿ ತಿಳಿಸಲಾಗುತ್ತಿದೆ. ಇದು ದುರುದ್ದೇಶಪೂರಿತ ಪ್ರಚಾರವಾಗಿದೆ. ಮುಸ್ಲಿಂ ಸಮುದಾಯದ ಮೇಲೆ ಇದು ದೊಡ್ಡ ಪರಿಣಾಮವನ್ನು ಉಂಟು ಮಾಡುತ್ತಿದೆ. ಇದರಲ್ಲಿ ಮುಸ್ಲಿಂ ಯುವಕರನ್ನು ಟಾರ್ಗೆಟ್​​ ಮಾಡಲಾಗಿದೆ ಎಂದು ಅನೇಕರು ಸುಪ್ರೀಂಗೆ ಅರ್ಜಿ ಹಾಕಿದ್ದಾರೆ. ತಮಿಳುನಾಡು ಸರ್ಕಾರವು ಚಲನಚಿತ್ರವನ್ನು ನಿಷೇಧಿಸಿಲ್ಲ ಆದರೆ ಥಿಯೇಟರ್ ಮಾಲೀಕರು ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯಿಂದ ಅದನ್ನು ಪ್ರದರ್ಶಿಸದಿರಲು ನಿರ್ಧರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Tue, 16 May 23

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ