AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ 400ಕ್ಕೂ ಹೆಚ್ಚು ಸೀಟುಗಳಿಸಬೇಕು ಎಂದು ಹೇಳುತ್ತಿರುವುದಕ್ಕೆ ಕಾರಣ ತಿಳಿಸಿದ ಮೋದಿ

ಕಾಂಗ್ರೆಸ್ ದೇಶದ ಖಾಲಿ ಭೂಮಿ ಮತ್ತು ದ್ವೀಪಗಳನ್ನು ಬೇರೆ ದೇಶಗಳಿಗೆ ಹಸ್ತಾಂತರಿಸದಿರಲು ಮೋದಿ 400 ಸ್ಥಾನಗಳನ್ನು ಕೇಳುತ್ತಿದ್ದಾರೆ. ಎಸ್‌ಸಿ / ಎಸ್‌ಟಿ / ಒಬಿಸಿಗಳಿಗೆ ನೀಡಲಾದ ಮೀಸಲಾತಿಯನ್ನು ಕಸಿದುಕೊಳ್ಳದೇ ಇರಲು ಅದನ್ನು ತನ್ನ ಮತ ಬ್ಯಾಂಕ್‌ಗೆ ನೀಡದೇ ಇರಲು ನಾವು 400 ಪ್ಲಸ್ ಸೀಟು ಕೇಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ 400ಕ್ಕೂ ಹೆಚ್ಚು ಸೀಟುಗಳಿಸಬೇಕು ಎಂದು ಹೇಳುತ್ತಿರುವುದಕ್ಕೆ ಕಾರಣ ತಿಳಿಸಿದ ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: May 07, 2024 | 6:55 PM

ಧಾರ್‌ ಮೇ 07:  2024 ರ ಲೋಕಸಭಾ ಚುನಾವಣೆಯಲ್ಲಿ (Lok sabha Election) ಬಿಜೆಪಿ ನೇತೃತ್ವದ ಎನ್‌ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಬಯಸುತ್ತಿದೆ. ಹೀಗೆ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್ ಪಕ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ  370 ನೇ ವಿಧಿಯನ್ನು ಮರಳಿತರುವುದನ್ನು ತಡೆಯಬಹುದು. ಅಯೋಧ್ಯೆಯ ರಾಮ ಮಂದಿರಕ್ಕೆ (Ram Mandir) “ಬಾಬರಿ ಬೇಗ ” ಹಾಕುವುದನ್ನು ತಡೆಯಬಹುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಮಂಗಳವಾರ ಮಧ್ಯಪ್ರದೇಶದ ಧಾರ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಗಳನ್ನು ಕಡೆಗಣಿಸುತ್ತಿದೆ ಎಂದು ಟೀಕಿಸಿದ್ದು, ವಿರೋಧ ಪಕ್ಷವು ಸಂವಿಧಾನವನ್ನು ರಚಿಸುವಲ್ಲಿ ಅವರ ಕನಿಷ್ಠ ಪಾಲ್ಗೊಳ್ಳುವಿಕೆಯನ್ನು ಪ್ರತಿಪಾದಿಸಲು ಪ್ರಾರಂಭಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಪರಿವಾರವು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ತೀವ್ರವಾಗಿ ದ್ವೇಷಿಸುತ್ತದೆ. ಎನ್ ಡಿಎ 400 ಲೋಕಸಭಾ ಸ್ಥಾನಗಳನ್ನು ಪಡೆದರೆ ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಕಾಂಗ್ರೆಸ್ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ.

“ಬಿಜೆಪಿ ನೇತೃತ್ವದ ಎನ್‌ಡಿಎ ಈಗಾಗಲೇ ಸಂಸತ್ತಿನಲ್ಲಿ 400 ಪ್ಲಸ್ ಸ್ಥಾನಗಳನ್ನು ಹೊಂದಿದೆ ಎಂಬುದನ್ನು ದೇಶದ ಜನರು ತಿಳಿದುಕೊಳ್ಳುವುದು ಬಹಳ ಮುಖ್ಯ. ನಾವು ಈ ಸಂಖ್ಯೆಯನ್ನು 370 ನೇ ವಿಧಿಯನ್ನು (ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ) ರದ್ದುಗೊಳಿಸಲು ಬಳಸಿದ್ದೇವೆ” ಎಂದು ಮೋದಿ ಹೇಳಿದರು.

ಮೋದಿ ಭಾಷಣ

ಮೋದಿಯವರು 400 ಸೀಟುಗಳನ್ನು ಬಯಸುತ್ತಾರೆ. ಯಾಕೆಂದರೆ ಅವರು(ಕಾಂಗ್ರೆಸ್) 370 ನೇ ವಿಧಿಯನ್ನು ಮತ್ತೆ ತರಬಾರದು. ಮೋದಿಯವರು 400 ಸ್ಥಾನಗಳನ್ನು ಬಯಸುತ್ತಾರೆ ಯಾಕೆಂದರೆ ಕಾಂಗ್ರೆಸ್ ಅಯೋಧ್ಯೆಯ ರಾಮಮಂದಿರಕ್ಕೆ ಬಾಬರಿ ಬೀಗ ಹಾಕುವುದನ್ನು ತಡೆಯಬಹುದು ಎಂದು ಅವರು ಹೇಳಿದರು.

“ಎರಡನೆಯದಾಗಿ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ನೀಡುತ್ತಿರುವ ಮೀಸಲಾತಿಯನ್ನು ಎಂದಿಗೂ ಕಸಿದುಕೊಳ್ಳುವುದಿಲ್ಲ ಎಂದು ಲಿಖಿತವಾಗಿ ನೀಡುವಂತೆ ಮತ್ತು ಮೂರನೆಯದಾಗಿ, ಈಗಿರುವ ಒಬಿಸಿ ಕೋಟಾದಿಂದ ದರೋಡೆ ಮಾಡುವ ಮೂಲಕ ಮುಸ್ಲಿಮರಿಗೆ ಎಂದಿಗೂ ಮೀಸಲಾತಿ ನೀಡುವುದಿಲ್ಲ ಎಂದು ಲಿಖಿತವಾಗಿ ನೀಡುವಂತೆ ನಾನು ಕಾಂಗ್ರೆಸ್ ನವರಲ್ಲಿ ಕೇಳಿದೆ. ಅವರು ಇದಕ್ಕೆ ಪ್ರತಿಕ್ರಿಯಿಸುತ್ತಿಲ್ಲ ಮತ್ತು ಬಾಯಿಗೆ ಬೀಗ ಹಾಕಿಕೊಂಡು ಮೌನವಾಗಿ ಕುಳಿತಿದ್ದಾರೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಲಾಭಕ್ಕಾಗಿ ಒಬಿಸಿ ಕೋಟಾದ “ದರೋಡೆ” ಯನ್ನು ತಡೆಯಲು ಲೋಕಸಭೆಯಲ್ಲಿ 400 ಸ್ಥಾನಗಳನ್ನು ಬಯಸುವುದಾಗಿ ಮೋದಿ ಹೇಳಿದರು.

“ನಾವು ಈ 400-ಪ್ಲಸ್ ಸೀಟುಗಳನ್ನು 10 ವರ್ಷಗಳ ಕಾಲ SC / ST ಕೋಟಾವನ್ನು ವಿಸ್ತರಿಸಲು, ಮೊದಲ ಬಾರಿಗೆ ದೇಶದ ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆಯನ್ನು ನೇಮಿಸಲು ಮತ್ತು ಮಹಿಳೆಯರಿಗೆ ಮೀಸಲಾತಿ ಒದಗಿಸಲು ಬಳಸಿದ್ದೇವೆ” ಎಂದು ಮೋದಿ ಹೇಳಿದರು. ಕಾಂಗ್ರೆಸ್ ಮತ್ತು ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟದ ಪ್ರತಿಯೊಂದು ಪಿತೂರಿಯನ್ನು ತಡೆಯಲು ತಾನು 400 ಸ್ಥಾನಗಳನ್ನು ಕೇಳುತ್ತಿದ್ದೇನೆ ಎಂದು ಪ್ರಧಾನಿ ಹೇಳಿದರು.

“ಕಾಂಗ್ರೆಸ್ ದೇಶದ ಖಾಲಿ ಭೂಮಿ ಮತ್ತು ದ್ವೀಪಗಳನ್ನು ಬೇರೆ ದೇಶಗಳಿಗೆ ಹಸ್ತಾಂತರಿಸದಿರಲು ಮೋದಿ 400 ಸ್ಥಾನಗಳನ್ನು ಕೇಳುತ್ತಿದ್ದಾರೆ. ಎಸ್‌ಸಿ / ಎಸ್‌ಟಿ / ಒಬಿಸಿಗಳಿಗೆ ನೀಡಲಾದ ಮೀಸಲಾತಿಯನ್ನು ಕಸಿದುಕೊಳ್ಳದೇ ಇರಲು ಅದನ್ನು ತನ್ನ ಮತ ಬ್ಯಾಂಕ್‌ಗೆ ನೀಡದೇ ಇರಲು 400 ಪ್ಲಸ್ ಸೀಟು ಕೇಳುತ್ತಿದ್ದಾರೆ. ರಾತ್ರೋರಾತ್ರಿ ತನ್ನ ಮತಬ್ಯಾಂಕ್‌ನ ಎಲ್ಲಾ ಜಾತಿಗಳನ್ನು ಒಬಿಸಿ ಎಂದು ಘೋಷಿಸಿದೇ ಇರಲು ಮೋದಿ 400ಕ್ಕಿಂತ ಹೆಚ್ಚು ಸೀಟುಗಳನ್ನು ಕೇಳುತ್ತಿದ್ದಾರೆ.

ಇದನ್ನೂ ಓದಿ: ಜನರು ನಂಬಿಕೆ ಕಳೆದುಕೊಳ್ಳುತ್ತಾರೆ: ಬಂಗಾಳದ ಉದ್ಯೋಗ ಪ್ರಕರಣದ ಬಗ್ಗೆ ಸಿಜೆಐ

ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಪ್ರತಿಪಕ್ಷಗಳನ್ನು ಸೋಲಿಸಲಾಯಿತು, ಎರಡನೇ ಹಂತದಲ್ಲಿ ಅದು ನಾಶವಾಯಿತು ಮತ್ತು ಇಂದು ಮೂರನೇ ಹಂತದಲ್ಲಿ ಪ್ರತಿಪಕ್ಷಗಳು ಉಳಿದಿವೆಯೋ ಅದು ಕೂಡ ಕುಸಿಯುತ್ತದೆ ಎಂದು ಮೋದಿ ಹೇಳಿದರು. ಮೇ 13 ರಂದು ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿರುವ ಧಾರ್‌ನಿಂದ ಸಾವಿತ್ರಿ ಠಾಕೂರ್ ಮತ್ತು ನೆರೆಯ ರತ್ಲಾಮ್-ಜಬುವಾ (ಎಸ್‌ಟಿ) ಕ್ಷೇತ್ರದಿಂದ ಅನಿತಾ ನಗರ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್