AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ರಾಮನ ಭಕ್ತರಿಗೆ ಬೆಲೆಯಿಲ್ಲವೇ?; ಹಿಂದೂಗಳ ಭಾವನೆಗೆ ಧಕ್ಕೆ ತಂದರೆ ಶಿಕ್ಷೆಯಿಲ್ಲವೇ?; ಬಿಜೆಪಿ ಶಾಸಕ ರಾಜಾ ಸಿಂಗ್ ಆಕ್ರೋಶ

ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದವರಿಗೆ ಪ್ರಧಾನಿಗೂ ಸಿಗದಂತಹ ರಕ್ಷಣೆ ನೀಡಲಾಗುತ್ತಿದೆ. ಈ ಮೂಲಕ ನೀವು ಸಾರ್ವಜನಿಕರಿಗೆ ಯಾವ ರೀತಿಯ ಸಂದೇಶವನ್ನು ಕಳುಹಿಸಲು ಬಯಸುತ್ತಿದ್ದೀರಿ? ಎಂದು ರಾಜಾ ಸಿಂಗ್ ಪ್ರಶ್ನಿಸಿದ್ದಾರೆ.

Big News: ರಾಮನ ಭಕ್ತರಿಗೆ ಬೆಲೆಯಿಲ್ಲವೇ?; ಹಿಂದೂಗಳ ಭಾವನೆಗೆ ಧಕ್ಕೆ ತಂದರೆ ಶಿಕ್ಷೆಯಿಲ್ಲವೇ?; ಬಿಜೆಪಿ ಶಾಸಕ ರಾಜಾ ಸಿಂಗ್ ಆಕ್ರೋಶ
ಶಾಸಕ ಟಿ. ರಾಜಾ ಸಿಂಗ್
TV9 Web
| Updated By: ಸುಷ್ಮಾ ಚಕ್ರೆ|

Updated on: Aug 23, 2022 | 12:17 PM

Share

ಹೈದರಾಬಾದ್: ತೆಲಂಗಾಣದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾದ ಪ್ರವಾದಿ ಮೊಹಮ್ಮದ್ (prophet muhammad) ಕುರಿತಾದ ಹೇಳಿಕೆಯ ಕಾರಣಕ್ಕೆ ತೆಲಂಗಾಣ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ (T Raja Singh) ಅವರನ್ನು ಬಂಧಿಸಲಾಗಿದೆ. ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್, ನನ್ನನ್ನು ಬಂಧಿಸಿದ ಹಾಗೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದವರ, ಹಿಂದೂ ಧರ್ಮದ ಬಗ್ಗೆ ಹಾಸ್ಯ ಮಾಡಿದವರ ವಿರುದ್ಧ ಕೂಡ ಏಕೆ ಕೇಸ್ ದಾಖಲಿಸುವುದಿಲ್ಲ? ಎಂದು ಕೇಳಿದ್ದಾರೆ.

ಇಂದು ಹೈದರಾಬಾದ್​​ನಾದ್ಯಂತ ನನ್ನ ವಿರುದ್ಧ ದೂರುಗಳು ದಾಖಲಾಗಿವೆ. ನನ್ನ ವಿರುದ್ಧ ಕೇಸ್ ಕೂಡ ದಾಖಲಾಗಿದೆ. ಆದರೆ, ಅದು ಯಾವ ಕಾರಣಕ್ಕಾಗಿ? ನಮ್ಮ ದೇವರಾದ ರಾಮ ರಾಮನಲ್ಲವೇ? ನಮ್ಮ ಸೀತೆ ಸೀತಾ ಮಾತೆಯಲ್ಲವೇ? ಇಂದು ತೆಲಂಗಾಣದ ಶ್ರೀರಾಮ ಮತ್ತು ಸೀತೆಯ ಅನುಯಾಯಿಗಳು ನಮ್ಮ ರಾಮನ ವಿರುದ್ಧ ಕೆಟ್ಟದಾಗಿ ಮಾತನಾಡುವವರಿಗೆ ಯಾಕೆ ಶಿಕ್ಷೆ ನೀಡುತ್ತಿಲ್ಲ? ಎಂದು ಕೇಳುತ್ತಿದ್ದಾರೆ. ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದವರಿಗೆ ಪ್ರಧಾನಿಗೂ ಸಿಗದಂತಹ ರಕ್ಷಣೆ ನೀಡಲಾಗುತ್ತಿದೆ. ಈ ಮೂಲಕ ನೀವು ಸಾರ್ವಜನಿಕರಿಗೆ ಯಾವ ರೀತಿಯ ಸಂದೇಶವನ್ನು ಕಳುಹಿಸಲು ಬಯಸುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Big News: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ

ತೆಲಂಗಾಣ ರಾಜ್ಯದಲ್ಲಿ ಬಿಗಿ ಭದ್ರತೆಯ ನಡುವೆ ಪ್ರದರ್ಶನ ನೀಡಿದ ಹಾಸ್ಯನಟ ಮುನಾವರ್ ಫಾರೂಕಿ ಅವರನ್ನು ಉಲ್ಲೇಖಿಸಿ ರಾಜಾ ಸಿಂಗ್ ಟೀಕಾಪ್ರಹಾರ ನಡೆಸಿದ್ದಾರೆ. ತೆಲಂಗಾಣದಲ್ಲಿ ರಾಮನನ್ನು ಪೂಜಿಸುವವರಿಗೆ ಬೆಲೆ ಇಲ್ಲ, ರಾಮನ ವಿರುದ್ಧ ಕೆಟ್ಟ ಮಾತುಗಳನ್ನು ಆಡುವವರಿಗೆ ಮಾತ್ರ ಬೆಲೆ ಇದೆ ಎಂದು ಟೀಕಿಸಿದ್ದಾರೆ.

ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ವಿರುದ್ಧ ಪೊಲೀಸರು ಇಂದು ಕೇಸ್ ದಾಖಲಿಸಿ, ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಬಿಜೆಪಿ ಶಾಸಕ ರಾಜಾ ಸಿಂಗ್ ಪ್ರವಾದಿ ಮೊಹಮ್ಮದ್ ಕುರಿತು ಮಾತನಾಡುವ ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ಅದಾದ ನಂತರ ಪ್ರತಿಭಟನೆ ನಡೆದು, ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್