AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೋದಿ, ಟ್ರಂಪ್ ಹೆಸರನ್ನೂ ಸೇರಿಸಿಬಿಡಿ’; ದಿಶಾ ಸಾಲಿಯಾನ್ ಸಾವು ಪ್ರಕರಣದ ತನಿಖೆಗೆ ಉದ್ಧವ್ ಠಾಕ್ರೆ ವ್ಯಂಗ್ಯ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎಫ್​ಐಆರ್​​ನಲ್ಲಿ ತಮ್ಮ ಪುತ್ರ ಆದಿತ್ಯ ಠಾಕ್ರೆ ಅವರ ಹೆಸರು ಸೇರ್ಪಡೆಯಾಗಿರುವ ಬಗ್ಗೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮೌನ ಮುರಿದಿದ್ದಾರೆ. ಈ ತನಿಖೆಯು ಕೇವಲ ರಾಜಕೀಯ ಪ್ರೇರಿತವಾಗಿದ್ದು, ತಮಗೂ ಅಥವಾ ತಮ್ಮ ಮಗನಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಮೋದಿ, ಟ್ರಂಪ್ ಹೆಸರನ್ನೂ ಸೇರಿಸಿಬಿಡಿ’; ದಿಶಾ ಸಾಲಿಯಾನ್ ಸಾವು ಪ್ರಕರಣದ ತನಿಖೆಗೆ ಉದ್ಧವ್ ಠಾಕ್ರೆ ವ್ಯಂಗ್ಯ
ಆದಿತ್ಯ ಠಾಕ್ರೆ - ಉದ್ಧವ್ ಠಾಕ್ರೆImage Credit source: PTI
ಸುಷ್ಮಾ ಚಕ್ರೆ
|

Updated on: Sep 17, 2026 | 7:41 PM

Share

ಮುಂಬೈ, ಸೆಪ್ಟೆಂಬರ್ 17: ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿನ ಪ್ರಕರಣದ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ಕಂಡುಬಂದ ಬೆನ್ನಲ್ಲೇ, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಸಿಬಿಐ ವಿರುದ್ಧ ವ್ಯಂಗ್ಯವಾಡಿದ್ದಾರೆ. ಈ ಪ್ರಕರಣದಲ್ಲಿ ಉದ್ಧವ್ ಠಾಕ್ರೆಯ ಮಗ ಆದಿತ್ಯ ಠಾಕ್ರೆ ಹೆಸರೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ವಿರುದ್ಧ ನಡೆಯುತ್ತಿರುವ ರಾಜಕೀಯ ಕೆಸರೆರಚಾಟಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಈ ಪ್ರಕರಣದಲ್ಲಿ ಡೊನಾಲ್ಡ್ ಟ್ರಂಪ್, ಪ್ರಧಾನಿ ಮೋದಿಯ ಹೆಸರುಗಳನ್ನು ಏಕೆ ಎಳೆದು ತಂದಿಲ್ಲ? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಮುಂಬೈನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ತಮ್ಮ ಪುತ್ರ ಹಾಗೂ ಶಾಸಕ ಆದಿತ್ಯ ಠಾಕ್ರೆ ಅವರಿಗೆ ಈ ದುರಂತದೊಂದಿಗೆ ನಂಟು ಕಲ್ಪಿಸುವ ಯತ್ನಗಳನ್ನು ಸಂಪೂರ್ಣವಾಗಿ ನಿರಾಕರಿಸಿದರು. “ಇಂತಹ ಆಧಾರರಹಿತ ಆರೋಪಗಳು ಮುಂದುವರಿದರೆ ಎಷ್ಟು ಕಾಲ ಸಹಿಸಿಕೊಳ್ಳಬೇಕು? ಈ ಪ್ರಕರಣದಲ್ಲಿ ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಅವರ ಹೆಸರುಗಳು ಏಕೆ ಬಿಟ್ಟುಹೋಗಿವೆ ಎಂದು ನನಗೆ ಆಶ್ಚರ್ಯವಾಗುತ್ತಿದೆ” ಎಂದು ವ್ಯಂಗ್ಯವಾಗಿ ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವು ಪ್ರಕರಣ: ಸಿಬಿಐ ಎಫ್​ಐಆರ್​ನಲ್ಲಿ ಆದಿತ್ಯ ಠಾಕ್ರೆ, ದಿನೋ ಮೊರಿಯಾ ಹೆಸರು

ಪ್ರಸಿದ್ಧ ಸೆಲೆಬ್ರಿಟಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಜೂನ್ 2020ರ ಸಾವಿನ ಕುರಿತು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶಿಸಿದ ನಂತರ ಈ ವಿವಾದ ಮತ್ತೆ ಕಾವು ಪಡೆದುಕೊಂಡಿದೆ. ತಮಗೂ ದಿಶಾ ಸಾಲಿಯಾನ್‌ಗೂ ಯಾವುದೇ ಸಂಬಂಧವಿಲ್ಲ ಹಾಗೂ ಅವರನ್ನು ಎಂದಿಗೂ ಭೇಟಿಯಾಗಿಲ್ಲ ಎಂದು ಆದಿತ್ಯ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

ತಮ್ಮ ಕುಟುಂಬದ ವಿರುದ್ಧ ಚಾರಿತ್ರ್ಯ ಹರಣ ಮಾಡುವ ಕೆಲಸ ನಿಲ್ಲದಿದ್ದರೆ, ಸುಳ್ಳು ಆರೋಪಗಳನ್ನು ಹರಡುವವರ ವಿರುದ್ಧ ಶೀಘ್ರದಲ್ಲೇ ಕಾನೂನು ಸಮರ ಆರಂಭಿಸುವುದಾಗಿ ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ‘ಚಾರಿತ್ರ್ಯವಧೆ ಮಾಡುವ ಷಡ್ಯಂತ್ರ’; ದಿಶಾ ಸಾಲಿಯಾನ್ ಸಾವಿನ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಆದಿತ್ಯ ಠಾಕ್ರೆ

2020ರ ಜೂನ್ 8ರಂದು ಮುಂಬೈನ ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯಾನ್ ಮೃತಪಟ್ಟಿದ್ದರು. ಈ ಘಟನೆ ನಡೆದ 6 ದಿನಗಳ ನಂತರ ನಟ ಸುಶಾಂತ್ ಸಿಂಗ್ ರಜಪೂತ್ ತಮ್ಮ ಫ್ಲ್ಯಾಟ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ ಮುಂಬೈ ಪೊಲೀಸರು ದಿಶಾ ಸಾಲಿಯಾನ್ ಪ್ರಕರಣವನ್ನು ಆಕಸ್ಮಿಕ ಸಾವು ಎಂದು ದಾಖಲಿಸಿಕೊಂಡಿದ್ದರು. ಉಚ್ಚ ನ್ಯಾಯಾಲಯದ ನಿರ್ದೇಶನದ ನಂತರ ಇತ್ತೀಚೆಗೆ ಈ ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಸಿಬಿಐ, ಸತೀಶ್ ಸಾಲಿಯಾನ್ ನೀಡಿರುವ ಹೇಳಿಕೆಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿದೆ. ತನಿಖಾ ಸಂಸ್ಥೆಯು ಕೊಲೆ, ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಸಂಚು, ಸಾಕ್ಷ್ಯ ನಾಶ ಮತ್ತು ಸುಳ್ಳು ಮಾಹಿತಿ ನೀಡಿದ ಆರೋಪಗಳ ಅಡಿಯಲ್ಲಿ ಎಫ್‌ಐಆರ್ ಹೂಡಿದೆ.

ಈ ಎಫ್‌ಐಆರ್‌ನಲ್ಲಿ ಆದಿತ್ಯ ಠಾಕ್ರೆ, ನಟ ದಿನೋ ಮೋರಿಯಾ ಮತ್ತು ನಟಿ ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಅಲ್ಲದೆ, ಅಪರಾಧಿಗಳನ್ನು ರಕ್ಷಿಸಲು ಸಾರ್ವಜನಿಕ ಹಣ, ಅಧಿಕಾರ ಮತ್ತು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಪ್ರಕರಣವನ್ನು ಮುಚ್ಚಿಹಾಕಲು ಉದ್ಧವ್ ಠಾಕ್ರೆ ಮತ್ತು ಇತರರು ನೆರವಾಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ