ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಯಾಕೆ ಕಾಂಗ್ರೆಸ್ ಸೇರ್ಪಡೆಯಾಗಲಿಲ್ಲ?- ಕೊನೆಗೂ ಈ ಪ್ರಶ್ನೆಗೆ ಉತ್ತರ ಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ

Prashant Kishor: ಕಳೆದಬಾರಿ ಪ್ರಶಾಂತ್ ಕಿಶೋರ್​, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಹಲವು ಸುತ್ತುಗಳ ಮಾತುಕತೆಯ ಬಳಿಕವೂ ಪ್ರಶಾಂತ್ ಕಿಶೋರ್​ಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಲು ಸಾಧ್ಯವಾಗಲಿಲ್ಲ. ನಂತರ ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಯಾಕೆ ಕಾಂಗ್ರೆಸ್ ಸೇರ್ಪಡೆಯಾಗಲಿಲ್ಲ?- ಕೊನೆಗೂ ಈ ಪ್ರಶ್ನೆಗೆ ಉತ್ತರ ಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಶಾಂತ್ ಕಿಶೋರ್​ ಮತ್ತು ಪ್ರಿಯಾಂಕಾ ಗಾಂಧಿ
Follow us
TV9 Web
| Updated By: Lakshmi Hegde

Updated on:Jan 22, 2022 | 12:27 PM

ದೆಹಲಿ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor )ಕಾಂಗ್ರೆಸ್ (Congress Party) ಸೇರುತ್ತಾರೆ ಎಂಬುದೊಂದು ಚರ್ಚೆ 2021ರ ಜುಲೈ-ಆಗಸ್ಟ್​ ತಿಂಗಳಲ್ಲಿ ಜೋರಾಗಿತ್ತು. ಅವರು ದೆಹಲಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮತ್ತು ರಾಹುಲ್​ ಗಾಂಧಿಯವರೊಟ್ಟಿಗೆ ಮಾತುಕತೆ ನಡೆಸಿದ್ದಾರೆ, ಕೆಲವೇ ದಿನಗಳಲ್ಲಿ ಪ್ರಶಾಂತ್​ ಕಿಶೋರ್​ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದೇ ಹೇಳಲಾಗಿತ್ತು. ಆದರೆ ನಂತರ ಅದು ಅಲ್ಲಿಗೇ ನಿಂತುಹೋಯಿತು. ಅವರು ಕಾಂಗ್ರೆಸ್ ಪಕ್ಷ ಸೇರಿಯೇ ಇಲ್ಲ. ಇನ್ನು ಪ್ರಶಾಂತ್ ಕಿಶೋರ್ ಯಾಕೆ ಕಾಂಗ್ರೆಸ್ ಸೇರ್ಪಡೆಯಾಗಲಿಲ್ಲ ಎಂಬ ಪ್ರಶ್ನೆಗ ಇದೀಗ ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಉತ್ತರ ಕೊಟ್ಟಿದ್ದಾರೆ. ಕಳೆದ ವರ್ಷ ಪ್ರಶಾಂತ್ ಕಿಶೋರ್​ ಕಾಂಗ್ರೆಸ್ ಸೇರಬೇಕು ಎಂದುಕೊಂಡಿದ್ದು, ಅದಕ್ಕಾಗಿ ಪ್ರಯತ್ನ ಪಟ್ಟಿದ್ದೂ ಹೌದು. ಆದರೆ ನಂತರ ಹಲವು ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. 

ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ಗೆ ಸೇರದೆ ಇರಲು ಒಂದಷ್ಟು ಅವರದ್ದೇ ಆದ ಕಾರಣಗಳಿವೆ..ಇನ್ನೊಂದಿಷ್ಟು ನಮ್ಮ ಕಾರಣಗಳಿವೆ. ನಾನು ಅದನ್ನೆಲ್ಲ ಸಂಪೂರ್ಣವಾಗಿ ವಿವರಿಸಿ ಹೇಳಲು ಸಾಧ್ಯವಾಗುವುದಿಲ್ಲ. ಸ್ಥೂಲವಾಗಿ ಅನೇಕ ವಿಚಾರಗಳನ್ನು ಒಪ್ಪಿಕೊಳ್ಳಲು ಕಷ್ಟವಾಯಿತು. ಕೆಲವು ಅಸಮರ್ಥತೆಗಳು ಚರ್ಚೆಯನ್ನು ಮುಂದುವರಿಸಲೇ ಅಡ್ಡಿಪಡಿಸಿದವು. ಈ ಎಲ್ಲ ಕಾರಣಗಳಿಂದಾಗಿ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯಾಗಲಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.  ಕಾಂಗ್ರೆಸ್​ಗೆ ಹೊರಗಿನವರನ್ನು ತರಲು ಯಾವುದೇ ಹಿಂಜರಿಕೆ ಇಲ್ಲ. ಹಾಗೊಮ್ಮೆ ನಮಗೆ ಹಿಂಜರಿಕೆ ಇದ್ದಿದ್ದರೆ, ಅಷ್ಟೊಂದು ಚರ್ಚೆ, ಮಾತುಕತೆಗಳನ್ನು ನಡೆಸುತ್ತಲೇ ಇರಲಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಕಳೆದಬಾರಿ ಪ್ರಶಾಂತ್ ಕಿಶೋರ್​, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಹಲವು ಸುತ್ತುಗಳ ಮಾತುಕತೆಯ ಬಳಿಕವೂ ಪ್ರಶಾಂತ್ ಕಿಶೋರ್​ಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಲು ಸಾಧ್ಯವಾಗಲಿಲ್ಲ. ನಂತರ ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್​ನ್ನು ಮುನ್ನಡೆಸುವುದು ಯಾರೊಬ್ಬರ ದೈವಿಕ ಹಕ್ಕು ಅಲ್ಲ. ಹಾಗೆಂದು ಯಾರೂ ಭಾವಿಸಲೂ ಬಾರದು. ಅದರಲ್ಲೂ ಕಾಂಗ್ರೆಸ್ ಕಳೆದ 10 ವರ್ಷಗಳಲ್ಲಿ ಬಹುತೇಕ ಶೇ.90ರಷ್ಟು ಅಸ್ವಿತ್ವವನ್ನೇ ಕಳದುಕೊಂಡಿದೆ ಎಂದು ಹೇಳಿದ್ದರು. 2024ರ ಲೋಕಸಭೆ ಚುನಾವಣೆಯೊಳಗಾದರೂ ಕಾಂಗ್ರೆಸ್​ ತನ್ನ ವಿರೋಧ ಪಕ್ಷದ ಅಸ್ವಿತ್ವ ಉಳಿಸಿಕೊಳ್ಳಬೇಕು. ಆದರೆ ಈಗಿರುವ ನಾಯಕತ್ವದಡಿ ಅದು ಸಾಧ್ಯವಿಲ್ಲ ಎಂದೂ ಹೇಳಿದ್ದರು.

ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರಿಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Published On - 10:43 am, Sat, 22 January 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ