ರಾಹುಲ್ ಗಾಂಧಿ ಸಾಮಾನ್ಯ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇಕೆ? ಡಿಪ್ಲೊಮಾಟಿಕ್ ಪಾಸ್​​ಪೋರ್ಟ್ ಏನಾಯ್ತು?

ರಾಜತಾಂತ್ರಿಕ ಪಾಸ್‌ಪೋರ್ಟ್‌ ಅಥವಾ ಡಿಪ್ಲೊಮಾಟಿಕ್ ಪಾಸ್​​ಪೋರ್ಟ್ ಅಧಿಕೃತ ಸರ್ಕಾರಿ ವ್ಯವಹಾರದ ಮೇಲೆ ವಿದೇಶಕ್ಕೆ ಪ್ರಯಾಣಿಸಲು ಬಯಸುವ ನಿರ್ದಿಷ್ಟ ವ್ಯಕ್ತಿಗಳಿಗೆ ಮಾತ್ರ ನೀಡಲಾಗುತ್ತದೆ.ರಾಜತಾಂತ್ರಿಕ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಭಾವಿಸುವ ವ್ಯಕ್ತಿಗಳು ಅದಕ್ಕೆ ಅರ್ಜಿ ಸಲ್ಲಿಸಬಹುದು.

ರಾಹುಲ್ ಗಾಂಧಿ ಸಾಮಾನ್ಯ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇಕೆ? ಡಿಪ್ಲೊಮಾಟಿಕ್ ಪಾಸ್​​ಪೋರ್ಟ್ ಏನಾಯ್ತು?
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: May 24, 2023 | 8:25 PM

ಹೊಸ ಪಾಸ್‌ಪೋರ್ಟ್‌ಗಾಗಿ (Passport) ಮಾಡಿದ ಮನವಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡುವಂತೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ದೆಹಲಿ ನ್ಯಾಯಾಲಯದ ಮುಂದೆ ಸಲ್ಲಿಸಿದ ಮನವಿಗೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ (Subramanian Swamy) ವಿರೋಧ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿಗೆ ವಿದೇಶ ಪ್ರವಾಸಕ್ಕೆ ಅವಕಾಶ ನೀಡಿದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಅಡ್ಡಿಯಾಗಬಹುದು ಎಂಬುದು ಸುಬ್ರಮಣಿಯನ್ ಸ್ವಾಮಿ ವಾದ. ಅಂದ ಹಾಗೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ವೈಭವ್ ಮೆಹ್ತಾ ಅವರು ಮೇ 26 ರಂದು ವಿಚಾರಣೆ ನಡೆಸುವುದಾಗಿ ಹೇಳಿದ್ದು, ಪಾಸ್‌ಪೋರ್ಟ್ ಮಂಜೂರು ಮಾಡುವಂತೆ ರಾಹುಲ್ ಮಾಡಿದ ಮನವಿಗೆ ಪ್ರತಿಕ್ರಿಯೆಯನ್ನು ಸಲ್ಲಿಸಲು ಸ್ವಾಮಿಗೆ ಅವಕಾಶ ನೀಡಿದ್ದಾರೆ.

ರಾಹುಲ್ ಅವರ ಮನವಿಗೆ ಉತ್ತರ ನೀಡಲು ಸ್ವಾಮಿ ಅವರಿಗೆ ಹಕ್ಕಿದೆ. ಅದಕ್ಕಾಗಿ ಅವರಿಗೆ ಕಾಲಾವಕಾಶ ನೀಡಲಾಗಿದೆ ಎಂದ ಕೋರ್ಟ್ ಹೇಳಿದೆ. ಹೊಸ ಪಾಸ್‌ಪೋರ್ಟ್ ನೀಡುವಂತೆ ರಾಹುಲ್ ಮಂಗಳವಾರ ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹೊಸ ಪಾಸ್‌ಪೋರ್ಟ್‌ಗೆ ರಾಹುಲ್ ಅರ್ಜಿ ಸಲ್ಲಿಸಿದ್ದೇಕೆ?

ಗುಜರಾತ್ ನ್ಯಾಯಾಲಯದಿಂದ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ತಪ್ಪಿತಸ್ಥ ಎಂದು ಅವರಿಗೆ ಶಿಕ್ಷೆ ಘೋಷಣೆ ಆದ ನಂತರ ಅವರು ಸಂಸದ ಸ್ಥಾನವನ್ನು ಕಳೆದುಕೊಂಡಿದ್ದರು. ಮಾರ್ಚ್ ತಿಂಗಳಲ್ಲಿ ಅವರ ಸಂಸತ್ ಸದಸ್ಯತ್ವವು ಅಂತ್ಯಗೊಂಡಿದ್ದು, ಅದರಂತೆ ಅವರು ರಾಜತಾಂತ್ರಿಕ ಪ್ರಯಾಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು , ಪಾಸ್​​ಪೋರ್ಟ್​​ನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಇದೀಗ ಹೊಸದಾಗಿ ಸಾಮಾನ್ಯ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅದಕ್ಕಾಗಿ ನ್ಯಾಯಾಲಯ ಅನುಮತಿ ಮತ್ತು ನಿರಾಕ್ಷೇಪಣಾ ಪತ್ರ ನೀಡಬೇಕು ಎಂದು ರಾಹುಲ್ ಮನವಿ ಮಾಡಿದ್ದಾರೆ.

ಡಿಪ್ಲೊಮಾಟಿಕ್ ಪಾಸ್‌ಪೋರ್ಟ್‌ ಅಂದರೆ ಏನು?

ರಾಜತಾಂತ್ರಿಕ ಪಾಸ್‌ಪೋರ್ಟ್‌ ಅಥವಾ ಡಿಪ್ಲೊಮಾಟಿಕ್ ಪಾಸ್​​ಪೋರ್ಟ್ ಅಧಿಕೃತ ಸರ್ಕಾರಿ ವ್ಯವಹಾರದ ಮೇಲೆ ವಿದೇಶಕ್ಕೆ ಪ್ರಯಾಣಿಸಲು ಬಯಸುವ ನಿರ್ದಿಷ್ಟ ವ್ಯಕ್ತಿಗಳಿಗೆ ಮಾತ್ರ ನೀಡಲಾಗುತ್ತದೆ.ರಾಜತಾಂತ್ರಿಕ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಭಾವಿಸುವ ವ್ಯಕ್ತಿಗಳು ಅದಕ್ಕೆ ಅರ್ಜಿ ಸಲ್ಲಿಸಬಹುದು. ಆದಾಗ್ಯೂ, ಅವರು ಸರ್ಕಾರ ಅಥವಾ ರಾಜ್ಯದೊಂದಿಗೆ ಹೇಗೆ ಸಂಬಂಧ ಹೊಂದಿದ್ದಾರೆ ಎಂಬುದನ್ನು ಸೂಚಿಸುವ ಕಾನೂನು ದಾಖಲೆಗಳನ್ನು ಪ್ರಸ್ತುತಪಡಿಸಬೇಕು. ರಾಜತಾಂತ್ರಿಕ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸುವ ವ್ಯಕ್ತಿಗಳು ವಿಶೇಷ ಪಾಸ್‌ಪೋರ್ಟ್‌ಗಳ ವಿತರಣೆಯನ್ನು ನಿಯಂತ್ರಿಸುವ ನಿರ್ದಿಷ್ಟ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಕಡು ಕೆಂಪು ಬಣ್ಣದ ಕವರ್ ಇರುವ ಪಾಸ್‌ಪೋರ್ಟ್ ಮಧ್ಯದಲ್ಲಿ ಭಾರತೀಯ ಲಾಂಛನವಿದ್ದು, ಮೇಲ್ಭಾಗದಲ್ಲಿ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ‘ರಾಜತಾಂತ್ರಿಕ ಪಾಸ್‌ಪೋರ್ಟ್’ ಕೆಳಭಾಗದಲ್ಲಿ ‘ರಿಪಬ್ಲಿಕ್ ಆಫ್ ಇಂಡಿಯಾ’ ಎಂದು ಬರೆದಿರುತ್ತದೆ.  ಒಬ್ಬ ವ್ಯಕ್ತಿಯು ಅರ್ಹರಾಗಿದ್ದರೆ ಮತ್ತು ಯಶಸ್ವಿಯಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಪಡೆದರೆ, ಅವನ/ಅವಳ ತಕ್ಷಣದ ಕುಟುಂಬವು ರಾಜತಾಂತ್ರಿಕ ಪಾಸ್‌ಪೋರ್ಟ್‌ಗೆ ಸಹ ಅರ್ಜಿ ಸಲ್ಲಿಸಬಹುದು, ಇದು ರಾಜತಾಂತ್ರಿಕರಿಗೆ ಪ್ರಪಂಚದಾದ್ಯಂತ ತಮ್ಮ ಕುಟುಂಬದೊಂದಿಗೆ ಮುಕ್ತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಪಾಸ್‌ಪೋರ್ಟ್‌ಗಾಗಿ ಸಲ್ಲಿಸಿರುವ ಮನವಿ ವಿರೋಧಿಸಿ ಉತ್ತರ ನೀಡಲು ಸುಬ್ರಮಣಿಯನ್ ಸ್ವಾಮಿಗೆ ದೆಹಲಿ ಕೋರ್ಟ್ ಅನುಮತಿ

ಎಷ್ಟು ವಿಧದ ಪಾಸ್‌ಪೋರ್ಟ್​​ಗಳಿವೆ?

ಸಾಮಾನ್ಯ ಪಾಸ್‌ಪೋರ್ಟ್ ಇದು ಸಾಮಾನ್ಯರ ಪಾಸ್‌ಪೋರ್ಟ್. ಈ ನೀಲಿ ಬಣ್ಣದ ಪಾಸ್‌ಪೋರ್ಟ್‌ಗಳು ವಲಸೆ ಮತ್ತು ಕಸ್ಟಮ್ಸ್ ಅಧಿಕಾರಿಗಳಿಗೆ ಸಾಮಾನ್ಯ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವ ಭಾರತದ ಸರ್ಕಾರಿ ಅಧಿಕಾರಿಗಳ ನಡುವೆ ವ್ಯತ್ಯಾಸವನ್ನು ಗುರುತಿಸಲು ಅನುವು ಮಾಡಿಕೊಡುತ್ತದೆ.

ರಾಜತಾಂತ್ರಿಕ (Diplomatic) ಪಾಸ್‌ಪೋರ್ಟ್ ಈ ಪಾಸ್‌ಪೋರ್ಟ್‌ಗಳನ್ನು ಭಾರತೀಯ ರಾಜತಾಂತ್ರಿಕರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ನೀಡಲಾಗುತ್ತದೆ. ಅಂತಹ ಪಾಸ್‌ಪೋರ್ಟ್ ಹೊಂದಿರುವವರು ವಿದೇಶಿ ಪ್ರವಾಸಗಳ ಸಮಯದಲ್ಲಿ ವಿವಿಧ ಪ್ರಯೋಜನಗಳಿಗೆ ಅರ್ಹರಾಗುತ್ತಾರೆ. ಅಲ್ಲದೆ, ಈ ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವವರು ವಲಸೆ ಔಪಚಾರಿಕತೆಗಳಿಂದ ಸುಲಭವಾಗಿ ಕ್ಲಿಯರೆನ್ಸ್ ಪಡೆಯಬಹುದು ಮತ್ತು ಸಾಮಾನ್ಯ ಜನರಿಗಿಂತ ಹೆಚ್ಚು ವೇಗವಾಗಿ ಪಡೆಯಬಹುದು.

ಆರೆಂಜ್ ಪಾಸ್‌ಪೋರ್ಟ್ ಈ ಪಾಸ್‌ಪೋರ್ಟ್‌ಗಳನ್ನು 2018 ರಿಂದ ಭಾರತೀಯ ನಾಗರಿಕರಿಗೆ ನೀಡಲಾರಂಭಿಸಿತು. ಇದು ಇತರ ಪಾಸ್‌ಪೋರ್ಟ್‌ಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. ಇದು 10 ನೇ ತರಗತಿವರೆಗೆ ಅಧ್ಯಯನ ಮಾಡಿದ ಜನರನ್ನು ಗುರುತಿಸಲು ಉದ್ದೇಶಿಸಲಾಗಿದೆ. ಸಾಮಾನ್ಯ ಪಾಸ್‌ಪೋರ್ಟ್‌ನಂತೆ, ಈ ಪಾಸ್‌ಪೋರ್ಟ್‌ಗಳು ಎಲ್ಲಾ ನಿರ್ಣಾಯಕ ವಿವರಗಳನ್ನು ನಮೂದಿಸುವ ಕೊನೆಯ ಪುಟವನ್ನು ಹೊಂದಿರುವುದಿಲ್ಲ. ಶೈಕ್ಷಣಿಕ ಅರ್ಹತೆ ಹೊಂದಿರದ ಈ ಜನರು ECR (immigration check required) ವರ್ಗದ ಅಡಿಯಲ್ಲಿ ಬರುತ್ತಾರೆ.

ಬಿಳಿ ಪಾಸ್‌ಪೋರ್ಟ್ ಅತ್ಯಂತ ಪ್ರಭಾವಿ ಸರ್ಕಾರಿ ಅಧಿಕಾರಿಗಳಿಗೆ ನೀಡುವ ಪಾಸ್‌ಪೋರ್ಟ್‌ ಇದು. ಅಧಿಕೃತ ಕೆಲಸಕ್ಕಾಗಿ ವಿದೇಶಕ್ಕೆ ಪ್ರಯಾಣಿಸುವವರಿಗೆ ಇದನ್ನು ನೀಡಲಾಗುತ್ತದೆ, ಆದರೆ ಈ ಪಾಸ್‌ಪೋರ್ಟ್ ವಲಸೆ ಮತ್ತು ಕಸ್ಟಮ್ಸ್ ಅಧಿಕಾರಿಗಳಿಗೆ ಹೋಲ್ಡರ್ ಅನ್ನು ಸರ್ಕಾರಿ ಅಧಿಕಾರಿ ಎಂದು ಗುರುತಿಸಲು ಮತ್ತು ಅವರಿಗೆ ಸರಿಯಾದ ಗೌರವ ನೀಡಲು ಸಹಕಾರಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್