The Kerala Story: ‘ದಿ ಕೇರಳ ಸ್ಟೋರಿ’ ಸಿನಿಮಾ ಯಾಕೆ ನಿಷೇಧಿಸಬೇಕು? ಪಶ್ಚಿಮ ಬಂಗಾಳ, ತಮಿಳುನಾಡು ಸರ್ಕಾರಕ್ಕೆ ನೋಟಿಸ್​​: ಸುಪ್ರೀಂ

ಪಶ್ಚಿಮ ಬಂಗಾಳದಲ್ಲಿ ಯಾಕೆ 'ದಿ ಕೇರಳ ಸ್ಟೋರಿ'ನ್ನು (The Kerala Story) ನಿಷೇಧಿಸಬೇಕು? ಎಂದು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇದರ ಜತೆಗೆ ತಮಿಳುನಾಡು ಸರ್ಕಾರಕ್ಕೂ ನೋಟಿಸ್ ನೀಡಿದೆ.

The Kerala Story: 'ದಿ ಕೇರಳ ಸ್ಟೋರಿ' ಸಿನಿಮಾ ಯಾಕೆ ನಿಷೇಧಿಸಬೇಕು? ಪಶ್ಚಿಮ ಬಂಗಾಳ, ತಮಿಳುನಾಡು ಸರ್ಕಾರಕ್ಕೆ ನೋಟಿಸ್​​: ಸುಪ್ರೀಂ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:May 12, 2023 | 3:53 PM

ದೆಹಲಿ: ಭಾರೀ ವಿವಾದವನ್ನು ಸೃಷ್ಟಿಸಿರುವ ದಿ ಕೇರಳ ಸ್ಟೋರಿಯನ್ನು  ನಮ್ಮ ರಾಜ್ಯದಲ್ಲಿ  ಪ್ರದರ್ಶನ ಮಾಡಬಾರದು ಎಂದು ಪಶ್ಚಿಮ ಬಂಗಾಳ ಹೇಳಿತ್ತು, ಆದರೆ ಇದೀಗ  ಪಶ್ಚಿಮ ಬಂಗಾಳದಲ್ಲಿ ಯಾಕೆ ‘ದಿ ಕೇರಳ ಸ್ಟೋರಿ‘ನ್ನು (The Kerala Story) ನಿಷೇಧಿಸಬೇಕು? ಎಂದು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇದರ ಜತೆಗೆ ತಮಿಳುನಾಡು ಸರ್ಕಾರಕ್ಕೂ ನೋಟಿಸ್ ನೀಡಿದೆ. ಈ ಎರಡು ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ಮಾಪಕರ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಈ ನೋಟಿಸ್​​ನ್ನು ನೀಡಿದೆ. ಪಶ್ಚಿಮ ಬಂಗಾಳದ ಜತೆಗೆ ತಮಿಳುನಾಡು ಕೂಡ  ದಿ ಕೇರಳ ಸ್ಟೋರಿಯನ್ನು ಪ್ರದರ್ಶನ ಮಾಡದಂತೆ ಆದೇಶವನ್ನು ನೀಡಿತ್ತು ಇದೀಗ ಸುಪ್ರೀಂ ಎರಡು ರಾಜ್ಯಕ್ಕೂ ಯಾಕೆ ಸಿನಿಮಾವನ್ನು ನೀಡಬೇಕು, ಇದಕ್ಕೆ ಸಂಬಂಧಿಸಿದಂತೆ ಸರಿಯಾದ ಕಾರಣ ತಿಳಿಸುವಂತೆ ನೋಟಿಸ್​​ ನೀಡಿದೆ.

ತಮಿಳುನಾಡು ಸರ್ಕಾರವು ಚಲನಚಿತ್ರವನ್ನು ನಿಷೇಧಿಸಿಲ್ಲ ಆದರೆ ಥಿಯೇಟರ್ ಮಾಲೀಕರು ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯಿಂದ ಅದನ್ನು ಪ್ರದರ್ಶಿಸದಿರಲು ನಿರ್ಧರಿಸಿದ್ದಾರೆ. ದಿ ಕೇರಳ ಸ್ಟೋರಿಯನ್ನು ನಿಷೇಧಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳ, ನಿಷೇಧಕ್ಕೆ ಕಾರಣ ನೀಡಿದೆ   ಇದು  ಪಶ್ಚಿಮ ಬಂಗಾಳದಲ್ಲಿ “ಶಾಂತಿ ಭಂಗವನ್ನು ಉಂಟುಮಾಡುವ ಸಾಧ್ಯತೆಯಿದೆ” ಎಂದು ಹೇಳಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಯಾವುದೇ ದ್ವೇಷ ಅಥವಾ ಹಿಂಸಾಚಾರದ ಘಟನೆಯನ್ನು ತಪ್ಪಿಸಲು ಚಲನಚಿತ್ರದ ಪ್ರದರ್ಶನವನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ಸೋಮವಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ ತಗ್ಗುವ ಲಕ್ಷಣವೇ ಇಲ್ಲ; 7 ದಿನಕ್ಕೆ 81 ಕೋಟಿ ರೂ. ಗಳಿಸಿದ ಕಾಂಟ್ರವರ್ಸಿ ಚಿತ್ರ

ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದಲ್ಲಿ ನಮ್ಮ ಸಿನಿಮಾವನ್ನು ಸರ್ಕಾರ ನಿಷೇಧಿಸಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದರು, ಇದರಿಂದ ನಮಗೆ ತುಂಬಾ ನಷ್ಟವಾಗುತ್ತಿದೆ ಎಂದು ತಮ್ಮ ಅರ್ಜಿಯಲ್ಲಿ ತಿಳಿಸಿದೆ.  ಕೇರಳದ 32,000 ಮಹಿಳೆಯರು ಐಸಿಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ಬಿಂಬಿಸಿರುವ ಚಲನಚಿತ್ರವನ್ನು  ಬಿಜೆಪಿಯೇತರ ರಾಜ್ಯಗಳಲ್ಲಿ  ವಿರೋಧ ವ್ಯಕ್ತಪಡಿಸುತ್ತಿದೆ. ಆದರೆ ಬಿಜೆಪಿ ಆಡಳಿತ ಇರುವ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ತೆರಿಗೆ ವಿನಾಯಿತಿಗಳನ್ನು ಪಡೆದುಕೊಂಡಿದೆ.

ಸುದೀಪ್ತೋ ಸೇನ್ ನಿರ್ದೇಶನದ ಮತ್ತು ವಿಪುಲ್ ಶಾ ನಿರ್ಮಿಸಿದ ‘ದಿ ಕೇರಳ ಸ್ಟೋರಿ’, ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಹೇಗೆ ಒತ್ತಾಯಿಸಲಾಯಿತು ಮತ್ತು ಐಸಿಸ್ ಭಯೋತ್ಪಾದಕ ಗುಂಪಿನಿಂದ ಹೇಗೆ ಸೇರಿಸಿಕೊಳ್ಳತ್ತಾರೆ ಎಂಬುದನ್ನು ಇದರಲ್ಲಿ ತಿಳಿಸಲಾಗಿದೆ. ಇದೀಗ ಈ ಸಿನಿಮಾ ರಾಜಕೀಯದಲ್ಲಿ ಭಾರೀ  ಬಿರುಗಾಳಿಯನ್ನು ಎಬ್ಬಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Fri, 12 May 23

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು