ಪಾಕಿಸ್ತಾನ ಜತೆ ಮಾತುಕತೆ ನಡೆಸುವ ಯೋಜನೆ ಇಲ್ಲ, ನಾವೇಕೆ ಮಾತುಕತೆ ನಡೆಸಬೇಕು?: ಅಮಿತ್ ಶಾ

ನಾವು ಪಾಕಿಸ್ತಾನ ಜತೆ ಮಾತನಾಡಬೇಕು ಎಂದು ಕೆಲವರು ಹೇಳುತ್ತಿದ್ದಾರೆ. ನಾವೇಕೆ ಪಾಕಿಸ್ತಾನ ಜತೆ ಮಾತನಾಡಬೇಕು? ನಾವು ಬರಾಮುಲ್ಲಾದ ಜನರಲ್ಲಿ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರಲ್ಲಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಜತೆ ಮಾತುಕತೆ ನಡೆಸುವ ಯೋಜನೆ ಇಲ್ಲ, ನಾವೇಕೆ ಮಾತುಕತೆ ನಡೆಸಬೇಕು?: ಅಮಿತ್ ಶಾ
ಅಮಿತ್ ಶಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 05, 2022 | 7:28 PM

ಬರಾಮುಲ್ಲಾ: ಪಾಕಿಸ್ತಾನದೊಂದಿಗೆ (Pakistan) ಯಾವುದೇ ಮಾತುಕತೆ ನಡೆಸುವ ಯೋಜನೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬುಧವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ಕಿತ್ತೊಗೆಯುತ್ತದೆ. ಇದನ್ನು ದೇಶದ ಶಾಂತಿಯುತ ಪ್ರದೇಶವನ್ನಾಗಿ ಮಾಡಲಾಗುವುದು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಹೆಚ್ಚಳದಿಂದಾಗಿ ಇಲ್ಲಿನ ಯುವಕರಿಗೆ ಕೆಲಸ ಸಿಕ್ಕಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ನಾವು ಪಾಕಿಸ್ತಾನ ಜತೆ ಮಾತನಾಡಬೇಕು ಎಂದು ಕೆಲವರು ಹೇಳುತ್ತಿದ್ದಾರೆ. ನಾವೇಕೆ ಪಾಕಿಸ್ತಾನ ಜತೆ ಮಾತನಾಡಬೇಕು? ನಾವು ಬರಾಮುಲ್ಲಾದ ಜನರಲ್ಲಿ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರಲ್ಲಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರಗಳ ಮೇಲೆ ಟೀಕಾ ಪ್ರಹಾರ ನಡೆಸಿದ ಶಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಅವ್ಯವಸ್ಥೆ ಸೃಷ್ಟಿಸಿದ್ದಕ್ಕಾಗಿ ಅಬ್ದುಲ್ಲಾ, ಮುಫ್ತಿ ಮತ್ತು ಗಾಂಧಿ ಕುಟುಂಬವನ್ನು ದೂಷಿಸಬೇಕು ಎಂದು ಹೇಳಿದ್ದಾರೆ. ಕಳೆದ 70 ವರ್ಷಗಳಲ್ಲಿ ಮುಫ್ತಿ ಮತ್ತು ಅವರ ಸಂಗಡಿಗರು, ಅಬ್ದುಲ್ಲಾ ಮತ್ತು ಅವರ ಮಗ  ಇಲ್ಲಿ ಅಧಿಕಾರದಲ್ಲಿದ್ದರು. ಆದರೆ 1 ಲಕ್ಷ ವಸತಿರಹಿತ ಜನರಿಗೆ ಮನೆ ನೀಡಲು ಸಾಧ್ಯವಾಗಿಲ್ಲ, 2014- 2022ರ ಅವಧಿಯಲ್ಲಿ ಮೋದಿಜಿ ಈ 1 ಲಕ್ಷ ಜನರಿಗೆ ವಸತಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಮೋದಿಜೀ ಅವರ ಆಡಳಿತದ ಮಾಡೆಲ್ ಅ ಭಿವೃದ್ಧಿ ಮತ್ತು ಉದ್ಯೋಗವನ್ನು ಸೃಷ್ಟಿಸುತ್ತದೆ . ಅದೇ ವೇಳೆ ಗುಪ್ಕಾರ್ ಮಾಡೆಲ್ ಯುವ ಜನಾಂಗದ ಕೈಯಲ್ಲಿ ಕಲ್ಲು ಮತ್ತು ಗನ್ ನೀಡುತ್ತದೆ. ಮೋದಿಯವರ ಮಾಡೆಲ್​​ಗೂ ಗುಪ್ಕಾರ್ ಮಾಡೆಲ್​​ಗೂ ತುಂಬಾನೇ ವ್ಯತ್ಯಾಸ ಇದೆ ಎಂದು ಶಾ ಹೇಳಿದ್ದಾರೆ.

ಮೋದಿಜೀ ಅವರ ಆಡಳಿತದ ಮಾಡೆಲ್ಅಭಿವೃದ್ಧಿ ಮತ್ತು ಉದ್ಯೋಗವನ್ನು ಸೃಷ್ಟಿಸುತ್ತದೆ . ಅದೇ ವೇಳೆ ಗುಪ್ಕಾರ್ ಮಾಡೆಲ್ ಯುವ ಜನಾಂಗದ ಕೈಯಲ್ಲಿ ಕಲ್ಲು ಮತ್ತು ಗನ್ ನೀಡುತ್ತದೆ. ಮೋದಿಯವರ ಮಾಡೆಲ್ ಗೂ ಗುಪ್ಕಾರ್ ಮಾಡೆಲ್ ಗೂ ತುಂಬಾನೇ ವ್ಯತ್ಯಾಸ ಇದೆ ಎಂದು ಶಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಚುನಾವಣೆ ಬಗ್ಗೆ ಮಾತನಾಡಿದ ಗೃಹ ಸಚಿವರು, ಮತದಾರರ ಪಟ್ಟಿಯನ್ನು ಕಂಪೈಲ್ ಮಾಡುವುದನ್ನು ಪೂರ್ಣಗೊಳಿಸಿದ ತಕ್ಷಣ, ಜಮ್ಮು ಮತ್ತು ಕಾಶ್ಮೀರದಲ್ಲಿ “ಸಂಪೂರ್ಣ ಪಾರದರ್ಶಕತೆಯೊಂದಿಗೆ” ಚುನಾವಣೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಶ್ರೀನಗರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇಂದು ಅವರು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡುವ ಕೊನೆಯ ದಿನವಾಗಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಅಮಿತಾ ಶಾ ಅವರದ್ದು ಇದು ಎರಡನೇ ಭೇಟಿಯಾಗಿದೆ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್