AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೆ ಮುನ್ನವೇ ಸಮನ್ಸ್ ಏಕೆ?: ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ

ಸಮನ್ಸ್ ವಿಷಯದಲ್ಲಿ ಬಿಜೆಪಿ ವಿರುದ್ದ ವಾಗ್ದಾಳಿ ಮಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, "ಅವರು ಈ ಕಾಲ್ಪನಿಕ ಪ್ರಕರಣದಲ್ಲಿ ಹಲವಾರು ಎಎಪಿ ನಾಯಕರನ್ನು ಜೈಲಿಗೆ ಹಾಕಿದ್ದಾರೆ, ಯಾರ ವಿರುದ್ಧವೂ ಯಾವುದೇ ಸಾಕ್ಷ್ಯಗಳಿಲ್ಲ ಮತ್ತು ಯಾವುದನ್ನೂ ಸಾಬೀತುಪಡಿಸಲಾಗಿಲ್ಲ ಎಂದು ಹೇಳಿದ್ದಾರೆ.

ಚುನಾವಣೆಗೆ ಮುನ್ನವೇ ಸಮನ್ಸ್ ಏಕೆ?: ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ
ಅರವಿಂದ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 04, 2024 | 2:26 PM

Share

ದೆಹಲಿ ಜನವರಿ 04: ಇಂದು(ಗುರುವಾರ) ಜಾರಿ ನಿರ್ದೇಶನಾಲಯವು (Enforcement Directorate)  ತನ್ನನ್ನು ಬಂಧಿಸುವ ಸಾಧ್ಯತೆಯಿದೆ ಎಂಬ ಅವರ ಪಕ್ಷದ ಹೇಳಿಕೆಗಳ ನಡುವೆ, ದೆಹಲಿ (Delhi) ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಲೋಕಸಭೆ ಚುನಾವಣೆಗೆ (Lok Sabha elections)ಪ್ರಚಾರ ಮಾಡದಂತೆ ನನಗೆ ಸಮನ್ಸ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದ ಅವರು, ಬಿಜೆಪಿ ತನ್ನನ್ನು ಬಂಧಿಸಲು ಯತ್ನಿಸುತ್ತಿದೆ ಎಂಬ ತಮ್ಮ ಪಕ್ಷದ ಹೇಳಿಕೆಯನ್ನು ಪುನರುಚ್ಚರಿಸಿದರು.

ಕಳೆದ ಎರಡು ವರ್ಷಗಳಲ್ಲಿ ಮದ್ಯ ನೀತಿ ಹಗರಣದ ಬಗ್ಗೆ ನೀವು ಹಲವಾರು ಬಾರಿ ಕೇಳಿರಬಹುದು. ಈ ಎರಡು ವರ್ಷಗಳಲ್ಲಿ, ಬಿಜೆಪಿಯ ಎಲ್ಲಾ ಏಜೆನ್ಸಿಗಳು ಹಲವಾರು ದಾಳಿಗಳನ್ನು ನಡೆಸಿ ಹಲವಾರು ಜನರನ್ನು ಬಂಧಿಸಿವೆ, ಆದರೆ ಅವರಿಗೆ ಭ್ರಷ್ಟಾಚಾರದ ಮೊತ್ತವನ್ನಾಲೀ ಒಂದೇ ಒಂದು ಪೈಸೆ ಕಂಡುಹಿಡಿಯಲು ಸಾಧ್ಯವಾಗಿಲ್ಲ. ನಿಜವಾಗಿ ಭ್ರಷ್ಟಾಚಾರ ನಡೆದಿದ್ದರೆ, ಎಲ್ಲ ಕೋಟಿಗಳು ಎಲ್ಲಿ ಹೋದವು? ಹಣವೆಲ್ಲ ಗಾಳಿಗೆ ಮಾಯವಾಗಿ ಹೋಯಿತೇ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಹೇಳಿದ ಕೇಜ್ರಿವಾಲ್, ಹಾಗಾಗದೇ ಇದ್ದಿದ್ದರೆ ಹಣ ಸಿಗುತ್ತಿತ್ತು ಎಂದಿದ್ದಾರೆ. ಜಾರಿ ನಿರ್ದೇಶನಾಲಯ ನೀಡಿದ ಮೂರು ಸಮನ್ಸ್‌ಗಳನ್ನು ಕೇಜ್ರಿವಾಲ್ ತಪ್ಪಿಸಿಕೊಂಡಿದ್ದಾರೆ. ಸಮನ್ಸ್ ವಿಷಯದಲ್ಲಿ ಬಿಜೆಪಿ ವಿರುದ್ದ ವಾಗ್ದಾಳಿ ಮಾಡಿದ ಕೇಜ್ರಿವಾಲ್, “ಅವರು ಈ ಕಾಲ್ಪನಿಕ ಪ್ರಕರಣದಲ್ಲಿ ಹಲವಾರು ಎಎಪಿ ನಾಯಕರನ್ನು ಜೈಲಿಗೆ ಹಾಕಿದ್ದಾರೆ, ಯಾರ ವಿರುದ್ಧವೂ ಯಾವುದೇ ಸಾಕ್ಷ್ಯಗಳಿಲ್ಲ ಮತ್ತು ಯಾವುದನ್ನೂ ಸಾಬೀತುಪಡಿಸಲಾಗಿಲ್ಲ. ಯಾರನ್ನಾದರೂ ಜೈಲಿಗೆ ಹಾಕುತ್ತಿದ್ದಾರೆ. ಈಗ ಬಿಜೆಪಿ ನನ್ನನ್ನು ಬಂಧಿಸಲು ಬಯಸಿದೆ. ನನ್ನ ದೊಡ್ಡ ಆಸ್ತಿ ನನ್ನ ಪ್ರಾಮಾಣಿಕತೆ. ಅವರು ಸುಳ್ಳು ಆರೋಪಗಳನ್ನು ಹೊರಿಸಿ ಆಧಾರರಹಿತ ಸಮನ್ಸ್‌ಗಳನ್ನು ನೀಡುವ ಮೂಲಕ ನನ್ನ ಪ್ರತಿಷ್ಠೆಗೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್​​ಗೆ ಇಡಿ ಸಮನ್ಸ್

ನನ್ನ ವಕೀಲರು ಸಮನ್ಸ್ ಕಾನೂನುಬಾಹಿರ ಎಂದು ನನಗೆ ಹೇಳಿದ್ದಾರೆ. ನಾನು ಜಾರಿ ನಿರ್ದೇಶನಾಲಯಕ್ಕೆ ಪತ್ರಗಳಲ್ಲಿ ವಿವರವಾಗಿ ಇದಕ್ಕೆ ಕಾರಣಗಳನ್ನು ನೀಡಿದ್ದೇನೆ. ಆದರೆ ಅವರು ಒಂದೇ ಒಂದು ಕಾರಣಕ್ಕೆ ಪ್ರತಿಕ್ರಿಯಿಸಿಲ್ಲ, ಅವರ ಬಳಿ ಯಾವುದೇ ಉತ್ತರವಿಲ್ಲ ಎಂದು ಇದು ಸೂಚಿಸುತ್ತದೆ.ಬಿಜೆಪಿಯ ಉದ್ದೇಶ ತನಿಖೆಯಲ್ಲ, ನಾನು ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಬಾರದು ಎಂದು ಖಚಿತಪಡಿಸಿಕೊಳ್ಳಲು ಅವರು ಬಯಸುತ್ತಾರೆ. ಎರಡು ವರ್ಷಗಳಿಂದ ತನಿಖೆ ನಡೆಯುತ್ತಿದ್ದರೂ ಚುನಾವಣೆಗೂ ಮುನ್ನವೇ ನನಗೆ ಸಮನ್ಸ್ ನೀಡಿದ್ದಾರೆ. ಅವರು ನನ್ನನ್ನು ಮೊದಲು ಏಕೆ ಕರೆಯಲಿಲ್ಲ ಎಂದು ಕೇಜ್ರಿವಾಲ್ ಕೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್