AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆಯೇ ಪಹಲ್ಗಾಮ್ ದಾಳಿಯ ಉಗ್ರರನ್ನು ಕೊಂದಿದ್ದೇಕೆ?; ಆಪರೇಷನ್ ಮಹಾದೇವ್ ಬಗ್ಗೆ ಅಖಿಲೇಶ್ ಯಾದವ್ ಪ್ರಶ್ನೆ

ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಕದನವಿರಾಮದ ನಿರ್ಧಾರವನ್ನು ಪ್ರಶ್ನಿಸಿದ ಅಖಿಲೇಶ್ ಯಾದವ್, 'ಪಾಕಿಸ್ತಾನಕ್ಕೆ ಪಾಠ ಕಲಿಸಬಹುದಿತ್ತು' ಎಂದು ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಅವರು "ಗುಪ್ತಚರ ವೈಫಲ್ಯ" ಎಂದು ಟೀಕಿಸಿದ್ದಾರೆ. ನಿನ್ನೆ ಎನ್​ಕೌಂಟರ್​​ನಲ್ಲಿ ಪಹಲ್ಗಾಮ್ ದಾಳಿಯ ಮೂವರು ಉಗ್ರರ ಹತ್ಯೆಯ ಬಗ್ಗೆಯೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ನಿನ್ನೆಯೇ ಪಹಲ್ಗಾಮ್ ದಾಳಿಯ ಉಗ್ರರನ್ನು ಕೊಂದಿದ್ದೇಕೆ?; ಆಪರೇಷನ್ ಮಹಾದೇವ್ ಬಗ್ಗೆ ಅಖಿಲೇಶ್ ಯಾದವ್ ಪ್ರಶ್ನೆ
Akhilesh Yadav
ಸುಷ್ಮಾ ಚಕ್ರೆ
|

Updated on: Jul 29, 2025 | 3:55 PM

Share

ನವದೆಹಲಿ, ಜುಲೈ 29: ಏಪ್ರಿಲ್ 22ರ ಪಹಲ್ಗಾಮ್ ಹತ್ಯಾಕಾಂಡದ (Pahalgam Terror Attack) ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆ. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿದಂತೆ ಈ ದಾಳಿಗೆ ಕಾರಣರಾದ ಮೂವರು ಪಾಕಿಸ್ತಾನಿ ಉಗ್ರರನ್ನು ಕೊಂದಿದ್ದೇವೆ ಎಂದು ಅಮಿತ್ ಶಾ ಇಂದು ಸದನದಲ್ಲಿ ಘೋಷಿಸಿದ್ದಾರೆ. ಈ ವೇಳೆ ಪ್ರಶ್ನೆ ಮಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಪಹಲ್ಗಾಮ್ ಭಯೋತ್ಪಾದಕರನ್ನು ಕೊಂದ ಆಪರೇಷನ್ ಮಹಾದೇವ್‌ ಕಾರ್ಯಾಚರಣೆಯ ಸಮಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಅಧಿವೇಶನದಲ್ಲಿ ವಿಪಕ್ಷಗಳ ಬಾಯಿ ಮುಚ್ಚಿಸಬೇಕೆಂಬ ಕಾರಣಕ್ಕೇ ಕಾದು ನಿನ್ನೆ ಆ ಮೂವರು ಉಗ್ರರ ಹತ್ಯೆ ಮಾಡಿದ್ದೀರಾ? ಎಂದು ಅಖಿಲೇಶ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ದಾಳಿ ನಡೆದು ಇಷ್ಟು ತಿಂಗಳಾದರೂ ನಿನ್ನೆಯೇ ಆ ಉಗ್ರರನ್ನು ಹತ್ಯೆ ಮಾಡಿದ್ದು ಏಕೆ? ಆಪರೇಷನ್ ಮಹಾದೇವ್ ಏಪ್ರಿಲ್ 22ರಂದೇ ಆರಂಭವಾಗಿತ್ತು ಎನ್ನುವುದಾದರೆ ಇಷ್ಟು ದಿನ ಕಾದಿದ್ದು ಏಕೆ? ಇದರ ಹಿಂದೆಯೂ ರಾಜಕೀಯ ಷಡ್ಯಂತ್ರವಿದೆ ಎಂಬ ಅನುಮಾನವಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 9 ಗುರಿ, ಪಾಕಿಸ್ತಾನದಲ್ಲಿ 100ಕ್ಕೂ ಹೆಚ್ಚು ಉಗ್ರರ ಹತ್ಯೆ; ಆಪರೇಷನ್ ಸಿಂಧೂರ್ ಕುರಿತು ಸಂಸತ್​​ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ

“ಎನ್‌ಕೌಂಟರ್ ನಿನ್ನೆಯೇ ಏಕೆ ಸಂಭವಿಸಿತು? ನೀವು ತಂತ್ರಜ್ಞಾನದ ಬಗ್ಗೆ ಅಷ್ಟೊಂದು ಪರಿಣತರಾಗಿದ್ದರೆ ಪುಲ್ವಾಮಾ ದಾಳಿಯ ಸಮಯದಲ್ಲಿ ಆರ್‌ಡಿಎಕ್ಸ್ ಸಾಗಿಸಲು ಬಳಸಿದ ಕಾರನ್ನು ನೀವು ಏಕೆ ಟ್ರ್ಯಾಕ್ ಮಾಡಿಲ್ಲ? ಪುಲ್ವಾಮಾದಲ್ಲಿ ಇಲ್ಲಿಯವರೆಗೆ ಆರ್‌ಡಿಎಕ್ಸ್ ಸಾಗಿಸುತ್ತಿದ್ದ ವಾಹನವನ್ನು ಏಕೆ ಹಿಡಿಯಲಾಗಿಲ್ಲ? ಇಂದಿಗೂ ಬಿಜೆಪಿ ಬಯಸಿದರೆ ಉಗ್ರರ ವಾಹನವು ಪುಲ್ವಾಮಾಗೆ ಯಾವ ಮಾರ್ಗದಿಂದ ಬಂದಿದೆ ಎಂಬುದನ್ನು ಅವರು ಕಂಡುಹಿಡಿಯಬಹುದು” ಎಂದು ಕನ್ನೌಜ್ ಸಂಸದ ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್ ಉಗ್ರರ ಹುಟ್ಟಡಗಿಸಲು ಭಾರತೀಯ ಸೇನೆ ಆಪರೇಷನ್ ಮಹಾದೇವ್ ಎಂದು ಹೆಸರಿಟ್ಟಿದ್ದೇಕೆ?

ಸೋಮವಾರ ಭಾರತೀಯ ಸಶಸ್ತ್ರ ಪಡೆಗಳು ಏಪ್ರಿಲ್ 22ರ ಪಹಲ್ಗಾಮ್ ದಾಳಿಯ ಹಿಂದಿನ ಮೂವರು ಲಷ್ಕರ್ ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದವು. ಆಪರೇಷನ್ ಮಹಾದೇವ್‌ನಲ್ಲಿ ಕೊಲ್ಲಲ್ಪಟ್ಟವರಲ್ಲಿ ಲಷ್ಕರ್‌ನ ಪ್ರಮುಖ ಕಮಾಂಡರ್ ಸುಲೇಮಾನ್ ಶಾ ಅಲಿಯಾಸ್ ಹಾಶಿಮ್ ಮೂಸಾ ಕೂಡ ಸೇರಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ